Homeಕರೋನಾ ತಲ್ಲಣಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

- Advertisement -
- Advertisement -

ಉತ್ತರಪ್ರದೇಶದಲ್ಲಿ ಆಮ್ಲಜನಕ ಸಿಲಿಂಡರ್ ಪಡೆಯಲು ಜನರು ಹತಾಶರಾಗಿ ಯತ್ನಿಸುತ್ತಿರುವ, ಬೆಡ್‌ಗಳು ಸಿಗದೇ ರೋಗಿಗಳು ಪರದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಿಕ್ಕಿಯಿರುತ್ತಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವರದೇ ಪಕ್ಷದ ನಾಯಕರು ತೀವ್ರ ವಾಗ್ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಕಳೆದ ಒಂದು ವಾರದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಉತ್ತರಪ್ರದೇಶದ ಮೂವರು ಬಿಜೆಪಿ ಶಾಸಕರು ಕೋವಿಡ್‌ಗೆ ಬಲಿಯಾಗಿದ್ದು, ಮತ್ತು ನಿನ್ನೆ ಆಮ್ಲಜನಕ ಕೊರತೆಯಿಂದ 7 ಸಾರ್ವಜನಿಕರು ಅಸುನೀಗಿರುವುದು ಈ ಆಕ್ರೋಶಕ್ಕೆ ಕಾರಣವಾಗಿದೆ.

‘ಆಮ್ಲಜನಕ ಅಥವಾ ರೆಮ್ಡೆಸಿವಿರ್ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವ ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಲಖನೌದಿಂದ 300 ಕಿಲೋಮೀಟರ್ ದೂರದಲ್ಲಿರುವ ಗೋರಖ್‌ಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ರೆಮ್‌ಡೆಸಿವಿರ್ ವಿತರಿಸಲಾಯಿತು. ಗೋರಖ್‌ಪುರದ ಡಿಎಂ ಕಚೇರಿಯ ಹೊರಗೆ ಔಷಧಿಗಾಗಿ ಜನರ ದೀರ್ಘ ಸರತಿ ಕಾಣಿಸಿಕೊಂಡಿತು. ಚುಚ್ಚುಮದ್ದಿನ ಎರಡು ಬಾಟಲುಗಳನ್ನು ಪಡೆಯಲು ಸುಮಾರು 24 ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಜನರು ಹೇಳಿದ್ದನ್ನೂ ಉಲ್ಲೇಖಿಸಿರುವ ಉತ್ತರಪ್ರದೇಶ ಬಿಜೆಪಿ ನಾಯಕರು ಯೋಗಿ ಸರ್ಕಾರದ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಆಗ್ರಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಾಯಿಗೆ ಆಮ್ಲಜನಕ ಸಿಲಿಂಡರ್ ಪಡೆಯಲು ಒಬ್ಬ ವ್ಯಕ್ತಿಯು ಪೊಲೀಸರ ಪಾದಕ್ಕೆ ಬೀಳುತ್ತಾರೆ. ಅದೇ ರೀತಿ, ಮತ್ತೊಂದು ವೀಡಿಯೊದಲ್ಲಿ, ನೋಯ್ಡಾದಲ್ಲಿ ಮಹಿಳೆಯೊಬ್ಬರು ರೆಮ್ಡೆಸಿವಿಯರ್ ಪಡೆಯಲು ಆರೋಗ್ಯ ಅಧಿಕಾರಿಯ ಪಾದಗಳಿಗೆ ನಮಸ್ಕರಿಸಿ ಬೇಡಿಕೊಳ್ಳುತ್ತಿದ್ದಾರೆ. ‘ಹೀಗೇ ಒತ್ತಾಯಿಸಿದರೆ ಜೈಲಿಗೆ ಕಳುಹಿಸುವುದಾಗಿ’ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

ಲಕ್ನೋದಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಬಾಗಪತ್ ಜಿಲ್ಲೆಯ ವೀಡಿಯೊವೊಂದರಲ್ಲಿ, ಸರ್ಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳು ಹಾಸಿಗೆಯಿಂದ ಕೆಳಕ್ಕೆ ಬಿದ್ದು ನೆಲದ ಮೇಲೆ ಬಿದ್ದಿರುವುದನ್ನು ತೋರಿಸಲಾಗಿದೆ. ಅವರನ್ನು ಮತ್ತೆ ಹಾಸಿಗೆಯ ಮೇಲೆ ಇರಿಸಲು ಮತ್ತು ಅವರ ಬಾಯಿಗೆ ಆಮ್ಲಜನಕದ ಮಾಸ್ಕ್ ಅನ್ನು ಹಾಕಲು ವಾರ್ಡ್‌ನಲ್ಲಿ ಯಾರೂ ಇರಲಿಲ್ಲ. ರಾಜಧಾನಿಯಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಮೊರಾದಾಬಾದ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದ ಏಳು ರೋಗಿಗಳು, ಆಸ್ಪತ್ರೆಗೆ ಆಮ್ಲಜನಕ ಪೂರೈಕೆಯ ನಂತರವೂ ಆಮ್ಲಜನಕ ಸಿಗದೇ ಸಾವನ್ನಪ್ಪಿದ್ದಾರೆ ಎಂದು ರೋಗಿಗಳ ಪರಿಚಾರಕರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಮೂವರು ಬಿಜೆಪಿ ಶಾಸಕರಾದ ಸುರೇಶ್ ಶ್ರೀವಾಸ್ತವ, ರಮೇಶ್ ದಿವಾಕರ್ ಮತ್ತು ಕೇಸರ್ ಸಿಂಗ್ ಗಂಗ್ವಾರ್ ಅವರು ಕೋವಿಡ್‌ನಿಂದ ನಿಧನರಾದ ನಂತರ ಆದಿತ್ಯನಾಥ್ ತಮ್ಮದೇ ಪಕ್ಷದ ಮುಖಂಡರ ಆಕ್ರೋಶಕ್ಕೆ ಒಳಗಾಗಿದ್ದಾರೆ. ಗಂಗ್ವಾರ್ ಅವರ ಕುಟುಂಬ ಸದಸ್ಯರ ಪ್ರಕಾರ, ದೆಹಲಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವಂತೆ ಶಾಸಕರು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಸಹಾಯ ದೊರೆತಿಲ್ಲ.

ತಮ್ಮ ಪಕ್ಷದ ಶಾಸಕರಿಗೇ ಚಿಕಿತ್ಸೆ ಕೊಡಿಸುವಲ್ಲಿ ಮುಖ್ಯಮಂತ್ರಿ ಯೋಗಿ ವಿಫಲರಾಗಿದ್ದಾರೆ ಎಂದು ಗಂಗ್ವಾರ್ ಅವರ ಪುತ್ರ ವಿಶಾಲ್ ಆದಿತ್ಯನಾಥ್ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಯುಪಿ ಸರ್ಕಾರವು ಶಾಸಕರಿಗೆ ವೈದ್ಯಕೀಯ ಸೌಲಭ್ಯ ನೀಡಲು ಸಾಧ್ಯವಾಗಲಿಲ್ಲ. ನಾನು ಮುಖ್ಯಮಂತ್ರಿ ಕಚೇರಿಗೆ ಹಲವಾರು ಬಾರಿ ಕರೆ ಮಾಡಲು ಪ್ರಯತ್ನಿಸಿದೆ. ಆದರೆ ಯಾರೂ ಕರೆಗಳನ್ನು ಸ್ವೀಕರಿಸಲಿಲ್ಲ” ಎಂದು ವಿಶಾಲ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ತಂದೆಯ ಸಾವಿಗೆ ‘ಯುಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಬೇಕು’ ಎಂದು ವಿಶಾಲ್ ವ್ಯಂಗ್ಯವಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಸಾಮಾನ್ಯ ಹಾಸಿಗೆ, ಆಕ್ಸಿಜನ್ ಕೊರತೆ, ಚಿಕಿತ್ಸೆಯ ಕೊರತೆಯಿಂದ ದಿನವೂ ನೂರಾರು ಕೋವಿಡ್ ಸಾವುಗಳು ಸಂಭವಿಸುತ್ತಿದ್ದರೂ, ಎಲ್ಲ ಸರಿಯಾಗಿದೆ ಎಂದು ಹೇಳುತ್ತ ಬಂದ ಯೋಗಿ ಆದಿತ್ಯನಾಥ ಮತ್ತು ಅವರ ಬೆಂಬಲಿಗರ ವಿರುದ್ಧ ಈಗ ಸ್ವಪಕ್ಷ ನಾಯಕರೇ ತಿರುಗಿ ಬಿದ್ದಿದ್ದಾರೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...