Homeಮುಖಪುಟಲಖಿಂಪುರ್: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ; ಇನ್ನಿಬ್ಬರ ಬಂಧನ

ಲಖಿಂಪುರ್: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ; ಇನ್ನಿಬ್ಬರ ಬಂಧನ

- Advertisement -
- Advertisement -

ಲಖಿಂಪುರ್ ಖೇರಿ ರೈತರ ಹತ್ಯಾಕಾಂಡದಲ್ಲಿ ಬಂಧನಕ್ಕೆ ಒಳಗಾಗಿರುವ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾಗೆ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಇಂದು ಬಂಧಿಸಲಾಗಿದೆ.

ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾದ ಅಂಕಿತ್ ದಾಸ್ ಮತ್ತು ಲತೀಫ್ ಅಲಿಯಾಸ್ ಕಾಳೆ ಅವರನ್ನು ವಿಚಾರಣೆಯ ನಂತರ ಬಂಧಿಸಲಾಯಿತು. ಬಂಧನಕ್ಕೆ ಒಳಗಾದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದರೊಂದಿಗೆ, ಅಕ್ಟೋಬರ್ 3 ರಂದು ನಡೆದ ರೈತರ ಹತ್ಯಾಕಾಂಡ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಆಶಿಶ್ ಮಿಶ್ರಾ ಮತ್ತು ಅವನ ಸಹಚರ ಆಶಿಶ್ ಪಾಂಡೆ ಬುಧವಾರ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಅದನ್ನು ತಿರಸ್ಕರಿಸಿದೆ. ಸುಮಾರು 12 ಗಂಟೆಗಳ ವಿಚಾರಣೆಯ ನಂತರ ವಿಶೇಷ ತನಿಖಾ ತಂಡದಿಂದ ಅಕ್ಟೋಬರ್ 9 ರಂದು ಬಂಧಿಸಲ್ಪಟ್ಟ ಆಶಿಶ್ ಮಿಶ್ರಾನನ್ನು, ಮಂಗಳವಾರದಿಂದ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಶಿಶ್ ಮಿಶ್ರಾ, ಲುವಕುಶ್, ಆಶಿಶ್ ಪಾಂಡೆ, ಭಾರತಿ, ಅಂಕಿತ್ ಮತ್ತು ಕಾಳೆ ಎಂಬ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಆಶಿಶ್ ಮಿಶ್ರಾನ ಆಪ್ತ ಸ್ನೇಹಿತರೆಂದು ಹೇಳಲಾಗುವ ಅಂಕಿತ್ ದಾಸ್ ಮತ್ತು ಕಾಳೆ ಲಖಿಂಪುರದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ಎಸ್ಐಟಿ ಮುಂದೆ ಹಾಜರಾಗಿದ್ದರು. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಸ್ ಮತ್ತು ಕಾಲೇ ಅವರನ್ನು ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆಸಿಕೊಂಡಿದ್ದರು.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದ ಎಂದು ರೈತರು ಆರೋಪಿಸಿದ್ದರೆ.

ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...