Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ಇದು ಕೊನೆಯಿಲ್ಲದ ಕಥೆಯಾಗಬಾರದು ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು ಎಲ್ಲಾ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ರಕ್ಷಿಸಲು ಯುಪಿ ಸರ್ಕಾರಕ್ಕೆ ಆದೇಶ ನೀಡಿದೆ.

- Advertisement -
- Advertisement -

ಲಖಿಂಪುರ್ ಖೇರಿ ರೈತರ ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ. ಅಕ್ಟೋಬರ್ 03 ರಂದು ಶಾಂತಿಯುತ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ಮಗ ಕಾರು ಹರಿಸಿ ನಾಲ್ವರು ರೈತರ ಕೊಲೆಗೆ ಕಾರಣವಾದ ಆರೋಪದ ಪ್ರಕರಣದಲ್ಲಿ ಕೇವಲ 23 ಪ್ರತ್ಯಕ್ಷದರ್ಶಿ ಸಾಕ್ಷಿಗಳು ಸಾಲುವುದಿಲ್ಲ ಎಂದು ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.

ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಿ ಅವರಿಗೆ ರಕ್ಷಣೆ ನೀಡಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿರುವ ಸುಪ್ರೀಂ, ಒಂದು ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲು ನ್ಯಾಯಾಂಗ ಅಧಿಕಾರಿಗಳ ಕೊರತೆಯಿದ್ದಲ್ಲಿ ಹತ್ತಿರದ ಜಿಲ್ಲೆಗಳ ನ್ಯಾಯಾಧೀಶರು ಸಿಬ್ಬಂದಿಯನ್ನು ಒದಗಿಸುವಂತೆ ನಿರ್ದೇಶನ ನೀಡಿದೆ.

ಇದು ಕೊನೆಯಿಲ್ಲದ ಕಥೆಯಾಗಬಾರದು ಎಂದು ಎಚ್ಚರಿಕೆ ನೀಡಿದ ನ್ಯಾಯಾಲಯವು ಎಲ್ಲಾ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ರಕ್ಷಿಸಲು ಯುಪಿ ಸರ್ಕಾರಕ್ಕೆ ಆದೇಶ ನೀಡಿದೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು.

ಅಕ್ಟೋಬರ್ 11 ರಂದು ಆಶಿಶ್ ಮಿಶ್ರಾ ಬಂಧನವಾಗಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ನಿಭಾಯಿಸುತ್ತಿರುವ ರೀತಿಗೆ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತ್ತು. ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತರ ಕುಟುಂಬ ಸದಸ್ಯರು ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ಪ್ರತ್ಯೇಕ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

ಅಕ್ಟೋಬರ್ 20ರ ಕಳೆದ ವಿಚಾರಣೆ ಸಮಯದಲ್ಲಿಯೂ ಕೂಡ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. “ಈ ಪ್ರಕರಣವನ್ನು ನೀವು ನಿಮಗೆ ಬೇಕಾದ ಹಾಗೆ ಎಳೆಯುತ್ತಿದ್ದೀರಿ ಅಲ್ಲವೇ? ವಿಚಾರಣೆಯ ವರದಿಯನ್ನು ಪಡೆಯುವುದಕ್ಕಾಗಿ ನಾವು ನಿನ್ನೆ ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆವು. ಕೊನೆಯ ಘಳಿಗೆಯಲ್ಲಿ ಸಲ್ಲಿಸಿದರೆ ಅದನ್ನು ನಾವು ಓದುವುದಾದರೂ ಹೇಗೆ? ಕನಿಷ್ಠ ಒಂದು ದಿನ ಮೊದಲು ವರದಿ ಸಲ್ಲಿಸಿ” ಎಂದು ಗರಂ ಆಗಿತ್ತು.

“ನೀವು 44 ಸಾಕ್ಷಿಗಳ ಪೈಕಿ ಕೇವಲ 4 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದೀರಿ, ಯಾಕೆ ಉಳಿದವರದ್ದು ದಾಖಲಿಸಿಲ್ಲ? ಎಷ್ಟು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಎಷ್ಟು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ? ಪೊಲೀಸರು ಅವರನ್ನು ಪ್ರಶ್ನಿಸದ ಹೊರತು ನಾವು ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಿಲ್ಲ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡದ ವರದಿ ವಿಳಂಬ: ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...