Homeಮುಖಪುಟಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

- Advertisement -
- Advertisement -

ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ಹಸು, ಕರು, ಗೂಳಿ ಮತ್ತು ಎತ್ತಿನ ಹತ್ಯೆಗೆ ಸಂಪೂರ್ಣ ನಿಷೇಧ ಹೇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗೋಹತ್ಯೆ ತಡೆ ಕಾನೂನು ಉಲ್ಲಂಘನೆಗಾಗಿ ಗರಿಷ್ಠ ಜೀವಾವಧಿ ಶಿಕ್ಷೆಯೊಂದಿಗೆ ಪ್ರಸ್ತಾಪವನ್ನು ಸಾರ್ವಜನಿಕ ಪ್ರತಿಕ್ರಿಯೆಗಾಗಿ ಆಹ್ವಾನಿಸಿದೆ.

ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸಿರುವ ಕಾನೂನಿನ ಪ್ರಕಾರ, ಯಾವುದೇ ರೂಪದಲ್ಲಿ ಗೋಮಾಂಸ ಅಥವಾ ಗೋಮಾಂಸದ ಉತ್ಪನ್ನಗಳ ಮಾರಾಟ, ಸಂಗ್ರಹಣೆ ಅಥವಾ ಸಾಗಣೆಯನ್ನು ಈ ಕಾನೂನು ನಿಷೇಧಿಸುತ್ತದೆ.

ಈ ನಿಟ್ಟಿನಲ್ಲಿ, 2021 ರ ಲಕ್ಷದ್ವೀಪ ಪ್ರಾಣಿ ಸಂರಕ್ಷಣಾ ನಿಯಂತ್ರಣದ ಕರಡನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಇಡಲಾಗಿದ್ದು, ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು 2021ರ ಮಾರ್ಚ್ 28ರ ಒಳಗೆ ಅಥವಾ ಅದಕ್ಕೂ ಮೊದಲು ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಕರಡು ನಿಯಮಗಳು ಎಲ್ಲಾ ಹಸುಗಳು, ಕರುಗಳು (ಗಂಡು ಮತ್ತು ಹೆಣ್ಣು), ಎತ್ತು ಮತ್ತು ಎತ್ತಿನ ಹತ್ಯೆಯ ಸಂಪೂರ್ಣ ನಿಷೇಧವನ್ನು ಆಲೋಚಿಸುತ್ತವೆ. ಬೇರೆ ಯಾವುದೇ ಪ್ರಾಣಿಗಳ ಹತ್ಯೆಗೂ ಸಹ, ಸಮರ್ಥ ಪ್ರಾಧಿಕಾರದಿಂದ ಪ್ರಮಾಣಪತ್ರದ ಅಗತ್ಯವಿರುತ್ತದೆ.

ಈ ನಿಬಂಧನೆಯ ಉಲ್ಲಂಘನೆಗೆ ನಿಡುವ ಶಿಕ್ಷೆ ಹತ್ತು ವರ್ಷಗಳಿಗಿಂತ ಕಡಿಮೆಯಿರಬಾರದು, ಇದನ್ನೂ ಜೀವಾವಧಿ ಶಿಕ್ಷೆಗೂ ವಿಸ್ತರಿಸಬಹುದು. ಜೊತೆಗೆ 1 ಲಕ್ಷ ರೂಪಾಯಿಗೆ ಕಡಿಮೆ ಇರದಂತೆ 5 ಲಕ್ಷ ರೂ.ಗಳವರೆಗೆ ದಂಡವನ್ನು ವಿಧಿಸಬಹುದು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

“ಯಾವುದೇ ವ್ಯಕ್ತಿಯು ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಮಾರಾಟ ಮಾಡಲು ಅಥವಾ ಖರೀದಿಸಲು ನೇರವಾಗಿ ಅಥವಾ ಪರೋಕ್ಷವಾಗಿ ಮಾರಾಟ ಮಾಡಬಾರದು, ಇಡಬಾರದು, ಸಂಗ್ರಹಿಸಬಾರದು, ಸಾಗಿಸಬಾರದು ಮತ್ತು ಯಾರಿಗೂ ನೀಡಬಾರದು” ಎಂದು ನಿಬಂಧನೆಯ ಸೆಕ್ಷನ್ 8 ಗೋಮಾಂಸ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಪ್ರಯತ್ನಿಸುತ್ತದೆ.

ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳನ್ನು ಸಾಗಿಸಲು ಬಳಸುವ ಯಾವುದೇ ವಾಹನ ಅಥವಾ ಸಾಗಣೆಯನ್ನು ಕಾನೂನಿನಡಿ ನೇಮಕಗೊಂಡ ಅಧಿಕಾರಿ ವಶಪಡಿಸಿಕೊಳ್ಳಬಹುದು. ಜೊತೆಗೆ ವಾಹನವನ್ನು ಕೇಂದ್ರಾಡಳಿತ ಪ್ರದೇಶ ಮುಟ್ಟುಗೋಲು ಹಾಕಿಕೊಳ್ಳುತ್ತದೆ.

ಕರ್ನಾಟಕದಲ್ಲಿ ಈಗಾಗಲೇ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ರೈತರು, ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಸೇರಿದಂತೆ ರೈತರು ಗಂಡು ಕರುಗಳನ್ನು ಪೊಲೀಸ್ ಠಾಣೆ ಮುಂದೆ ಕರೆ ತಂದು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...