Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಆರೋಪಿ ಆಶೀಶ್ ಮಿಶ್ರಾ ಸೇರಿ ಮೂವರಿಗೆ ಜಾಮೀನು ನಿರಾಕರಣೆ

ಇನ್ನು ಮುಂದೆ ಪ್ರಕರಣದ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಗಲಿಗೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಸೇರಿ ಮೂವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ನವೆಂಬರ್ 15 (ಸೋಮವಾರ) ರಂದು ತಿರಸ್ಕರಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾರ ಸಹ-ಆರೋಪಿಗಳಾದ ಲವ್ ಕುಶ್ ರಾಣಾ ಮತ್ತು ಆಶಿಶ್ ಪಾಂಡೆಗೂ ಜಾಮೀನು ನಿರಾಕರಿಸಲಾಗಿದೆ. ಈ ಹಿಂದೆಯೂ ಕೆಳ ನ್ಯಾಯಾಲಯ ಮೂವರಿಗೆ ಜಾಮೀನು ನಿರಾಕರಿಸಿತ್ತು.

ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿರುವ ವರದಿಯನ್ನು ಪ್ರಾಸಿಕ್ಯೂಷನ್ ಸಲ್ಲಿಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ. ಜಿಲ್ಲಾ ಸರ್ಕಾರಿ ವಕೀಲ ಅರವಿಂದ್ ತ್ರಿಪಾಠಿ, “ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ” ಎಂದು ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಎಸ್‌ಐಟಿ ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಸುಪ್ರೀಂ ಕೋರ್ಟ್‌ನ ಸಲಹೆಗೆ ಉತ್ತರ ಪ್ರದೇಶ ಸರ್ಕಾರ ಸೋಮವಾರ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನಿವೃತ್ತ ನ್ಯಾಯಾಧೀಶರ ಹೆಸರನ್ನು ಪ್ರಕಟಿಸಲು ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಜೊತೆಗೆ ರಾಜ್ಯ ಸರ್ಕಾರವು ಸ್ಥಾಪಿಸಿರುವ ವಿಶೇಷ ತನಿಖಾ ತಂಡಕ್ಕೆ ಸೇರಿಸಲು ಯುಪಿ ಕೇಡರ್‌ನ ಆದರೆ ರಾಜ್ಯದ ಸ್ಥಳೀಯರಲ್ಲದ ಐಪಿಎಸ್ ಅಧಿಕಾರಿಗಳ ಹೆಸರನ್ನು ಸಹ ಕೋರಿದೆ.

“ಮೇಲ್ವಿಚಾರಣೆಗೆ ನೇಮಕಗೊಳ್ಳುವ ನ್ಯಾಯಾಧೀಶರ ಹೆಸರನ್ನು ಘೋಷಿಸಲು ಪೀಠಕ್ಕೆ ಒಂದು ದಿನದ ಸಮಯ ಬೇಕಾಗುತ್ತದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ. ನಾವು ಸಂಬಂಧಪಟ್ಟ ನ್ಯಾಯಾಧೀಶರೊಂದಿಗೂ ಮಾತನಾಡಬೇಕಾಗಿದೆ” ಎಂದು ಸಿಜೆಐ ಹೇಳಿದ್ದಾರೆ.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...