Homeಚಳವಳಿಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

’ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ?’

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿದೆ.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡವನ್ನು ತನಿಖೆ ಮಾಡುವಂತೆ ರಾಜ್ಯ ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗ ತನಿಖೆಗೆ ಘೋಷಿಸಿದೆ.

ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆ ಅನುಮತಿ ನಿರಾಕರಿಸಿದ್ದರೂ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿದೆ.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದಾರೆ.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು  ಭೇಟಿಯಾಗಿ ಲಖಿಂಪುರ್ ಖೇರಿ ಘಟನೆ ಕುರಿತು ಚರ್ಚಿಸಿದ್ದಾರೆ. ಇಂತಹ ಅನಾಗರಿಕ ಕೃತ್ಯಗಳನ್ನು ಸಹಿಸುವುದಿಲ್ಲ ಎಂದಿರುವ ಚನ್ನಿ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ರೀತಿಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಿಡುಗಡೆಯಾಗದಿದ್ದರೆ ಲಖಿಂಪುರ್ ಖೇರಿಗೆ ಪಾದಯಾತ್ರೆ: ಸಿಧು ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...