Homeಚಳವಳಿಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

- Advertisement -
- Advertisement -

ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿದಿ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರಾಗಿದೆ.

ಲಖಿಂಪುರ ಖೇರಿ ನ್ಯಾಯಾಲಯಗಳು ಈ ಹಿಂದೆ ಆಶಿಶ್ ಮಿಶ್ರಾಗೆ ಜಾಮೀನು ತಿರಸ್ಕರಿಸಿದ್ದವು. ಇಂದು ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ ಎಂದು ಆಶಿಶ್ ಮಿಶ್ರಾ ಅವರ ವಕೀಲರು ಹೇಳಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಡಲು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಒತ್ತಾಯಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ಈ ಹತ್ಯಾಕಾಂಡದಿಂದ ಮೃತಪಟ್ಟ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ರೈತರು, ಚುನಾವಣೆಯಲ್ಲಿ ’ನೋಟಾ’ಕ್ಕೆ ಮತ ನೀಡುವುದಾಗಿ ತಿಳಿಸಿದ್ದಾರೆ.

ಲಖೀಂಪುರ್‌ ಖೇರಿಯ ರೈತರು ವಿಧಾನಸಭಾ ಚುನಾವಣೆಯಲ್ಲಿ ‘ನೋಟಾ’ ಬಟನ್ ಒತ್ತಲು ಮನಸ್ಸು ಮಾಡಿದ್ದಾರೆ. ರಾಜ್ಯ ಬಿಜೆಪಿ ಮತ್ತು ಎಸ್‌ಪಿಯ ಎರಡು ದೊಡ್ಡ ಪಕ್ಷಗಳು ನಮಗೆ ದ್ರೋಹ ಬಗೆದಿವೆ ಎಂದು ಆರೋಪಿಸಿರುವ ರೈತರು, ನಾವು ಬಿಜೆಪಿಗೆ ಅಥವಾ ಎಸ್‌ಪಿಗೆ ಮತ ಹಾಕುವುದಿಲ್ಲ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಚುನಾವಣೆಯ ಮಧ್ಯದಲ್ಲಿ ಈ ಬೆಳವಣಿಗೆ ನಡೆಯುತ್ತಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ: ಬಿಜೆಪಿ ಕಾರ್ಯಕರ್ತರ ಹತ್ಯೆ- ಚಾರ್ಜ್‌ಶೀಟ್‌ನಲ್ಲಿ ರೈತರ ಹೆಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...