Homeಚಳವಳಿಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸುತ್ತಿದ್ದಾರೆ.

ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿದೆ.

ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಿದ್ದು, ದೇಶಾದ್ಯಂತ ಸಂಜೆ  4 ಗಂಟೆಯವರೆಗೆ ರೈಲ್ ರೋಕೋ ನಡೆಯಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕ, ಉತ್ತರಾಖಂಡ, ಜಾರ್ಖಂಡ್‌ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಚಳವಳಿ ಆರಂಭವಾಗಿದೆ.

ಇದನ್ನೂ ಓದಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ರೈಲ್ ರೋಕೋ ಶಾಂತಿಯುತವಾಗಿರುವಂತೆ ಮತ್ತು ರೈಲ್ವೆ ಆಸ್ತಿಗೆ ಯಾವುದೇ ರೀತಿಯ ಹಾನಿಯಾಗದಂತೆ  ಚಳವಳಿ ಮಾಡಬೇಕು ಎಂದು ಎಸ್‌ಕೆಎಂ ಮನವಿ ಮಾಡಿದೆ. ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ಎಸ್‌ಕೆಎಂ ಎಚ್ಚರಿಕೆ ನೀಡಿತ್ತು.

ರೈತರ ರೈಲ್ ರೋಕೋ ಚಳವಳಿಯಿಂದ ಈಗಾಗಲೇ ಭಾರತದಾದ್ಯಂತ ಸುಮಾರು 160 ಪ್ಯಾಸೆಂಜರ್ ರೈಲುಗಳನ್ನು ಇಂದು ರದ್ದುಗೊಳಿಸಲಾಗಿದೆ. ನೂರಾರು ಗೂಡ್ಸ್ ರೈಲುಗಳು ಸಹ ಸ್ಥಗಿತಗೊಂಡಿವೆ ಎಂದು ತಿಳಿದುಬಂದಿದೆ.

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೂ ಹರಿಯಣ ಸರ್ಕಾರ ಪ್ರತಿಭಟನಾ ಸ್ಥಳಗಳಲ್ಲಿ ರ್‍ಯಾಪಿಡ್ ಆಕ್ಷನ್ ಫೋರ್ಸ್ ನಿಯೋಜನೆ ಮಾಡಿರುವುದರ ವಿರುದ್ಧ ಆಕ್ಷೇಪ ಕೇಳಿ ಬಂದಿದೆ. ರೈತರ ಪ್ರತಿಭಟನೆ ಶಾಂತಿಯುತವಾಗಿರುತ್ತದೆ, ಆದರೂ ಏಕೆ ಮನೋಹರ್‌ ಲಾಲ್ ಖಟ್ಟರ್‌ ಸರ್ಕಾರ ಗೊಂದಲದ ವಾತಾವರಣವನ್ನು ಸೃಷ್ಟಿಸುತ್ತಿದೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

“ಅಕ್ಟೋಬರ್ 3ರಂದು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ, ಸಚಿವ ಅಜಯ್ ಮಿಶ್ರಾ ತೇನಿ ಮಗನಾಗಿದ್ದಾರೆ. ಅಜಯ್ ಮಿಶ್ರಾ ಒಕ್ಕೂಟ ಸರ್ಕಾರದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವುದರಿಂದ, ಈ ಪ್ರಕರಣದಲ್ಲಿ ನ್ಯಾಯ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು” ಎಂದು ಎಸ್‌ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿತ್ತು.

’ಸಚಿವ ಅಜಯ್ ಮಿಶ್ರಾ ತೇನಿ ರೌಡಿ ಶೀಟರ್‌ನಂತೆ ಸಾರ್ವಜನಿಕ ಸಭೆಯಲ್ಲಿ ರೈತರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ತಮ್ಮ ಭಾಷಣಗಳಲ್ಲಿ ಹಿಂದೂಗಳು ಮತ್ತು ಸಿಖ್ಖರ ನಡುವೆ ದ್ವೇಷ ಬಿತ್ತಲು ಯತ್ನಿಸಿದ್ದಾರೆ. ಶಾಮತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಲು ಅವರ ಕಾರುಗಳನ್ನು ಬಳಸಲಾಗಿದೆ. ಆರೋಪಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಇವರನ್ನು ಮೊದಲೇ ಬಂಧಿಸಬೇಕಿತ್ತು” ಎಂದು ಎಸ್‌ಕೆಎಂ ಹೇಳಿದೆ.


ಇದನ್ನೂ ಓದಿ: ರೈತ ಹೋರಾಟ: ರಾವಣನ ಬದಲು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ದಸರಾ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...