Homeಮುಖಪುಟಲಖಿಂಪುರ್‌: ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆತಂದ ಪೊಲೀಸರು

ಲಖಿಂಪುರ್‌: ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆತಂದ ಪೊಲೀಸರು

- Advertisement -
- Advertisement -

ಅಕ್ಟೋಬರ್‌‌‌ 3 ರಂದು ಲಖಿಂಪುರ್‌ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಘಟನೆಗಳನ್ನು ಮರುಸೃಷ್ಟಿಸಲು ಉತ್ತರ ಪ್ರದೇಶ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ರೈತರ ಹತ್ಯೆಯ ಆರೋಪಿ ಆಶಿಶ್ ಮಿಶ್ರಾ ಜೊತೆಗೆ ಆತನ ಸ್ನೇಹಿತ, ಪ್ರಕರಣದ ಸಹ ಆರೋಪಿ ಅಂಕಿತ್ ದಾಸ್‌ನನ್ನು ಪೊಲೀಸರು ಜೊತೆಗೆ ಸ್ಥಳಕ್ಕೆ ಕರೆತಂದಿದ್ದು, ಅಂದಿನ ಘಟನೆಗಳನ್ನು ಮರುಸೃಷ್ಟಿಸಲು ಕಾರುಗಳನ್ನು ಬಳಸಿದ್ದಾರೆ ಎಂದು ಅದು ಹೇಳಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಆಶಿಶ್ ಮಿಶ್ರಾ, ಘಟನೆ ನಡೆದಾಗ ತಾನು ಅಲ್ಲಿ ಇರಲಿಲ್ಲ ಎಂದು ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ಘಟನೆಗಳನ್ನು ಮರುಸೃಷ್ಟಿ ಮಾಡುತ್ತಿರುವಾಗ ಚಿತ್ರೀಕರಿಸಿದ ದೃಶ್ಯದಲ್ಲಿ, ಪೊಲೀಸ್ ಜೀಪ್ ಅತಿವೇಗದಲ್ಲಿ ಚಲಿಸುತ್ತಿರುವುದು ಮತ್ತು ಡಮ್ಮಿಗಳನ್ನು ವಾಹನದ ಮುಂದೆಯಿಟ್ಟು ಪುಡಿಮಾಡುವುದು ಕಾಣುತ್ತಿದೆ. ಈ ಡಮ್ಮಿಯನ್ನು ಹತ್ಯಗೀಡಾದ ರೈತರನ್ನು ಪ್ರತಿನಿಧಿಸಲು ರಸ್ತೆಯಲ್ಲಿ ಇರಿಸಲಾಗಿದೆ.

 

ಪ್ರಕರಣದಲ್ಲಿ ಎಫ್ಐಆರ್‌ನಲ್ಲಿ ಆಶಿಶ್‌ ಮಿಶ್ರಾ ಹೆಸರಿಸಲಾಗಿದ್ದರೂ ಘಟನೆ ನಡೆದು ಸುಮಾರು ಏಳು ದಿನಗಳ ನಂತರ ಬಂಧಿಸಲಾಗಿತ್ತು. ಬುಧವಾರ ಸಲ್ಲಿಕೆಯಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾಲಯ ಮೂರು ದಿನಗಳ ಪೊಲೀಸ್ ರಿಮಾಂಡ್‌ಗೆ ಕಳುಹಿಸಿದ್ದು, ಅದು ಇಂದಿಗೆ ಕೊನೆಗೊಳ್ಳುತ್ತದೆ. ಆದರೆ, ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುಯುವ ಸಾಧ್ಯತೆಯಿದೆ.

ಈ ಮಧ್ಯೆ ಪ್ರರಣದಲ್ಲಿ ಬುಧವಾರದಂದು ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ; ಇನ್ನಿಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...