Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡ: ಇಬ್ಬರ ಬಂಧನ, ತಲೆಮರೆಸಿಕೊಂಡ ಸಚಿವನ ಪುತ್ರ ಆಶಿಶ್ ಮಿಶ್ರಾ

ಲಖಿಂಪುರ್ ಖೇರಿ ಹತ್ಯಾಕಾಂಡ: ಇಬ್ಬರ ಬಂಧನ, ತಲೆಮರೆಸಿಕೊಂಡ ಸಚಿವನ ಪುತ್ರ ಆಶಿಶ್ ಮಿಶ್ರಾ

ಈ ಹಿಂದೆ ಸಚಿವ ಅಜಯ್ ಮಿಶ್ರಾ ಯಾವ ಸಂದರ್ಭದಲ್ಲಿ ಬೇಕಾದರೂ ತನ್ನ ಮಗ ವಿಚಾರಣೆಗೆ ಹಾಜರಾಗುತ್ತಾನೆ ಎಂದು ಹೇಳಿಕೆ ನೀಡಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಏಕಾಏಕಿ ಉದ್ದೇಶಪೂರ್ವಕವಾಗಿ ಕಾರು ನುಗ್ಗಿಸಿ 4 ರೈತರ ಹತ್ಯೆಗೆ ಕಾರಣವಾದ ಆರೋಪದ ಮೇಲೆ ಇಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣದ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ತಲೆಮರೆಸಿಕೊಂಡಿದ್ದಾನೆ, ಆತನಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ.

ದುರ್ಘಟನೆ ನಡೆದು ನಾಲ್ಕು ದಿನಗಳ ನಂತರ ಲುವ್ಕುಶ್ ರಾಣ ಮತ್ತು ಆಶಿಸ್ ಪಾಂಡೆ ಎಂಬ ಸಚಿವನ ಮಗನ ಸ್ನೇಹಿರತನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಯುಪಿ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ನಂತರ ಬಂಧನಗಳು ನಡೆದಿವೆ.

ಈ ಹಿಂದೆ ಸಚಿವನ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಹರಿದ ಕಾರು ತಮ್ಮದೇ ಎಂದು ಒಪ್ಪಿಕೊಂಡಿದ್ದ. ಆದರೆ ಘಟನೆ ಸ್ಥಳದಲ್ಲಿ ತಾನಿರಲಿಲ್ಲ ಎಂಬುದು ಅವರ ವಾದವಾಗಿತ್ತು. ಆಗ ಸಚಿವ ಅಜಯ್ ಮಿಶ್ರಾ ಯಾವ ಸಂದರ್ಭದಲ್ಲಿ ಬೇಕಾದರೂ ತನ್ನ ಮಗ ವಿಚಾರಣೆಗೆ ಹಾಜರಾಗುತ್ತಾನೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಘಟನೆ ನಡೆದ ನಾಲ್ಕು ದಿನ ಆದರೂ ಪೊಲೀಸರಿಗೆ ಆತನ ಸುಳಿವು ಸಿಕ್ಕಿಲ್ಲ. ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹತ್ಯಾಕಾಂಡದಲ್ಲಿ ನಾಲ್ವರು ರೈತರ ಹತ್ಯೆಗೆ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿ ಆಲಿಸುತ್ತಿರುವ ಸುಪ್ರೀಂ ಕೋರ್ಟ್ “ಎಷ್ಟು ಜನರನ್ನು ಬಂಧಿಸಿದ್ದೀರಿ?” ಎಂದು ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದೆ.

ನಾಲ್ವರು ರೈತರು, ಒಬ್ಬ ಪತ್ರಕರ್ತ ಮತ್ತು ಮೂವರು ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿರುವ ಪ್ರಕರಣದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ ತೆಗೆದುಕೊಂಡಿರುವ ಕ್ರಮಗಳು ಮತ್ತು ತನಿಖೆಯ ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶಿಸಿದೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದಾರೆ ಎಂದು ವಿವಾದಗಳಲ್ಲಿ ಸಿಲುಕಿರುವ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಇಂದು ಕಾರಾಗೃಹಗಳ ಕುರಿತಾದ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿಯ 7 ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ “ಜೈಲಿನಲ್ಲಿ ಇರಬೇಕಾದ ವ್ಯಕ್ತಿ ಜೈಲಿನ ಅಧಿಕೃತ ಸಮ್ಮೇಳನವನ್ನು ಉದ್ಘಾಟಿಸುತ್ತಿದ್ದಾರೆ! ಇದು ಹೊಸ ಇಂಡಿಯಾ!” ಎಂದು ಕಿಡಿಕಾರಿದ್ದಾರೆ.

ಇನ್ನೊಂದೆಡೆ ಹರಿಯಾಣದಲ್ಲಿ ಬಿಜೆಪಿ ಸಂಸದ ನಯೀಬ್ ಸೈನಿ ಎಂಬುವವರಿಗೆ ಸೇರಿದ ಕಾರು ಅಂಬಾಲ ಬಳಿಯ ನರೈನ್‌ಗರ್ ನಲ್ಲಿ ಪ್ರತಿಭಟಿಸುತ್ತಿದ್ದ ರೈತರಿಗೆ ಗುದ್ದಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ರೈತನನ್ನು ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಜೈಲಿನಲ್ಲಿ ಇರಬೇಕಾದವರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಾರೆ: ಯೋಗೇಂದ್ರ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...