Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ರೈತರ ಮೇಲೆ ಹರಿದ ಬೆಂಗಾವಲು ವಾಹನವನ್ನು ಚಲಾಯಿಸುತ್ತಿದ್ದ ಆರೋಪಿಗಳಲ್ಲಿ ಒಬ್ಬ ಎನ್ನಲಾಗಿದೆ.

ಅಕ್ಟೋಬರ್ 3 ರಂದು ಪ್ರತಿಭಟನೆ ಮುಗಿಸಿ ಶಾಂತಿಯುತವಾಗಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಗಾವಲು ಹರಿದು ನಾಲ್ವರು ರೈತರು ಮೃತಪಟ್ಟಿದ್ದರು. ನಂತರ ನಡೆದ ಹಿಂಸಾಚಾರದಲ್ಲಿ ಮತ್ತೆ ನಾಲ್ವರು ಸಾವನ್ನಪ್ಪಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಬಂಧಿತ ಆರೋಪಿ ಶೇಖರ್ ಭಾರತಿ, ಅಕ್ಟೋಬರ್ 3 ರಂದು ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ಮಾಡಿದ ಮೂರು ಎಸ್ಯುವಿಗಳಲ್ಲಿ ಒಂದನ್ನು ಓಡಿಸುತ್ತಿದ್ದ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆತ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರ ಆಪ್ತ ಸಹಾಯಕ ಅಂಕಿತ್ ದಾಸ್ ಒಡೆತನದ ಕಪ್ಪು ಫಾರ್ಚುನರ್ ಅನ್ನು ಚಾಲನೆ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕನೇ ವ್ಯಕ್ತಿ ಶೇಖರ್‌ ಭಾರತಿ. ಈ ಹಿಂದೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸಚಿವರ ಮಗ ಆಶಿಶ್ ಮಿಶ್ರಾ, ಲುವಕುಶ್ ಮತ್ತು ಆಶಿಶ್ ಪಾಂಡೆ ಎಂಬುವರನ್ನು ಬಂಧಿಸಿದ್ದಾರೆ.

ಇನ್ನೊಂದು ಬೆಳವಣಿಗೆಯಲ್ಲಿ, ಅಂಕಿತ್ ದಾಸ್ ಮತ್ತು ಲತೀಫ್ ಇಬ್ಬರ ಮುಖ್ಯ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಶರಣಾಗತಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅಂಕಿತ್ ದಾಸ್ ದಿವಂಗತ ಮಾಜಿ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ.

ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿರುವ ಆಶಿಶ್ ಮಿಶ್ರಾರನ್ನು ಘಟನೆ ನಡೆದು 5 ದಿನಗಳ ಬಳಿಕ ಲಖಿಂಪುರ್ ಖೇರಿಯಲ್ಲಿ 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ , “ಆತ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ” ಎಂದು ಹೇಳಿ ಬಂಧಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಅಲ್ಲಿಂದ ಉತ್ತರ ಪ್ರದೇಶದ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಅ.11 ರಂದು ಆದೇಶಿಸಿದೆ.


ಇದನ್ನೂ ಓದಿ: ಲಖಿಂಪುರ್ ಹತ್ಯಾಕಾಂಡದ ಹುತಾತ್ಮ ರೈತರಿಗೆ ಅಂತಿಮ ನಮನ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...