Homeಚಳವಳಿರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

ರೈತರ ಹತ್ಯಾಕಾಂಡ: ಪರಿಹಾರ ನನ್ನ ಮಗನನ್ನು ವಾಪಸ್ ತರುವುದಿಲ್ಲ, ನಮಗೆ ನ್ಯಾಯ ಬೇಕು- ಮೃತರ ತಂದೆ

- Advertisement -
- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ರಾಜೀನಾಮೆ ನೀಡಬೇಕು, ಆತನ ಮಗನನ್ನು ತಕ್ಷಣ ಬಂಧಿಸಬೇಕು ಆಗ ನಮಗೆ ನ್ಯಾಯ ಸಿಗುತ್ತದೆ ಎಂಬುದು ಲಖಿಂಪುರ್‌ ಕೇರಿ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಲವ್‌ಪ್ರೀತ್ ಸಿಂಗ್ ಅವರ ತಂದೆ ಸತ್ನಾಮ್ ಸಿಂಗ್ ಮನವಿ.

“ಸರ್ಕಾರಗಳು ನೀಡುವ ಪರಿಹಾರವು ನನ್ನ ಮಗನನ್ನು ಮರಳಿ ತರುವುದಿಲ್ಲ. ಆತನನ್ನು ಕೊಲೆ ಮಾಡಿದ ಎಲ್ಲರನ್ನು ಬಂಧಿಸಿದಾಗ ಮಾತ್ರ ನಮಗೆ ನ್ಯಾಯ ಸಿಗುತ್ತದೆ. ಸರ್ಕಾರದಿಂದ ಪರಿಹಾರ ಘೋಷಿಸಿದ ಮಾತ್ರಕ್ಕೆ ತನ್ನ ಮಗನ ಹಂತಕರು ಮುಕ್ತವಾಗಿ ತಿರುಗಾಡಲು ಯಾರಾದರೂ ಅನುಮತಿ ನೀಡಬಹುದೇ?” ಎಂದು ಮಗನ ಸಾವಿನಿಂದ ನೊಂದಿರುವ ಸತ್ನಾಮ್ ಸಿಂಗ್ ಪ್ರಶ್ನಿಸಿದ್ದಾರೆ.

ಸತ್ನಾಮ್ ಸಿಂಗ್ ಮತ್ತು ಸತ್ವಿಂದರ್ ಕೌರ್ ಅವರ ಮೂವರು ಮಕ್ಕಳಲ್ಲಿ ಲವ್‌ಪ್ರೀತ್ ಸಿಂಗ್ ಹಿರಿಯರು. “ಲವ್‌ಪ್ರೀತ್ ಸಿಂಗ್ ಅವರ ಒಬ್ಬನೇ ಮಗ. ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಕೆನಡಾಕ್ಕೆ ಹೋಗಲು ಅಂತಾರಾಷ್ಟ್ರೀಯ ಇಂಗ್ಲಿಷ್ ಭಾಷಾ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಅಕ್ಟೋಬರ್ 3 ರಂದು ಕುಟುಂಬದ ಕನಸುಗಳನ್ನು ಕನಸಾಗಿಯೇ ಉಳಿಯುವಂತೆ ಈ ಘಟನೆ ಮಾಡಿದೆ” ಎಂದು ಹಳ್ಳಿಯ ಪ್ರಧಾನ ಸುಖದೇವ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ಆಶಿಶ್ ಮಿಶ್ರಾ ನೇಪಾಳಕ್ಕೆ ಪರಾರಿಯಾಗಿದ್ದಾನೆ – ರೈತರ ಆರೋಪ

” ಲವ್‌ಪ್ರೀತ್ ಸಿಂಗ್ ಸರಳ ಮತ್ತು ಸ್ನೇಹಪರ ಹುಡುಗ. ಎಲ್ಲರಿಗೂ ಎಲ್ಲಾ ಸಮಯದಲ್ಲಿಯೂ ಸಹಾಯ ಮಾಡಲು ಸಿದ್ಧರಾಗಿದ್ದರು. ಅವರು ರೈತರ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದರು. ಅಕ್ಟೋಬರ್ 3 ರಂದು, ಹಳ್ಳಿಯ ಇತರ ಕೆಲವು ಯುವಕರೊಂದಿಗೆ ಟಿಕುನಿಯಾ ಪಟ್ಟಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಹೋಗಿದ್ದರು. ಆದರೆ, ಸಚಿವರ ಮಗನ ಕಾರು ಹರಿದು ಕೊಲೆಯಾಗಿದ್ದಾರೆ” ಎಂದು ಹಳ್ಳಿಯ ಪ್ರಧಾನ್ ಮಾಹಿತಿ ನೀಡಿದ್ದಾರೆ.

ಮಗನ ಸಾವಿನ ನಂತರ ಗಂಭೀರ ಸ್ಥಿತಿಯಲ್ಲಿದ್ದ ಲವ್‌ಪ್ರೀತ್ ತಾಯಿಗೆ ಸರಿಯಾದ ವೈದ್ಯಕೀಯ ಆರೈಕೆಯನ್ನು ತಕ್ಷಣವೇ ನೀಡುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಿಂದಿನ ದಿನವೇ ಸೂಚಿಸಿತ್ತು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...