Homeಮುಖಪುಟಕೇಂದ್ರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ: ಕಾಸರಗೋಡಿನಿಂದ-ತಿರುವನಂತಪುರಂವರೆಗೆ DYFIನಿಂದ ಮಾನವ ಸರಪಳಿ: ಲಕ್ಷಾಂತರ ಜನರು ಭಾಗಿ

ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ: ಕಾಸರಗೋಡಿನಿಂದ-ತಿರುವನಂತಪುರಂವರೆಗೆ DYFIನಿಂದ ಮಾನವ ಸರಪಳಿ: ಲಕ್ಷಾಂತರ ಜನರು ಭಾಗಿ

- Advertisement -
- Advertisement -

ಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಡಿವೈಎಫ್‌ಐ ಆಯೋಜಿಸಿದ ಮಾನವ ಸರಪಳಿ ಪ್ರತಿಭಟನೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದಾರೆ.

ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ(ಎಂ)ನ ಯೂತ್‌ ವಿಂಗ್‌ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಕೇರಳದ ಕಾಸರಗೋಡು ಜಿಲ್ಲೆಯಿಂದ ತಿರುವನಂತಪುರಂ ಜಿಲ್ಲೆಯವರೆಗೆ  651 ಕಿ.ಮೀ ಉದ್ದಕ್ಕೆ ಮಾನವ ಸರಪಳಿಯನ್ನು ನಿರ್ಮಿಸಿ ಪ್ರತಿಭಟನೆಯನ್ನು ನಡೆಸಿದೆ.

ಪ್ರತಿಭಟನೆಯಲ್ಲಿ 20 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಅಂದಾಜಿಸಲಾಗಿದೆ. ಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿರುವುದರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಮಾನವ ಸರಪಳಿಯನ್ನು ರಚಿಸಲಾಗಿತ್ತು. ಪ್ರತಿಭಟನಾಕಾರರು ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಾಕಿಯಿರುವ ಆದಾಯದ ಪಾಲು ಬಿಡುಗಡೆಗೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದ್ದಾರೆ.

ಎರ್ನಾಕುಲಂನ ವೈಟಿಲ್ಲಾದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದ ಖ್ಯಾತ ಬರಹಗಾರ ಎಂ.ಕೆ.ಸನೂ  ಮಾತನಾಡಿ, ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುವ ಫ್ಯಾಸಿಸ್ಟ್ ಶಕ್ತಿಗಳ ಪ್ರಯತ್ನಗಳನ್ನು ಪ್ರಜಾಸತ್ತಾತ್ಮಕವಾಗಿ ವಿರೋಧಿಸಬೇಕಾಗಿದೆ. ಜನರು ಪ್ರತಿಭಟನೆಯ ಹಕ್ಕನ್ನು ಬಲವಂತದಿಂದ ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತಿರುವನಂತಪುರದಲ್ಲಿ ಮಾದ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಮರಳಿ ಪಡೆಯಲು ಕೇರಳದ ಜನರು ರಾಜ್ಯ ಸರ್ಕಾರದ ಜೊತೆ ಒಗ್ಗೂಡಿದ್ದಾರೆ ಎಂದು  ಹೇಳಿದ್ದಾರೆ.

ವರದಿಗಳ ಪ್ರಕಾರ ಕೇಂದ್ರ ಸರ್ಕಾರವು ಒಟ್ಟು 57,400 ಕೋಟಿ ರೂಪಾಯಿಗಳನ್ನು ಕೇರಳಕ್ಕೆ ಅನುಮೋದಿಸಬೇಕಿದೆ. ಅದರಲ್ಲಿ 12,000 ಕೋಟಿ ರೂ. ಜಿಎಸ್‌ಟಿ ಪರಿಹಾರ, ಆದಾಯ ಪಾಲಿನ 8,400 ಕೋಟಿ ರೂ. ಸೇರಿದೆ. ಇದಲ್ಲದೆ ರಾಜ್ಯಕ್ಕೂ ಕೇಂದ್ರದಿಂದ 4,224.87 ಕೋಟಿ ರೂಪಾಯಿ ಆರ್ಥಿಕ ನೆರವು ಬಾಕಿ ಬರಬೇಕಿದೆ ಎಂದು ಹೇಳಲಾಗಿದೆ.

ಫೆಬ್ರವರಿ 8 ರಂದು ದೆಹಲಿಯಲ್ಲಿ ಪ್ರತಿಭಟನೆ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಎಲ್‌ಡಿಎಫ್ ಸಂಸದರು ಮತ್ತು ಶಾಸಕರು ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ಫೆಬ್ರವರಿ 8 ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ತೆರಿಗೆ ಪಾಲು ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಣವನ್ನು ಕೇಂದ್ರ ತಡೆ ಹಿಡಿಯುತ್ತದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಬಹಳ ಮುಖ್ಯ. ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಕೇಂದ್ರ ಸರ್ಕಾರವು ಅಭಿವೃದ್ಧಿ ಚಟುವಟಿಕೆಗಳಿಗೆ ಹಣಕಾಸು ಸಹಾಯ ಪಡೆಯುವ ಹಕ್ಕನ್ನು ಸಹ ಮೊಟಕುಗೊಳಿಸಿದೆ.  ಕೇರಳಕ್ಕೆ ಸಾಲ ಪಡೆಯಲು ಅವಕಾಶವಿಲ್ಲದಂತೆ ಮಾಡಿದೆ ಎಂದು ಕೇರಳ ಸರಕಾರ ಈ ಮೊದಲು ಆರೋಪಿಸಿತ್ತು.

ಕಳೆದ ಹಲವಾರು ತಿಂಗಳುಗಳಿಂದ ಕೇರಳ ಸರ್ಕಾರ ಮತ್ತು ಎಲ್‌ಡಿಎಫ್ ರಾಜ್ಯದಲ್ಲಿ ಪ್ರತಿಭಟನೆಗೆ ಮುಂದಾಗಿದೆ. ಬಿಜೆಪಿ ನೇತೃತ್ವದ ಸರ್ಕಾರವು ರಾಜ್ಯದ ಸಾಲದ ಮಿತಿಯನ್ನು ಕಡಿತಗೊಳಿಸುವ ಮೂಲಕ ರಾಜ್ಯವನ್ನು ಹೇಗೆ ಆರ್ಥಿಕವಾಗಿ ಉಸಿರುಗಟ್ಟಿಸುತ್ತಿದೆ ಎಂಬುವುದನ್ನು ಹೇಳಿಕೊಂಡು ಬಂದಿದೆ. ರಾಜ್ಯದ ಸಾಲದ ಮೇಲೆ ಕೇಂದ್ರ ಸರ್ಕಾರ ಹೇರಿರುವ ಮಿತಿಯನ್ನು ಪ್ರಶ್ನಿಸಿ ರಾಜ್ಯವು ಈಗಾಗಲೇ ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಕೂಡ ಸಲ್ಲಿಸಿದೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ ರಾಜ್ಯದ ಬೂತ್ ಮಟ್ಟದ ಎಲ್‌ಡಿಎಫ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ರಾಜ್ಯದ ಜನರಿಗೆ ಈ ಬಗ್ಗೆ ತಿಳಿಸಲಿದ್ದಾರೆ. ಎಲ್ಲಾ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಈ ಬಗ್ಗೆ ಸಾರ್ವಜನಿಕ ಸಭೆ ಕೂಡ ನಡೆಯಲಿದೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...