Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿ ಮಾಡಿದ್ದ ಸಚಿವ!

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿ ಮಾಡಿದ್ದ ಸಚಿವ!

- Advertisement -
- Advertisement -

ಭಾನುವಾರ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲಿನ ಹತ್ಯಾಕಾಂಡದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಸಚಿವ ಪಟ್ಟಿ ಮಾಡಿದ್ದವರಲ್ಲಿ ಒಬ್ಬ ಪತ್ರಕರ್ತ ಎಂದು ಮೃತನ ಕುಟುಂಬ ಸ್ಪಷ್ಟಪಡಿಸಿದೆ. ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಪ್ರತಿಭಟನೆಯನ್ನು ವರದಿ ಮಾಡಲು ಮುಂಜಾನೆಯೇ ಮನೆಯಿಂದ ಹೊರಟಿದ್ದ ರಮಣ್ ಕಶ್ಯಪ್ ನಾಪತ್ತೆಯಾಗಿದ್ದರು. ರಾತ್ರಿ 10 ರ ಸುಮಾರಿಗೆ ಲಖಿಂಪುರ್ ಖೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಿಂದ ಅವರು ಮೃತಪಟ್ಟಿರುವ ಸುದ್ದಿ ಮನೆಯವರಿಗೆ ತಲುಪಿತ್ತು.

ಭಾನುವಾರದ ಹಿಂಸಾಚಾರದಲ್ಲಿ ಸಾವನ್ನಪ್ಪಿದವರನ್ನು ಪಟ್ಟಿ ಮಾಡುವಾಗ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ, ತಮ್ಮ ನಾಲ್ವರು ಬಿಜೆಪಿ ಕಾರ್ಯಕರ್ತರ ಸಂಖ್ಯೆಯಲ್ಲಿ ರಮಣ್ ಕಶ್ಯಪ್ (32) ಅವರನ್ನು ಸೇರಿಸಿಕೊಂಡಿದ್ದರು.

ಆದರೆ, ಮೃತ ರಮಣ್ ಕಶ್ಯಪ್ ಅವರ ಕುಟುಂಬವು, “ಕಶ್ಯಪ್ ವರದಿಗಾರರಾಗಿ ತಮ್ಮ ಕೆಲಸವನ್ನು ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರಾಗಿರಲಿಲ್ಲ. ನನ್ನ ಮಗ ಪತ್ರಕರ್ತರಾಗಿದ್ದರು. ಮಿಶ್ರಾ ಅವರ ಮಗ ಆಶೀಶ್ ಮತ್ತು ಅವರ ಸಹಾಯಕರನ್ನು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ಈ ಕುರಿತು ಮೃತ ಪತ್ರಕರ್ತರ ಕುಟುಂಬ ಪ್ರತ್ಯಕ ದೂರು ಸಲ್ಲಿಸಿದೆ. ಸೋಮವಾರ ದಾಖಲಾದ ಎರಡು ಎಫ್‌ಐಆರ್‌ಗಳ ಹೊರತಾಗಿ ‍ಮತ್ತೊಂದು ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದೆ ಎಂದು ಎಸ್‌ಡಿಎಂ ಓಂ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

 

“ನನ್ನ ಮಗ ನಿಘಾಸನ್‌ನಲ್ಲಿ ಸಾಧನಾ ನ್ಯೂಸ್ ಚಾನೆಲ್‌ನಲ್ಲಿ ವರದಿಗಾರನಾಗಿದ್ದ. ಅಕ್ಟೋಬರ್ 3 ರಂದು,  ಮಹಾರಾಜ ಅಗ್ರಸೇನ್ ಕ್ರೀಡಾ ಮೈದಾನದಲ್ಲಿ ರೈತರ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದರು. ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ತೆನಿ ಮತ್ತು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಅಲ್ಲಿಗೆ ಬರಬೇಕಿತ್ತು. ಸಂಸದನ ಮಗ ಆಶಿಶ್ ಮಿಶ್ರಾ ಮತ್ತು ಪಕ್ಷದ ಕಾರ್ಯಕರ್ತರು ನನ್ನ ಮಗನನ್ನು ಕೊಂದಿದ್ದಾರೆ” ಎಂದು ರಮಣ್ ಕಶ್ಯಪ್ ತಂದೆ ರಾಮ್ ಅಸ್ರೆ ಕಶ್ಯಪ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
“ಘಟನಾ ಸ್ಥಳದಲ್ಲಿದ್ದವರು ನನ್ನ ಮಗ ಸಂಯುಕ್ತ್ ಕಿಸಾನ್ ಮೋರ್ಚಾ ನಾಯಕ ತೆಜಿಂದರ್ ಸಿಂಗ್ ವಿರ್ಕ್ ಅವರೊಂದಿಗೆ ವಿಡಿಯೊ ಸಂದರ್ಶನ ನಡೆಸುತ್ತಿದ್ದರು. ರೈತರ ಮೇಲೆ ಬೆಂಗಾವಲು ವಾಹನಗಳು ಹರಿದು ಬರುತ್ತಿರುವ ವಿಡಿಯೋ ಚಿತ್ರಿಕರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದಕ್ಕಾಗಿಯೇ ನನ್ನ ಮಗನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ” ಎಂದು ಕಶ್ಯಪ್ ತಂದೆ ದೂರಿನಲ್ಲಿ ಹೇಳಿದ್ದಾರೆ.
“ರಮಣ್ ಕಶ್ಯಪ್ ಭುಜದ ಮೇಲೆ ಮೂಗೇಟುಗಳು, ತಲೆಗೆ ಭಾರೀ ಗಾಯಗಳು ಮತ್ತು ಅವನ ಎದೆ ಮತ್ತು ಬಲಗೈ ಮೇಲೆ ಗುಂಡಿನ ರಂಧ್ರಗಳಿದ್ದವು” ಎಂದು ಸಹೋದರ ಪವನ್ ಹೇಳಿದ್ದಾರೆ. SDM ಓಂ ಪ್ರಕಾಶ್ ಗುಪ್ತಾ ಕುಟುಂಬವನ್ನು ಭೇಟಿ ಮಾಡಿ ಅವರರ ದೂರ ಸ್ವೀಕರಿಸಲು ಒಪ್ಪಿಕೊಂಡ ಬಳಿಕ ರಮಣ್ ಕಶ್ಯಪ್ ಅವರ ಅಂತ್ಯ ಸಂಸ್ಕಾರ ಮಾಡಲಾಗಿದೆ.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...