Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಅ.26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಲಖಿಂಪುರ್‌ ಖೇರಿ ಹತ್ಯಾಕಾಂಡ: ಅ.26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

- Advertisement -
- Advertisement -

ಅಕ್ಟೋಬರ್ 3 ರ ಭಾನುವಾರದಂದು ಉತ್ತರ ಪ್ರದೇಶದ ಲಖಿಂಪು‌ರ್‌ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಿದೆ. ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು.

ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು ಅಕ್ಟೋಬರ್ 8 ರಂದು ಎಂಟು ಜನರ “ಕ್ರೂರ” ಹತ್ಯೆಯಲ್ಲಿ ಉತ್ತರ ಪ್ರದೇಶ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿತ್ತು.

ಇಲ್ಲಿಯವರೆಗೆ ಈ ಹತ್ಯಾಕಾಂಡದಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ಕೇಳಿತು. 164 ಸಾಕ್ಷಿಗಳಲ್ಲಿ ಇನ್ನು 44 ಮಂದಿಯನ್ನು ಮಾತ್ರ ಏಕೆ ವಿಚಾರಣೆ ನಡೆಸಿದ್ದಿರಿ..ಹೆಚ್ಚು ಜನರನ್ನು ಇನ್ನೂ ವಿಚಾರಣೆ ನಡೆಸದಿರಲು ಕಾರಣವೇನು ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ, 50ಕ್ಕೂ ಹೆಚ್ಚು ರೈತರಿಗೆ SIT ಸಮನ್ಸ್‌

ಇದಕ್ಕೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ವಕೀಲ ಹರಿಶ್ ಸಾಲ್ವೆ, ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು, ಮುಖ್ಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಎಷ್ಟು ಜನರನ್ನು ಬಂಧಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಇದುವರೆಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಕೊನೆ ಕ್ಷಣದಲ್ಲಿ ಪ್ರಕರಣದ ವಿವರಗಳನ್ನು ಸಲ್ಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, “ಕೊನೆಯ ನಿಮಿಷದಲ್ಲಿ ವರದಿ ಸಲ್ಲಿಸಿದರೆ ನಾವು ಹೇಗೆ ಓದುವುದು. ಕನಿಷ್ಠ ಒಂದು ದಿನ ಮೊದಲು ಫೈಲ್ ಮಾಡಿ. ನಾವು ವರದಿ ಸಿಗುತ್ತದೆ ಎಂದು ನಿನ್ನೆ ರಾತ್ರಿ 1 ಗಂಟೆವರೆಗೆ ಕಾಯುತ್ತಿದ್ದೆವು” ಎಂದು ಅಸಮಾಧಾನ ಹೊರಹಾಕಿದೆ. ಬಳಿಕ ಅಕ್ಟೋಬರ್ 26ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿದೆ.

ಘಟನೆಯ ಕುರಿತು ಸಿಬಿಐ ಒಳಗೊಂಡಂತೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯನ್ನು ಕೋರಿ ಇಬ್ಬರು ವಕೀಲರು ಸಿಜೆಐಗೆ ಪತ್ರ ಬರೆದ ನಂತರ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ಗುಂಪು, ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದಾಗ, ಲಖಿಂಪುರ್ ಖೇರಿಯಲ್ಲಿ ನಾಲ್ಕು ರೈತರ ಮೇಲೆ ಕಾರನ್ನು ಹರಿಸಲಾಗಿತ್ತು.


ಇದನ್ನೂ ಓದಿ: ಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...