Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿರುವ ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.

ರೈತರ ಮೇಲೆ ಕಾರು ಹರಿಸಿ ರೈತರ ಹತ್ಯೆಗೆ ಕಾರಣರಾಗಿ, ಬಳಿಕ ನಡೆದ ಹಿಂಸಾಚಾರವೂ ಸೇರಿ ಒಟ್ಟು 8 ಜನರ ಸಾವಿಗೆ ಕಾರಣರಾಗಿರುವ ಆರೋಪದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದು 5 ದಿನಗಳ ಬಳಿಕ ಲಖಿಂಪುರ್ ಖೇರಿಯಲ್ಲಿ 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ , “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಹೇಳಿ ಬಂಧಿಸಿದ್ದರು. ಬಳಿಕ   14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಲಿಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

“ಕಳೆದ ಭಾನುವಾರ ನಡೆದ ಘಟನೆಯ ವೇಳೆ ಸಚಿವರ ಮಗ ಸ್ಥಳದಲ್ಲಿ ಇದ್ದ ಕುರಿತು ಹಲವು ಅಂಶಗಳನ್ನು ವಿವರಿಸಲು ಸಾಧ್ಯವಾಗಿಲ್ಲ. ಆತ ಅಂದು ಮಧ್ಯಾಹ್ನ 2ರಿಂದ 4 ಗಂಟೆಗಳ ನಡುವೆ ಘಟನಾ ಸ್ಥಳದಲ್ಲಿ ಇದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆತನ ಫೋನ್ ಸಿಗ್ನಲ್‌ ಕೂಡ ಘಟನಾ ಸ್ಥಳದ ಹತ್ತಿರಕ್ಕೆ ತೋರಿಸಿದೆ. ರೈತರನ್ನು ಮೇಲೆ ಹತ್ತಿದ ಎಸ್‌ಯುವಿ ಚಾಲನೆ ಕುರಿತು ಆತ ಹೇಳುತ್ತಿರುವ ವಿವರಣೆಗಳು ಹೊಂದಿಕೆಯಾಗುತ್ತಿಲ್ಲ” ಎಂದು ಉತ್ತರ ಪ್ರದೇಶ ಪೊಲೀಸ್‌ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ಅಕ್ಟೋಬರ್‌ 03 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಲಿಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...