Homeಮುಖಪುಟಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದಲ್ಲಿ, ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಶಾ೦ತ್‌ ಕುಮಾರ್‌, “ನಿನ್ನೆ ಲಖಿಂಪುರ್ ಖೇರಿಯಲ್ಲಿ ಮೃತಪಟ್ಟ 4 ರೈತರ ಕುಟುಂಬಗಳಿಗೆ ಸರ್ಕಾರ 45 ಲಕ್ಷ ರೂಪಾಯಿ ಮತ್ತು ಸರ್ಕಾರಿ ಉದ್ಯೋಗವನ್ನು ನೀಡುತ್ತದೆ. ಗಾಯಗೊಂಡವರಿಗೆ 10 ಲಕ್ಷ ರೂ. ನೀಡಲಾಗುವುದು. ಜೊತೆಗೆ ರೈತರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗುವುದು. ಅಷ್ಟೇ ಅಲ್ಲದೆ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

“ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಬಂಧನಗಳನ್ನು ಕೂಡ ಶೀಘ್ರದಲ್ಲಿ ಮಾಡಲಾಗುತ್ತದೆ. ಶವಗಳ ಮರಣೋತ್ತರ ಪರೀಕ್ಷೆ ಕಾನೂನಿನ ಪ್ರಕಾರ ನಡೆಸಲಾಗುತ್ತದೆ. ಅಂತಿಮ ಧಾರ್ಮಿಕ ವಿಧಿಗಳನ್ನು ಅವರ ಧಾರ್ಮಿಕ ನಂಬಿಕೆಗಳ ಪ್ರಕಾರ ನಡೆಸಲಾಗುವುದು” ಎಂದು ಪ್ರಶಾಂತ್‌ ಕುಮಾರ್‌ ಹೇಳಿದ್ದರು.

ಜಿಲ್ಲೆಯಲ್ಲಿ ಸರ್ಕಾರ ಈಗಾಗಲೆ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿದೆ. ಯಾವುದೆ ರಾಜಕೀಯ ಪಕ್ಷಗಳ ನಾಯಕರಿಗೆ ಜಿಲ್ಲೆಯನ್ನು ಪ್ರವೇಶಿಸಲು ಅನುಮತಿ ನೀಡಿಲ್ಲ. ಇಂದು ಬೆಳಿಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿದೆ. ಜೊತೆಗೆ ಹಲವಾರು ರಾಜಕೀಯ ನಾಯಕರ ಪ್ರವೇಶವನ್ನು ತಡೆದಿದೆ.

ಅದಾಗ್ಯೂ, ರೈತ ಮುಖಂಡ ರಾಕೇಶ್‌ ಟಿಕಾಯತ್ ಅವರಿಗೆ ಪ್ರವೇಶ ಸಿಕ್ಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಡಿಜಿ,  “ಸಿಆರ್‌ಪಿಸಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ರಾಜಕೀಯ ಪಕ್ಷಗಳ ನಾಯಕರು ಜಿಲ್ಲೆಗೆ ಭೇಟಿ ನೀಡಲು ಅನುಮತಿ ನೀಡಿಲ್ಲ. ಆದರೆ, ರೈತ ಸಂಘಗಳ ಸದಸ್ಯರಿಗೆ ಇಲ್ಲಿಗೆ ಬರಲು ಅವಕಾಶವಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಶಿವಸೇನೆಯನ್ನು ವಿಭಜಿಸಿ, ಇಲ್ಲವೇ ಬಂಧನ ಎದುರಿಸಿ ಎಂದು ಏಕನಾಥ್ ಶಿಂದೆಗೆ ಕೇಂದ್ರ ಸರ್ಕಾರ ಬೆದರಿಕೆ...

0
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಏಕನಾಥ್ ಶಿಂದೆ ಸಚಿವರಾಗಿದ್ದಾಗ, ಅವರನ್ನು ಬಂಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜಿಸಿತ್ತು ಎಂದು ಮಂಗಳವಾರ ಶಿವಸೇನೆ (ಯುಬಿಟಿ) ನಾಯಕ...