Homeಕರ್ನಾಟಕರಾಜ್ಯದಾದ್ಯಂತ 4600 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಾದ್ಯಂತ 4600 ಕೆರೆಗಳ ಒತ್ತುವರಿ ತೆರವು, 8697 ಎಕರೆ ಭೂಮಿ ವಶಕ್ಕೆ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಕೆರೆಗಳ ಸಮೀಕ್ಷೆ ಕಾರ್ಯ ನಡೆಯಲಿದ್ದು, 4618 ಕೆರೆಗಳ ಒತ್ತುವರಿ ತೆರವು ಮಾಡಲಿದ್ದೇವೆ ಮತ್ತು 8697 ಎಕರೆ ಭೂಮಿ ವಶಕ್ಕೆ ಪಡೆಯಲಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ತಿಳಿಸಿದ್ದಾರೆ. ರಾಜ್ಯದಾದ್ಯಂತ 4600

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ ಕೆರೆಗಳ ಸಮೀಕ್ಷೆ ಕಾರ್ಯವನ್ನು ಎಲ್ಲಾ ಜಿಲ್ಲೆಗಳಲ್ಲಿ ಕೈಗೊಂಡಿದ್ದು ಒತ್ತುವರಿಯಾಗಿದ್ದ 9140 ಕೆರೆಗಳನ್ನು ಈಗಾಗಲೆ ಗುರುತಿಸಲಾಗಿದೆ. ಈ ಪೈಕಿ 4618 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ.

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ 32648 ಕೆರೆಗಳಿದ್ದು, ಇಲಾಖೆ ಕೈಗೊಂಡಿರುವ ಸಮೀಕ್ಷೆಯಲ್ಲಿ 24497 ಕೆರೆಗಳನ್ನು ಗುರುತಿಸಲಾಗಿದೆ, ಇವುಗಳಲ್ಲಿ 9140 ಕೆರೆಗಳು ಒತ್ತುವರಿಗೊಂಡಿದ್ದವು ಎಂದು ಹೇಳಿದ ಪ್ರಿಯಾಂಕ್, ಒತ್ತುವರಿಗೊಂಡ ಕೆರೆಗಳಲ್ಲಿ 4618 ಕೆರೆಗಳ ಒತ್ತುವರಿಯನ್ನು ತೆರೆವುಗೊಳಿಸಲಾಗಿದ್ದು, 8697 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತಿಗಳ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಒತ್ತುವರಿ ಗುರುತಿಸಲ್ಪಟ್ಟಿರುವ ಉಳಿದ 4522 ಕೆರೆಗಳನ್ನು ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ವಿವರಗಳನ್ನು ನೀಡಿದ್ದಾರೆ.

ಒಟ್ಟಾರೆ 32648 ಕೆರೆಗಳಲ್ಲಿ ಸಮೀಕ್ಷೆ ಬಾಕಿ ಇರುವ 8151 ಕೆರೆಗಳ ಸಮೀಕ್ಷೆಯನ್ನು ಮುಂದಿನ 30 ದಿನಗಳ ಒಳಗೆ ಮುಗಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಮೀಕ್ಷೆ ಕಾರ್ಯವನ್ನು ಮುಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ 32648 ಕೆರೆಗಳು 3,08,213 ಎಕರೆ ಪ್ರದೇಶವನ್ನು ಹೊಂದಿದೆ, ಇವುಗಳಲ್ಲಿ 2,15,594 ಎಕರೆಗೆ ಸಂಬಂಧಿಸಿದಂತೆ 24497 ಕೆರೆಗಳ ಸರ್ವೆ ಕಾರ್ಯ ಸಂಪನ್ನಗೊಂಡಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

ರಾಜ್ಯದಲ್ಲಿ ಹಾಸನ ಜಿಲ್ಲೆ ಅತಿ ಹೆಚ್ಚು 6367 ಕೆರೆಗಳನ್ನು ಹೊಂದಿದ್ದು, ಬಳ್ಳಾರಿ ಜಿಲ್ಲೆ ಅತಿ ಕಡಿನೆ 21 ಕೆರೆಗಳನ್ನು ಹೊಂದಿದೆ. ಹೆಚ್ಚು ಕೆರೆಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಶಿವಮೊಗ್ಗ (4354) ಹಾಗೂ ಮೈಸೂರು (2805) ಎರಡು ಹಾಗೂ ಮೂರನೆ ಸ್ಥಾನಗಳಲ್ಲಿವೆ. ಹಾಗೆಯೇ ಅತಿ ಕಡಿಮೆ ಕೆರೆಗಳ ಮುಂದಿನ ಸ್ಥಾನಗಳು ಕಲಬುರಗಿ (33) ಮತ್ತು ಕೊಪ್ಪಳ (39) ಜಿಲ್ಲೆಗಳದು ಎಂಬ ಸಂಗತಿ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯದಾದ್ಯಂತ 4600

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಾಯಿಗಳು ಮತ್ತು ಮುಸ್ಲಿಮರಿಗೆ ಅವಕಾಶವಿಲ್ಲ: ಬಿಧಾನ್ ಚಂದ್ರ ಕೃಷಿ ವಿಶ್ವವಿದ್ಯಾಲಯದಲ್ಲಿ ದ್ವೇಷದ ಪೋಸ್ಟರ್

ನಾಯಿಗಳು ಮತ್ತು ಮುಸ್ಲಿಮರಿಗೆ ಅವಕಾಶವಿಲ್ಲ: ಬಿಧಾನ್ ಚಂದ್ರ ಕೃಷಿ ವಿಶ್ವವಿದ್ಯಾಲಯದಲ್ಲಿ ದ್ವೇಷದ ಪೋಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...