Homeಎಕಾನಮಿಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದ ಕೊರತೆ ಸರಿದೂಗಿಸಲು ಪರಿಹಾರಕ್ಕಾಗಿ ಕೇಂದ್ರ ನೀಡಿರುವ ಆಯ್ಕೆಗಳು ಸ್ವೀಕಾರಾರ್ಹವಲ್ಲ ಎಂದು ಕೇರಳ ಹೇಳಿದೆ. “ಜಿಎಸ್‌ಟಿ ಆದಾಯದ ಕೊರತೆಯನ್ನು ನೀಗಿಸಲು ರಾಜ್ಯಗಳು ಸಾಲ ಪಡೆಯುವ ಪ್ರಸ್ತಾಪವನ್ನು ರಾಜ್ಯವು ತಿರಸ್ಕರಿಸುತ್ತದೆ” ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ಹೇಳಿದ್ದಾರೆ.

ಒಟ್ಟು 3 ಲಕ್ಷ ಕೋಟಿ ರೂಗಳ ಕುಸಿತವನ್ನು ಕೇಂದ್ರ ಎದುರಿಸುತ್ತಿದೆ. ಕೇವಲ 65000 ಕೋಟಿ ಸೆಸ್ ಸಂಗ್ರಹವಾಗುವ ನಿರೀಕ್ಷೆಯಿದ್ದು ಉಳಿದ 2.35 ಲಕ್ಷ ಕೋಟಿ ಕೊರತೆ ಬೀಳುತ್ತದೆ. ಹಾಗಾಗಿ ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022ರ ನಂತರ ಕೇಂದ್ರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ಕೇಂದ್ರವು ರಾಜ್ಯಗಳ ಮುಂದಿಟ್ಟಿದೆ.

ಆರ್‌ಬಿಐ ನಿಂದ ಸಾಲ ಪಡೆದರೆ ಅಸಲು ಬಡ್ಡಿ ಎರಡನ್ನು ಕೇಂದ್ರ ತೀರಿಸಲಿದೆ. ಒಂದು ವೇಳೆ ಹೊರಗಿನಿಂದ 2.35 ಲಕ್ಷ ಸಾಲ ಪಡೆದರೆ ಕೇಂದ್ರ ಅಸಲನ್ನು ಮಾತ್ರ ತೀರಿಸುವುದಾಗಿಯೂ, ರಾಜ್ಯಗಳು ಬಡ್ಡಿ ಭರಸಬೇಕೆಂದು ಕೇಂದ್ರ ಹೇಳಿದೆ.

ಕೇಂದ್ರದ ಈ ಎರಡೂ ಆಯ್ಕೆಗಳನ್ನು ಬಿಜೆಪಿಯೇತರ ರಾಜ್ಯಗಳು ವಿರೋಧಿಸಿವೆ. ಕಾನೂನುಬದ್ಧವಾಗಿ ನ್ಯಾಯಯುತವಾಗಿ ನಮ್ಮ ಪಾಲಿನ ತೆರಿಗೆ ಹಣ ನೀಡಿ ಎಂದು ಪಟ್ಟು ಹಿಡಿದಿವೆ. ಕೇರಳವಂತು ಕೇಂದ್ರ ಹಣ ನೀಡದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.

“ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರದ ಉದ್ದೇಶಗಳನ್ನು ನಾವು ಈಗ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇವೆ. ಕೇಂದ್ರದ ‘ಲಾಕ್, ಸ್ಟಾಕ್ ಮತ್ತು ಬ್ಯಾರೆಲ್’ ನೀತಿಯನ್ನು ತಿರಸ್ಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಆತ್ಮನಿರ್ಭರ್ ಅನ್ನು ಯಾವುದೇ ರಾಜ್ಯವು ಒಪ್ಪಿಕೊಂಡಿಲ್ಲ. ಸಾಕು, ರಾಜ್ಯಗಳು ತನ್ನ ಹಕ್ಕುಗಳಿಗಾಗಿ ಇನ್ನು ರಾಜಿಯಾಗಬಾರದು. ಜಿಎಸ್‌ಟಿ ಪರಿಹಾರ ನಮ್ಮ ಸಾಂವಿಧಾನಿಕ ಹಕ್ಕು” ಐಸಾಕ್ ಟ್ವೀಟ್ ಮಾಡಿದ್ದಾರೆ.

41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದು ದೇವರ ಕಾರ್ಯ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ಅಸಹಾಯಕತೆ ಪ್ರದರ್ಶಿಸಿದ್ದರು.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಇನ್ನು ರಾಜ್ಯಗಳು ದೊಡ್ಡ ಮೊತ್ತದ ಸಾಲ ಪಡೆಯಲು ಮತ್ತು ಅದರ ಬಡ್ಡಿ ಕಟ್ಟಲು ಸಾಧ್ಯವಿಲ್ಲ ಎಂದು ಘೋಷಿಸಿವೆ. ಹಾಗಾಗಿ ಆರ್‌ಬಿಐ ಮತ್ತೆ ನೇರವಾಗಿ ಕೇಂದ್ರಕ್ಕೆ ಸಾಲ ಕೊಡುವ ನೀರಿಕ್ಷೆಯಿದೆ ಎನ್ನಲಾಗುತ್ತಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು, “ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ” ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರೂ “ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ” ಎಂದು ಸರ್ಕಾರ ವಾದಿಸಿದೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...