Homeಮುಖಪುಟಮೋದಿ ನೇತೃತ್ವದ ನೂತನ ಎನ್‌ಡಿಎ ಸರಕಾರದಲ್ಲಿ ಮುಸ್ಲಿಮರಿಗೆ ಸಿಗದ ಪ್ರಾತಿನಿಧ್ಯ

ಮೋದಿ ನೇತೃತ್ವದ ನೂತನ ಎನ್‌ಡಿಎ ಸರಕಾರದಲ್ಲಿ ಮುಸ್ಲಿಮರಿಗೆ ಸಿಗದ ಪ್ರಾತಿನಿಧ್ಯ

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದಲ್ಲಿ ಎನ್‌ಡಿಎ 3.0 ಸರಕಾರವನ್ನು ರಚಿಸಿದೆ. ಆದರೆ ನೂತನ ಸರಕಾರದಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ನೀಡಲಾಗಿಲ್ಲ. ಇದು ಬಿಜೆಪಿ ಮುಸ್ಲಿಮರನ್ನು ಕಡೆಗಣಿಸಿರುವುದನ್ನು ಸ್ಪಷ್ಟಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರದಲ್ಲಿ ಮುಸ್ಲಿಂ ಪ್ರಾತಿನಿಧ್ಯದ ಕೊರತೆಯನ್ನು ಕೇರಳ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥ ಕೆ ಸುಧಾಕರನ್ ಒತ್ತಿ ಹೇಳಿದ್ದು, ಇದು ಅತ್ಯಂತ ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.

ಮೂರನೇ ಅವಧಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಮುಸ್ಲಿಂ ಜನಸಂಖ್ಯೆಯನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ, ಬಿಜೆಪಿಯ ಒಬ್ಬ ಸಂಸದರೂ ಮುಸ್ಲಿಂ ಸಮುದಾಯದವರಿಲ್ಲ, ಇದು ಅತ್ಯಂತ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಮೋದಿಯನ್ನು ಟೀಕಿಸಿದ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕೆ ಸುಧಾಕರನ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರಾತಿನಿಧ್ಯ ಸಾಮಾನ್ಯ ವಿಷಯವಾಗಿದೆ. ಆದರೆ ಎನ್‌ಡಿಎ ಸರಕಾರದಲ್ಲಿ ಇದು ಕಂಡು ಬಂದಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮೋದಿ ನೀಡಿರುವ ವಿವಾದಾತ್ಮಕ ಹೇಳಿಕೆಗಳನ್ನು ಉಲ್ಲೇಖಿಸಿದ ಕೆ ಸುಧಾಕರನ್ ಅವರು ದ್ವೇಷಪೂರಿತ ಭಾಷಣಗಳನ್ನು ಮಾಡುವ ಮೂಲಕ ಮೋದಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಇಂದು ದೇಶದಲ್ಲಿ ಪ್ರಬಲ ಪ್ರತಿಪಕ್ಷವಿದೆ ಎಂದು ಹೇಳಿದ ಸುಧಾಕರನ್, ಇಂಡಿಯಾ ಮೈತ್ರಿಕೂಟ ಮತ್ತು ಅದನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಎಲ್ಲ ಜನರನ್ನು ಒಟ್ಟುಗೂಡಿಸಿ ಮುನ್ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ವಿಮಾನ ಅಪಘಾತದಲ್ಲಿ ಮಲಾವಿ ದೇಶದ ಉಪಾಧ್ಯಕ್ಷರು ಸೇರಿ 10 ಮಂದಿ ಮೃತ್ಯು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...