Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡುವವರೆಗೂ ಅವರ ಶವ ಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು. ಸಚಿವರ ಪುತ್ರ ಆಶಿಶ್ ಮಿಶ್ರಾ ಕಾರು ಚಲಾಯಿಸುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಯುಪಿ ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಮೃತ ಲವ್‌ಪ್ರೀತ್ ಸಿಂಗ್ ಅವರ ಪಾರ್ಥಿವ ಶರೀರದ ಪಕ್ಕ ಕುಳಿತು ರೋಧಿಸುತ್ತಿರುವ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು, ಮರಣೋತ್ತರ ಪರೀಕ್ಷೆ ವರದಿ ಮತ್ತು ಆಶಿಶ್ ಮಿಶ್ರಾ ವಿರುದ್ಧದ ಎಫ್‌ಐಆರ್ ಪ್ರತಿಯನ್ನು ನೀಡುವವರೆಗೂ ಅವರ ಅಂತ್ಯಕ್ರಿಯೆ ಮಾಡಲು ನಿರಾಕರಿಸಿದೆ.

“ನನ್ನ ಮಗ ಕಾರಿನ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕಾರಣನಾದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆಡಳಿತ ಸರ್ಕಾರವು ಇದನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ” ಎಂದು ಲವ್‌ಪ್ರೀತ್ ತಂದೆ ಸತ್ನಾಮ್ ಸಿಂಗ್ ಆರೋಪಿಸಿದ್ದಾರೆ.

ಒಂದು ಒಳ್ಳೆಯ ಉದ್ದೇಶಕ್ಕಾಗಿ ನಾನು ಹೊರ ಹೊಗುತ್ತಿದ್ದೇನೆ ಎಂದು ಮನೆಯಿಂದ ಹೊರಟ್ಟಿದ್ದ, ಮನೆಯ ಒಬ್ಬನೆ ಮಗನನ್ನು ಕಳೆದು ಕೊಂಡಿರುವ ಪೋಷಕರು ಮತ್ತು ಲವ್‌ಪ್ರೀತ್‌ನ ಇಬ್ಬರು ಸಹೋದರಿಯರು ತಮ್ಮ ಏಕೈಕ ಸಹೋದರನನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ. ಲವ್‌ಪ್ರೀತ್‌ ಅವರ ಮೃತ ದೇಹವನ್ನು ಭಾನುವಾರದಿಂದ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದೆ.

ಮೃತ ಎಂಟು ರೈತರು ಗಂಭೀರ ಗಾಯಗಳು, ಆಘಾತ ಮತ್ತು ಮೆದುಳಿನ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ ಎನ್ನಲಾಗಿದೆ. ಆದರೆ, ಘಟನೆಯ ಬಳಿಕ ಹೊರ ಬಮದಿರುವ ವಿಡಿಯೊಗಳನ್ನು ಆಧರಿಸಿ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಗಳು ಆಗ್ರಹಿಸಿವೆ.

ಘಟನೆಗೆ ಸಂಬಂಧಿಸಿದೆ ಎನ್ನಲಾಗುತ್ತಿರುವ ಎರಡು ವಿಡಿಯೊಗಳು ಎಲ್ಲೆಡೆ ವೈರಲ್ ಆಗುತ್ತಿವೆ. ೊಂದು ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ.


ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...