Homeಕರ್ನಾಟಕಲಖಿಂಪುರ್ ಖೇರಿ ಹತ್ಯಾಕಾಂಡ: ಕೇಂದ್ರ ಸಚಿವರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್‌ನಿಂದ 'ಮೌನ ವ್ರತ' ಸತ್ಯಾಗ್ರಹ

ಲಖಿಂಪುರ್ ಖೇರಿ ಹತ್ಯಾಕಾಂಡ: ಕೇಂದ್ರ ಸಚಿವರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್‌ನಿಂದ ‘ಮೌನ ವ್ರತ’ ಸತ್ಯಾಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಕೇಂದ್ರ ಸಚಿವರ ಮಗನ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ. ಸಚಿವರ ರಾಜೀನಾಮೆ ಪಡೆದಿಲ್ಲ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಸೋಮವಾರ ಮೌನ ವ್ರತ ಸತ್ಯಾಗ್ರಹ ನಡೆಸುತ್ತಿದೆ.

ರೈತರ ಹತ್ಯಾಕಾಂಡವನ್ನು ಖಂಡಿಸಿರುವ ಕಾಂಗ್ರೆಸ್ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರನ್ನು ವಜಾ ಗೊಳಿಸುವಂತೆ ಮತ್ತು ಈ ಹತ್ಯಾಕಾಂಡ ನಡೆಸಿದ ಎಲ್ಲಾ ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಸೋಮವಾರ  ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ.

ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನ್ಯಾಯಾಂಗ ಬಂಧನದಲ್ಲಿದ್ದು, ಈವರೆಗೂ ಕೃತ್ಯ ಎಸಗಿದ ಆತನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಜೊತೆಗೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಪಡೆದಿಲ್ಲ. ಕೇಂದ್ರ ಸಚಿವರನ್ನು ವಜಾ ಗೊಳಿಸುವಂತೆ ಮತ್ತು ಈ ಹತ್ಯಾಕಾಂಡ ನಡೆಸಿದ ಎಲ್ಲಾ ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ಓದಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ಅಕ್ಟೋಬರ್ 11 ರಂದು‌ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯ ಗಾಂಧಿ ಪ್ರತಿಮೆಯ ಮುಂದೆ ಬೆಳಿಗ್ಗೆ 11 ಗಂಟೆಯಿಂದ ‘ಮೌನ ವ್ರತ’ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈ ‘ಮೌನ ವ್ರತ’ ಸತ್ಯಾಗ್ರಹದಲ್ಲಿ ಪಕ್ಷದ ಎಲ್ಲಾ ನಾಯಕರು, ಶಾಸಕರು, ಮಾಜಿ ಸಚಿವರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ, ಕೇಂದ್ರ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ರೈತರ ಹತ್ಯಾಕಾಂಡ ನಡೆಸಿದವರ ರಕ್ಷಣೆಗೆ ನಿಂತಿರುವುದನ್ನು ಖಂಡಿಸಬೇಕೆಂದು ಕೋರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.


ಇದನ್ನೂ ಓ‌ದಿ: ಲಖಿಂಪುರ್‌ಖೇರಿ: ಆಶೀಶ್‌ ಮಿಶ್ರಾ ಅರೆಸ್ಟ್‌, ವಿಚಾರಣೆಗೆ ಸಹಕರಿಸಿಲ್ಲ ಎಂದ ಪೊಲೀಸರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...