Homeಕರೋನಾ ತಲ್ಲಣಆಮ್ಲಜನಕ ಕೊರತೆ; ಕಲಬುರ್ಗಿಯಲ್ಲಿ ಮತ್ತೊಂದು ದುರಂತ - ಸೋಂಕು ವಿಷಮಗೊಂಡಿದ್ದರಿಂದ ಸಾವು ಎಂದ ಸಚಿವ ನಿರಾಣಿ

ಆಮ್ಲಜನಕ ಕೊರತೆ; ಕಲಬುರ್ಗಿಯಲ್ಲಿ ಮತ್ತೊಂದು ದುರಂತ – ಸೋಂಕು ವಿಷಮಗೊಂಡಿದ್ದರಿಂದ ಸಾವು ಎಂದ ಸಚಿವ ನಿರಾಣಿ

- Advertisement -
- Advertisement -

ಆಮ್ಲಜನಕ ಕೊರತೆಯಿಂದ ಚಾಮರಾಜನಗರದಲ್ಲಿ 24 ಜನರು ಮೃತಪಟ್ಟಿದ್ದ ಸುದ್ದಿಗೆ ಸೋಮವಾರ ರಾಜ್ಯವೆ ಬೆಚ್ಚಿ ಬಿದ್ದಿತ್ತು. ಇದೀಗ ಮತ್ತೆ ಆಮ್ಲಜನಕ ಕೊರತೆಯಿಂದ 4 ಕೊರೊನಾ ಸೋಂಕಿತರು ತಡರಾತ್ರಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭವಿಸಿದೆ.

ಚಾಮರಾಜ ನಗರದಲ್ಲಿ ನಿನ್ನೆಯಷ್ಟೇ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಕೂಡಾ ನಿನ್ನೆ ಐದು ಜನರು ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶನಿವಾರದಂದು ಕೂಡಾ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೀಗ ಜಿಲ್ಲೆಯಲ್ಲಿ ಮತ್ತೆ ಪ್ರಾಣವಾಯು ಕೊರತೆಯಿಂದ ನಾಲ್ವರು ಅಸುನೀಗಿದ್ದಾರೆ.

ಕಳೆದ ಮೂರು ದಿನದಿಂದ ಒಟ್ಟು 12 ರೋಗಿಗಳು ಕಲಬುರ್ಗಿ ಜಿಲ್ಲೆಯೊಂದರಲ್ಲೇ ಆಮ್ಲಜನಕ ಕೊರತೆಯಿಂದಾಗಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಜಿಲ್ಲೆಯ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ದಾಖಲಾಗಿದ್ದು, ಸೋಮವಾರದಂದು ಆರು ಸಿಲಿಂಡರ್‌ ಮಾತ್ರ ಇದ್ದವು ಎನ್ನಲಾಗಿದೆ. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತಾದರೂ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್‌ಗಳು ಖಾಲಿ ಆಗಿದ್ದು ನಾಲ್ವರು ಪ್ರಾಣ ಬಿಟ್ಟಿದ್ದಾರೆ.

“ಸಾಕಷ್ಟು ಆಮ್ಲಜನಕದ ಸಿಲಿಂಡರ್‌‌‌‌ಗಳು ಕೂಡಾ ಇಲ್ಲ. ಅಲ್ಲಿರುವ ಸಿಲಿಂಡರ್‌ ಖಾಲಿಯಾಗುತ್ತಿದ್ದಂತೆ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ಹೇಳುತ್ತಿದ್ದಾರೆ. ಸರ್ಕಾರಕ್ಕೆ ಗಂಭೀರತೆ ಇಲ್ಲ. ತಾಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್‌ನ್ನೆ ಇಲ್ಲ. ಅಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು” ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಆಮ್ಲಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್‌ ಇವೆ. ಸೋಂಕು ವಿಷಮಗೊಂಡಿದ್ದರಿಂದ ಸೋಮವಾರ ಮೂವರು ಮತ್ತು ಮಂಗಳವಾರ ಒಬ್ಬರು ಮೃತಪಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...