Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...