Homeಮುಖಪುಟರಿಲಯನ್ಸ್-ಗೂಗಲ್‌ನ ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ ಯೋಜನೆ ತಡವಾಗಿದ್ದು ಏಕೆ?

ರಿಲಯನ್ಸ್-ಗೂಗಲ್‌ನ ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ ಯೋಜನೆ ತಡವಾಗಿದ್ದು ಏಕೆ?

ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ಗಳನ್ನು ಸೆಪ್ಟೆಂಬರ್‌ 10ಕ್ಕೆ ಮಾರುಕಟ್ಟೆಗೆ ತರುವುದಾಗಿ ಹೇಳಿದ್ದ ರಿಲಯನ್ಸ್ ಹಾಗೂ ಗೂಗಲ್ ಸಂಸ್ಥೆಗಳು ತಮ್ಮ ಯೋಜನೆಯನ್ನು ಮುಂದೂಡಿವೆ.

- Advertisement -
- Advertisement -

ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ಗಳನ್ನು ಸೆಪ್ಟೆಂಬರ್‌ 10ಕ್ಕೆ ಮಾರುಕಟ್ಟೆಗೆ ತರುವುದಾಗಿ ಹೇಳಿದ್ದ ರಿಲಯನ್ಸ್ ಹಾಗೂ ಗೂಗಲ್ ಸಂಸ್ಥೆಗಳು ತಮ್ಮ ಯೋಜನೆಯನ್ನು ಮುಂದೂಡಿವೆ.

ಅರೆವಾಹಕಗಳ (ಸೆಮಿಕಂಡಕ್ಟರ್‌ಗಳು) ಕೊರತೆಯಿಂದಾಗಿ ರಿಲಿಯನ್ಸ್‌ ಕಂಪನಿ ಕೈಗೊಂಡಿದ್ದ ಹೊಸ ಯೋಜನೆಗೆ ಹೊಡೆತ ಬಿದ್ದಿದೆ. ರಿಲಿಯನ್ಸ್ ಮತ್ತು ಗೂಗಲ್ ಸಂಸ್ಥೆಗಳು ಮಾರುಕಟ್ಟೆಗೆ ತರಬೇಕೆಂದಿದ್ದ ಕಡಿಮೆ ಬೆಲೆಯ 4ಜಿ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಕೈ ಸೇರುತ್ತಿರುವುದು ವಿಳಂಬವಾಗುತ್ತಿದೆ.

ಜಾಗತಿಕವಾಗಿ ಉಂಟಾಗಿರುವ ಅರೆವಾಹಕಗಳ ಕೊರತೆಯಿಂದಾಗಿ ಎಲ್ಲ ದೊಡ್ಡ ಮಟ್ಟದ ತಾಂತ್ರಿಕ ಉತ್ಪನ್ನಗಳಿಗೆ, ಕಾರಿನಿಂದ ಹಿಡಿದು ಟೆಲಿವಿಷನ್‌ವರೆಗೂ ತೊಂದರೆಯಾಗಿದೆ. ಭಾರತದ ಸ್ಮಾರ್ಟ್‌‌ಫೋನ್‌ ಮಾರುಕಟ್ಟೆಗೆ ತರಬೇಕೆಂದಿದ್ದ ಸ್ಮಾರ್ಟ್‌ಪೋನ್‌ ಉದ್ಯಮಕ್ಕೂ ಸಮಸ್ಯೆಯಾಗಿದೆ ಎಂದು ಸ್ಕ್ರೋಲ್‌ ಡಾಟ್ ಇನ್ ಸುದ್ದಿ ಜಾಲತಾಣ ವರದಿ ಮಾಡಿದೆ.

ರಿಲಿಯನ್ಸ್‌ ಮತ್ತು ಗೂಗಲ್ ಜಂಟಿಯಾಗಿ ಜಿಯೋಪೋನ್‌ ನೆಕ್ಸ್‌ಟ್‌ ಎಂಬ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಕೋಟ್ಯಾಂತರ ಭಾರತೀಯರಿಗೆ ತಲುಪಿಸುವ ಗುರಿ ಹೊಂದಿದ್ದವು. ಸೆಪ್ಟೆಂಬರ್ 10ರಂದು ಈ ಪೋನ್‌ಗಳನ್ನು ಮಾರುಕಟ್ಟೆಗೆ ತರುವುದಾಗಿ ಘೋಷಿಸಲಾಗಿತ್ತು. ಆದರೆ ರಿಲಿಯನ್ಸ್ ಕಂಪನಿಯ ಟೆಲಿಕಾಂ ಘಟಕವು ಕೊನೆ ಕ್ಷಣದಲ್ಲಿ ಹೊಸ ಪೋನ್‌ಗಳ ಅನಾವರಣ ಕಾರ್ಯಕ್ರಮವನ್ನು ಮುಂದೂಡಿದೆ. ದೀಪಾವಳಿ (ನವೆಂಬರ್‌) ಸಮಯದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ.

“ಈ ಹೆಚ್ಚುವರಿ ಸಮಯವು ಜಾಗತಿಕವಾಗಿ ಅರೆವಾಹಕಗಳ ಕೊರತೆಯನ್ನು ತಗ್ಗಿಸುತ್ತದೆ” ಎಂದು ಜಿಯೋ ಹಾಗೂ ಗೂಗಲ್ ಸಂಸ್ಥೆಗಳು ಜಂಟಿಯಾಗಿ ಹೇಳಿಕೆ ನೀಡಿವೆ.

ಇದನ್ನೂ ಓದಿ:ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಭಾರತದ ತಾಂತ್ರಿಕ ವಲಯ ಸೆಮಿಕಂಡಕ್ಟರ್‌ಗಳ ಆಮದಿನ ಮೇಲೆ ಅವಲಂಬಿತವಾಗಿದೆ ಎಂದು ಸ್ಕೋಲ್‌ ವರದಿ ಮಾಡಿದೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಜಿಯೋ, ಗೂಗಲ್‌ ಕೈಗೊಂಡಿದ್ದ ಈ  ವ್ಯವಹಾರಕ್ಕೆ ಪೆಟ್ಟು ಬಿದ್ದಿದೆ ಎಂದು ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...