Homeಅಂತರಾಷ್ಟ್ರೀಯಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿ ಸೋಮವಾರ ಭಾರತೀಯ ಸೇನೆಗೆ ಸಿಕ್ಕಿಬಿದ್ದ ಚೀನಾದ ಸೈನಿಕನನ್ನು ಮುಂದಿನ ಕೆಲವು ದಿನಗಳವರೆಗೆ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

ಈ ಸೈನಿಕನನ್ನು ಚೀನಾ ಪೀಪಲ್ಸ್ ಲಿಬರೇಶನ್ ಆರ್ಮಿ(ಪಿಎಲ್‌ಎ)ಗೆ ಹಸ್ತಾಂತರಿಸುವ ಮೊದಲು ಚೀನಾ ತಜ್ಞರು ಪ್ರಶ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಈ ಸೈನಿಕ ದಾರಿ ತಪ್ಪಿದ್ದನು. ಈತನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ” ಎಂದು ಭಾರತೀಯ ಸೇನೆಯ ಪ್ರಕಟಣೆ ತಿಳಿಸಿತ್ತು.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿತ್ತು.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಚೀನಾದ ಅಧಿಕಾರಿಯೊಬ್ಬರು ಕಳೆದ ರಾತ್ರಿ ನೀಡಿದ ಹೇಳಿಕೆಯಲ್ಲಿ, ಸೈನಿಕನು “ಸ್ಥಳೀಯ ದನಗಾಹಿಗಳಿಗೆ ಸಹಾಯ ಮಾಡುವಾಗ ಕಳೆದುಹೋಗಿದ್ದಾನೆ” ಎಂದು ಹೇಳಿದ್ದಾರೆ.

ಗಾಲ್ವಾನ್ ಕಣಿವೆಯ ಲಡಾಖ್‌ನಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...