Homeಚಳವಳಿಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದ ರೈತರು ಮತ್ತು ಪತ್ರಕರ್ತರಿಗೆ ದೇಶದ ರೈತರು ಅಂತಿಮ ನಮನ (Antim ardaas) ಸಲ್ಲಿಸುತ್ತಿದ್ದಾರೆ. ಹತ್ಯೆ ನಡೆದ ಟಿಕುನಿಯಾದಲ್ಲಿ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗಿಯಾಗಿದ್ದಾರೆ.

ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಅಂತಿಮ ನಮನ (Antim ardaas) ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಕ್ಷದ ನಾಯಕರಾದ ದೀಪೇಂದರ್ ಹೂಡಾ ಮತ್ತು ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಜೊತೆಗೆ ಶೋಕಾಚರಣೆಯಲ್ಲಿ ಭಾಗಿಯಾದರು.

ಲಖಿಂಪುರ್ ಖೇರಿಯ ಟಿಕುನಿಯಾ ಗ್ರಾಮದ ಸಾಹೇಬ್‌ಜಡ್ಡಾ ಇಂಟರ್ ಕಾಲೇಜು ಮೈದಾನದಲ್ಲಿ ಅಂತಿಮ ಪ್ರಾರ್ಥನೆಗಾಗಿ ಸಿದ್ಧತೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ಪ್ರಿಯಾಂಕಾ ಗಾಂಧಿ ಭೇಟಿಗೂ ಮುನ್ನ, ಇಂದು ಬೆಳಿಗ್ಗೆ ಲಕ್ನೋ-ಸೀತಾಪುರ-ಲಖಿಂಪುರ ಹೆದ್ದಾರಿಯಲ್ಲಿ ಭಾರೀ ತಡೆಗೋಡೆ ಮತ್ತು ಪೊಲೀಸ್ ತಪಾಸಣೆ ನಡೆಸಲಾಗಿದೆ. ದಾರಿಯಲ್ಲಿ ಅಲ್ಲಲ್ಲಿ “ರಾಹುಲ್ ಗಾಂಧಿ ಗೋ ಬ್ಯಾಕ್, ಪ್ರಿಯಾಂಕಾ ಗಾಂಧಿ ಗೋ ಬ್ಯಾಕ್” ಬ್ಯಾನರ್‌ಗಳು ಕಂಡು ಬಂದಿವೆ.

ರೈತರ ಬಗೆಗಿನ ನಕಲಿ ಸಹಾನೂಭೂತಿ ಬೇಕಾಗಿಲ್ಲ ಎನ್ನುವ ಈ ಬ್ಯಾನರ್‌ಗಳನ್ನು ಯಾರು ಹಾಕಿದ್ದಾರೆ ಎಂದು ಗಮನಿಸಿದರೇ, ಇವುಗಳಲ್ಲಿ ನಕಲಿ ವಿಳಾಸಗಳನ್ನು ಹಾಕಿ ಪ್ರಕಟಿಸಲಾಗಿದೆ ಎಂಬುದು ತಿಳಿದುಬಂದಿದೆ.

5e86lq6k

ಅಂತಿಮ ನಮನದಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ರೈತರು ಮತ್ತು ವಿವಿಧ ರೈತ ಸಂಘಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್, ಯೋಗೇಂದ್ರ ಯಾದವ್ ಸೇರಿದಂತೆ ಹಲವು ರೈತ ನಾಯಕರು ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ನಾಯಕನನ್ನು ರೈತ ಮುಖಂಡರೊಂದಿಗೆ ವೇದಿಕೆ ಹಂಚಿಕೊಳ್ಳಲು ಅನುಮತಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ಜಿಲ್ಲಾ ಉಪಾಧ್ಯಕ್ಷ ಬಾಲ್ಕರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಇದರಂತೆ ಪ್ರಿಯಾಂಕಾ ಗಾಂಧಿ ವೇದಿಕೆಯ ಮುಂಭಾಗದಲ್ಲಿ ಕುಳಿತು ಅಗಿದ ರೈತರಿಗೆ ನಮನ ಸಲ್ಲಿಸಿದ್ದಾರೆ.

ಅಕ್ಟೋಬರ್‌ 03 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ. ಮೂರು ದಿನಗಳ ಕಾಲ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಲಾಗಿದೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಹುತಾತ್ಮ ರೈತರಿಗಾಗಿ ರೈತರಿಂದ ಅಂತಿಮ ನಮನ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು...
Wordpress Social Share Plugin powered by Ultimatelysocial