Homeಚಳವಳಿಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್ 3 ರಂದು ನಾಲ್ವರು ರೈತರು ಸೇರಿದಂತೆ ಎಂಟು ಜನರ ಹತ್ಯಾಕಾಂಡಕ್ಕೆ ಕಾರಣವಾದ ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿವೆ.

ಪ್ರಕರಣ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಕಳೆದ ಮಂಗಳವಾರ ಆತ ಜೈಲಿನಿಂದ ಹೊರಬಂದಿದ್ದಾರೆ. ಇದರಿಂದ ನೊಂದಿರುವ ಸಂತ್ರಸ್ತರ ಕುಟುಂಬಗಳು ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿವೆ. ಅಲಹಾಬಾದ್ ಹೈಕೋರ್ಟ್ ಆಶಿಶ್ ಮಿಶ್ರಾ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಸಂತ್ರಸ್ತರ ಸಂಬಂಧಿಕರು ಮನವಿ ಮಾಡಿದ್ದಾರೆ.

ಹಿಂಸಾಚಾರದಲ್ಲಿ ಸಾವನ್ನಪ್ಪಿದ ರೈತರ ಮೂರು ಕುಟುಂಬದ ಸದಸ್ಯರು ಫೆಬ್ರವರಿ 10 ರಂದು ಹೈಕೋರ್ಟ್‌ನ ಲಕ್ನೋ ಪೀಠ ನೀಡಿರುವ ಜಾಮೀನು ಆದೇಶಕ್ಕೆ ತಡೆಯಾಜ್ಞೆ ಕೋರಿದ್ದಾರೆ.

ಮಿಶ್ರಾಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಬ್ಬರು ವಕೀಲರಾದ ಸಿ.ಎಸ್. ಪಾಂಡಾ ಮತ್ತು ಶಿವಕುಮಾರ್ ತ್ರಿಪಾಠಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಮೂರು ದಿನಗಳ ಹಿಂದೆ ವರದಿ ಮಾಡಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವಾಗ ಜಾಮೀನು ನೀಡಿರುವುದು ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಜಾಮೀನು ನೀಡಿ “ಬ್ರಾಹ್ಮಣ ಮತಗಳನ್ನು” ಸೆಳೆಯುವ ಕಸರತ್ತು ಎಂದು ಆರೋಪಿಸಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಲಖಿಂಪುರ ಹಿಂಸಾಚಾರದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಲು ಬಿಜೆಪಿ ವಿಫಲವಾಗಿದೆ ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಬಿಜೆಪಿ ವಿರುದ್ಧ ಕಿಡಿ ಕಾರಿದ್ದರು.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ. ರೈತರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...