Homeಮುಖಪುಟಲಡಾಖ್‌ ರಾಜ್ಯ ಸ್ಥಾನಮಾನದ ಬೇಡಿಕೆ; ಆಗಸ್ಟ್ 15ರಿಂದ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ

ಲಡಾಖ್‌ ರಾಜ್ಯ ಸ್ಥಾನಮಾನದ ಬೇಡಿಕೆ; ಆಗಸ್ಟ್ 15ರಿಂದ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋಮನ್ ವಾಂಗ್ಚುಕ್ ಅವರು ಸ್ವಾತಂತ್ರ್ಯ ದಿನದಂದು 28 ದಿನಗಳ ಉಪವಾಸವನ್ನು ಪ್ರಾರಂಭಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಾಂವಿಧಾನಿಕ ರಕ್ಷಣೆಯ ಬೇಡಿಕೆಗಳ ಕುರಿತು ಮಾತುಕತೆಗೆ ಲಡಾಖ್ ಅಧಿಕಾರಿಗಳನ್ನು ಸರ್ಕಾರ ಆಹ್ವಾನಿಸದಿದ್ದರೆ, ನಾನು ಮತ್ತೆ ಉಪವಾಸವನ್ನು ಪ್ರಾರಂಭಿಸುವುದಾಗಿ ಅವರು ಪ್ರತಿಪಾದಿಸಿದರು.

ಈ ವರ್ಷದ ಮಾರ್ಚ್‌ನಲ್ಲಿ, ವಾಂಗ್‌ಚುಕ್ 21 ದಿನಗಳ ಉಪವಾಸವನ್ನು ಕೈಗೊಂಡಿದ್ದರು. ಕೇವಲ ಉಪ್ಪು ಮತ್ತು ನೀರು ಮಾತ್ರ ಸೇವಿಸಿ ಬದುಕುಳಿದಿದ್ದರು. ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಪರಿಸರ ದುರ್ಬಲ ಪ್ರದೇಶವನ್ನು “ದುರಾಸೆಯ” ಕೈಗಾರಿಕೆಗಳಿಂದ ರಕ್ಷಿಸಲು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಅದನ್ನು ಸೇರಿಸಲು ಒತ್ತಾಯಿಸಿದರು.

“ಕಳೆದ ವಾರ ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದ್ರಾಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಲಡಾಖ್‌ನ ಅಪೆಕ್ಸ್ ಬಾಡಿ, ಲೇಹ್ (ಎಬಿಎಲ್) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಪ್ರಧಾನಿ ನರೇಂದ್ರ ಮೋದಿಯವರಿಗೆ ಬೇಡಿಕೆಗಳ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೆ” ಎಂದು ಅವರು ಹೇಳಿದರು.

ಚುನಾವಣಾ ಸಮಯದಲ್ಲಿ ನಾವು ಸರ್ಕಾರವನ್ನು ಹೆಚ್ಚು ಒತ್ತಾಯಿಸಲು ಬಯಸುವುದಿಲ್ಲ. ಚುನಾವಣೆಯ ನಂತರ ಅವರಿಗೆ ಸ್ವಲ್ಪ ಉಸಿರಾಡಲು ನಾವು ಬಯಸುತ್ತೇವೆ ಎಂದು ಅವರು ಹೇಳಿದರು. ಹೊಸ ಸರ್ಕಾರವು ಕೆಲವು ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಜ್ಞಾಪನಾ ಪತ್ರವನ್ನು ಸಲ್ಲಿಸಿದ ನಂತರ ಅವರು ನಮ್ಮ ನಾಯಕರನ್ನು ಮಾತುಕತೆಗೆ ಆಹ್ವಾನಿಸುತ್ತಾರೆ ಎಂದು ನಾವು ಭಾವಿಸುತ್ತೇವೆ. ಅದು ಸಂಭವಿಸದಿದ್ದರೆ, ನಾವು ಮತ್ತೊಂದು ಸುತ್ತಿನ ಪ್ರತಿಭಟನೆಯನ್ನು ಪ್ರಾರಂಭಿಸುತ್ತೇವೆ” ಎಂದು ವಾಂಗ್ಚುಕ್ ಹೇಳಿದರು.

ಸರ್ಕಾರ ತನ್ನ ಭರವಸೆ ಹಿಂತೆಗೆದುಕೊಂಡಿತು

ಪರಿಸರ ದುರ್ಬಲ ಪ್ರದೇಶದ “ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಬಯಸುವ ಕೈಗಾರಿಕೋದ್ಯಮಿಗಳ” ಒತ್ತಡದ ಮೇರೆಗೆ ಲಡಾಖ್‌ಗೆ ಬುಡಕಟ್ಟು ಪ್ರದೇಶದ ಸ್ಥಾನಮಾನ ಮತ್ತು ಸಂಪೂರ್ಣ ರಾಜ್ಯತ್ವವನ್ನು ನೀಡುವ ಭರವಸೆಯನ್ನು ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಲಡಾಖ್ ಸ್ವಾಯತ್ತ ಹಿಲ್ ಡೆವಲಪ್‌ಮೆಂಟ್ ಕೌನ್ಸಿಲ್ (ಎಲ್‌ಎಹೆಚ್‌ಡಿಸಿ) ಒಪ್ಪಿಗೆಯಿಲ್ಲದೆ ಸೌರ ವಿದ್ಯುತ್ ಯೋಜನೆಗಳಿಗೆ ಲಡಾಖ್‌ನಲ್ಲಿ ಭೂಮಿಯನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಹೆಸರಾಂತ ಎಂಜಿನಿಯರ್ ಆರೋಪಿಸಿದ್ದಾರೆ.

“ಎಲ್‌ಎಎಚ್‌ಡಿಸಿ ಯ ಅಧಿಕಾರವನ್ನು ದುರ್ಬಲಗೊಳಿಸಲಾಗುತ್ತಿದೆ ಮತ್ತು ಮೇಲಿನಿಂದ ಅನುಮತಿಗಳನ್ನು ನೀಡಲಾಗುತ್ತಿದೆ. ಅದಕ್ಕಾಗಿಯೇ ಲಡಾಖ್ ಜನರು ಭಯಭೀತರಾಗಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಲೋಕಸಭೆಯಲ್ಲಿ ಇಂದು ಕೇಂದ್ರ ಬಜೆಟ್ ಕುರಿತು ಮಾತನಾಡಲಿರುವ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...