Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ

ಲಖಿಂಪುರ್ ಖೇರಿ ಹತ್ಯಾಕಾಂಡ: ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ

ಹತ್ಯಾಕಾಂಡಕ್ಕೆ ಸಂಬಂಧಿಸಿದ್ದಂತೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ಇಂದು ವಿಚಾರಣೆ ನಡೆಯಲಿದೆ

- Advertisement -
- Advertisement -

ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹತ್ಯಾಕಾಂಡದಲ್ಲಿ ರೈತರು, ಪತ್ರಕರ್ತ ಸೇರಿದಂತೆ 8 ಜನರು ಸಾವನಪ್ಪಿದ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯು ತನಿಖೆ ನಡೆಸಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.

ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ತನಿಖೆ ನಡೆಸಲಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡುವಂತೆ ಆಯೋಗಕ್ಕೆ ತಿಳಿಸಲಾಗಿದೆ.

ಸಾರ್ವಜನಿಕ ಮಹತ್ವಕ್ಕಾಗಿ ತನಿಖೆ ಅಗತ್ಯವಿದೆ ಎಂದು ಹೇಳಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸುವಂತೆ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹೀಗಾಗಿ ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಕುಮಾರ್ ಅವಸ್ಥಿ ಅಧಿಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

‌ಘಟನೆಗೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಇಂದು ಪ್ರಕರಣದ ವಿಚಾರಣೆ ನಡೆಸಲಿದೆ.

ಹೆಚ್ಚುತ್ತಿರುವ ಆಕ್ರೋಶ, ಉತ್ತರ ಪ್ರದೇಶ ಪೊಲೀಸರ ತನಿಖೆಯ ನಿರ್ವಹಣೆ, ಮಾಧ್ಯಮ ವರದಿಗಳು ಮತ್ತು ರಾಜ್ಯದ ಇಬ್ಬರು ವಕೀಲರು ಮುಖ್ಯ ನ್ಯಾಯಮೂರ್ತಿಗೆ ಬರೆದ ಪತ್ರ ಎಲ್ಲವನ್ನು ಗಮನಿಸಿ ಪ್ರಕರಣವನ್ನು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರಿಗೆ ಪತ್ರ ಬರೆದಿದ್ದ ಉತ್ತರ ಪ್ರದೇಶದ ವಕೀಲರು, ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಘಟನೆಯಲ್ಲಿ ಭಾಗಿಯಾದ ಸಚಿವರ ವಿರುದ್ಧ ಎಫ್‌ಐಆರ್‌ ಮತ್ತು ಶಿಕ್ಷೆ ನೀಡುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರಿಗೆ ಅರ್ಜಿ ಸಲ್ಲಿಸಿದ್ದರು.


ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...