Homeಮುಖಪುಟಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆದ ಲಖಿಂಪುರ್‌ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯ ತಂದೆ ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿಯ ರಾಜೀನಾಮೆ ಪಡೆಯದ ಒಕ್ಕೂಟ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಆರೋಪಿ ಆಶಿಶ್ ಮಿಶ್ರಾ ತೇನಿಗೆ ಜಾಮೀನು ನೀಡಿರುವುದನ್ನು ವಿರೋಧಿಸಿ ಕಿಡಿ ಕಾರಿದ್ದಾರೆ.  “ಇಂದು ಆ ವ್ಯಕ್ತಿಗೆ ಜಾಮೀನು ಸಿಕ್ಕಿದೆ. ನಿಮ್ಮ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ಶೀಘ್ರದಲ್ಲೇ ನಿಮ್ಮ ಮುಂದೆಯೇ ಬಹಿರಂಗವಾಗಿ ತಿರುಗುತ್ತಾರೆ. ಇಲ್ಲಿ, ಸರ್ಕಾರ ಯಾರನ್ನು ಉಳಿಸಿತು..? ರೈತರನ್ನು ಉಳಿಸಿತು..? ರೈತರನ್ನು ಕೊಲ್ಲುವಾಗ ಪೊಲೀಸರು ಮತ್ತು ಆಡಳಿತ ಎಲ್ಲಿತ್ತು..? ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿದಿ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ (ಫೆ.10) ಜಾಮೀನು ನೀಡಿದೆ.

ಇದನ್ನೂ ಓದಿ: ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

ರಾಂಪುರ ಜಿಲ್ಲೆಯ ಬಿಲಾಸ್‌ಪುರ ನಗರದಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, “ಪ್ರಧಾನಿಯೊಬ್ಬರು ರಾಷ್ಟ್ರದ ಬಗ್ಗೆ ನೈತಿಕ ಜವಾಬ್ದಾರಿಯನ್ನು ಹೊಂದಿದ್ದಾರೆ. ಈ ಜವಾಬ್ದಾರಿಯನ್ನು ಪೂರೈಸುವುದು ಅವರ ಧರ್ಮವಾಗಿದೆ. ಈ ಧರ್ಮವು ಪ್ರತಿಯೊಂದು ಧರ್ಮಕ್ಕಿಂತ ಮೇಲಿದೆ. ಯಾವುದೇ ರಾಜಕಾರಣಿ, ಪ್ರಧಾನಿ ಅಥವಾ ಸರ್ಕಾರ ಈ ಜವಾಬ್ದಾರಿಯನ್ನು ಪೂರೈಸಲು ವಿಫಲವಾದರೆ ಅವುಗಳನ್ನು ನಿರ್ಲಕ್ಷಿಸಬೇಕು” ಎಂದಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಘಟನೆ ಬಳಿಕ ನಡೆದ ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತ, ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ಚಾಲಕ ಬಲಿಯಾಗಿದ್ದರು.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ರ್‍ಯಾಲಿಯಲ್ಲಿ ಆರೋಪಿಗೆ ಜಾಮೀನು ಸಿಕ್ಕಿರುವ ಬಗ್ಗೆ ಖಂಡಿಸಿರು ಅವರು, ಲಖಿಂಪುರ್‌ ಖೇರಿ ಘಟನೆ ನಡೆದಾಗ ಪೊಲೀಸರು ಎಲ್ಲೂ ಕಾಣಲಿಲ್ಲ. ಆದರೆ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಯತ್ನಿಸಿದ ಕಾಂಗ್ರೆಸ್ ಸದಸ್ಯರನ್ನು ತಡೆಯಲು ಪೊಲೀಸರು ಹಾಜರಿದ್ದರು ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಲಖಿಂಪುರ್ ಖೇರಿಯಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...