Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

ಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡದ ಕುರಿತು ಇಂದು ರಾಷ್ಟ್ರಪತಿಗಳನ್ನು ಭೇಟಿಯಾದ ಕಾಂಗ್ರೆಸ್ ನಿಯೋಗ ರೈತರ ಮೇಲೆ ಕಾರು ಹರಿಸಿದ ಆರೋಪ ಎದುರಿಸುತ್ತಿರುವ ಆಶಿಶ್ ಮಿಶ್ರಾರವರ ತಂದೆ ಅಜಯ್ ಮಿಶ್ರಾರನ್ನು ಸಂಚಿವ ಸಂಪುಟದಿಂದ ಕೈಬಿಡಬೇಕು ಮತ್ತು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ರವರು ಈ ಕುರಿತು ಸರ್ಕಾರದೊಂದಿಗೆ ಮಾತನಾಡುವುದಾಗಿ ತಿಳಿಸಿದರು ಎಂದು ಕಾಂಗ್ರೆಸ್ ಹೇಳಿದೆ.

ಅಕ್ಟೋಬರ್‌ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರು ಸೇರಿದಂತೆ 8 ಜನರ ಹತ್ಯೆಗೆ ಕಾರಣವಾದ ಆರೋಪದ ಮೇಲೆ ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ. ಆದರೆ ಅವರ ತಂದೆ ಕೇಂದ್ರ ಸಚಿವರಾಗಿ ಮುಂದುವರೆಯುತ್ತಿರುವಾಗ ಈ ಪ್ರಕರಣದಲ್ಲಿ ನಿಷ್ಪಷಪಾತ ತನಿಖೆ ಸಾಧ್ಯವಿಲ್ಲ ಎಂದು ಆಗ್ರಹಿಸಿರುವ ಕಾಂಗ್ರೆಸ್, ಸಂತ್ರಸ್ತ ರೈತ ಕುಟುಂಬದ ಬೇಡಿಕೆಯೂ ಇದೇ ಆಗಿದೆ ಎಂದಿದೆ.

“ಲಖಿಂಪುರ್ ಘಟನೆಯ ಸಂಪೂರ್ಣ ವಿವರವನ್ನು ರಾಷ್ಟ್ರಪತಿಗಳಿಗೆ ತಿಳಿಸಿದ್ದೇವೆ. ಹಾಲಿ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಥೆನಿಯವರನ್ನು ವಜಾಗೊಳಿಸಬೇಕೆಂಬುದು ನಮ್ಮ ಒತ್ತಾಯ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ರಾಷ್ಟ್ರಪತಿ ಭೇಟಿ ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, “ಆರೋಪಿಯ ತಂದೆ ಸಚಿವರಾಗಿ ಮುಂದುವರೆಯುವವರೆಗೂ ತಮಗೆ ನ್ಯಾಯ ಸಿಗುವುದಿಲ್ಲ ಎಂದು ಸಂತ್ರಸ್ತ ಕುಟುಂಬಗಳು ನಂಬಿವೆ. ಇದು ಉತ್ತರ ಪ್ರದೇಶ ಸೇರಿದಂತೆ ದೇಶಾದ್ಯಂತ ಸರಿಯಾಗಿ ಆಲೋಚಿಸುವವರ ಅಭಿಪ್ರಾಯವೂ ಆಗಿದೆ. ಈ ವಿಚಾರದ ಕುರಿತು ಸರ್ಕಾರದೊಂದಿಗ ಮಾತುಕತೆ ನಡೆಸುವುದಾಗಿ ರಾಷ್ಟ್ರಪತಿಗಳು ತಿಳಿಸಿದ್ದಾರೆ” ಎಂದಿದ್ದಾರೆ.

ಪೊಲೀಸ್‌ ಇಲಾಖೆ ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವುದರಿಂದ ಆರೋಪಿಯ ತಂದೆಯೇ ಆ ಸಚಿವಾಲಯವನ್ನು ನಿಯಂತ್ರಿಸುವ ಕಾರಣಕ್ಕೆ ತನಿಖೆ ನ್ಯಾಯಯುತವಾಗಿರುತ್ತದೆ ಎಂಬ ಯಾವುದೇ ನಂಬಿಕೆ ಇಲ್ಲ. ಹೀಗಾಗಿ ಅಜಯ್‌ ಮಿಶ್ರಾ ರಾಜಿನಾಮೆಗೆ ನೀವು ಕ್ರಮ ಕೈಗೊಳ್ಳಬೇಕು ಎಂದು ರಾಹುಲ್‌ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...