Homeಚಳವಳಿಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

ಲಕ್ಷದ್ವೀಪ: ದೇಶದ್ರೋಹ ಆರೋಪದ ವಿರುದ್ದ ಕೇರಳ ಹೈಕೋರ್ಟ್‌ ಮಟ್ಟಿಲೇರಿದ ನಿರ್ಮಾಪಕಿ ಆಯಿಷಾ ಸುಲ್ತಾನ

- Advertisement -
- Advertisement -

ತನ್ನ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಕೋರಿ ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ ಸೋಮವಾರ ಕೇರಳ ಹೈಕೋರ್ಟ್‌ನ್ನು ಸಂಪರ್ಕಿಸಿದ್ದಾರೆ. ದೂರದರ್ಶನ ಚರ್ಚೆಯೊಂದರಲ್ಲಿ ಅವರು ನೀಡಿದ್ದ ಹೇಳಿಕೆಯ ಬಗ್ಗೆ ಲಕ್ಷದ್ವೀಪ ಬಿಜೆಪಿ ಅಧ್ಯಕ್ಷ ಸಿ. ಅಬ್ದುಲ್ ಖಾದರ್ ಹಾಜಿ ನೀಡಿದ ದೂರಿನ ಮೇರೆಗೆ ಜೂನ್ 10 ರಂದು ದ್ವೀಪದ ಪೊಲೀಸರು ಆಯಿಷಾ ಸುಲ್ತಾನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಲಯಾಳಂ ಟಿವಿ ಚಾನೆಲ್‌ ಒಂದರಲ್ಲಿ ಕಾಣಿಸಿಕೊಂಡಿದ್ದ ಆಯಿಷಾ ಸುಲ್ತಾನ, “ಶೂನ್ಯ ಕೊರೊನಾವಿದ್ದ ಪ್ರದೇಶದಲ್ಲಿ ದಿನಕ್ಕೆ ನೂರು ಪ್ರಕರಣಗಳು ವರದಿಯಾಗುತ್ತಿವೆ. ಒಕ್ಕೂಟ ಸರ್ಕಾರ ಹೊಸದಾಗಿ ನೇಮಕಮಾಡಿದ್ದ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರನ್ನು ಪ್ರಯೋಗಿಸಿದ್ದು ‘ಜೈವಿಕ ಅಸ್ತ್ರ’ ರೀತಿಯಲ್ಲಾಗಿದೆ. ನನಗೆ ಸ್ಪಷ್ಟವಾಗಿ ಹೇಳಲು ಸಾಧ್ಯ, ಒಕ್ಕೂಟ ಸರ್ಕಾರವು ಕೊರೊನಾವನ್ನು ಜೈವಿಕ ಅಸ್ತ್ರವಾಗಿ ಪ್ರಯೋಗಿಸಿದೆ” ಎಂದು ಹೇಳಿದ್ದರು. ಇದನ್ನು ಬಿಜೆಪಿ ವಿವಾದವನ್ನಾಗಿ ಮಾಡಿತ್ತು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಆಯಿಷಾ ಸುಲ್ತಾನ ಅವರ ಹೇಳಿಕೆಯನ್ನು ವಿವಾದವನ್ನಾಗಿಸಿದ ಬಿಜೆಪಿ ಅವರ ವಿರುದ್ದ ದೇಶದ್ರೋಹದ ಆರೋಪ ಹೊರಿಸಿ ದೂರು ನೀಡಿತ್ತು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಲಕ್ಷದ್ವೀಪದ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಎಫ್‌ಐಆರ್‌ ದಾಖಲಾದ ಹಿನ್ನಲೆಯಲ್ಲಿ ಜೂನ್ 20 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಆಯಿಷಾ ಅವರನ್ನು ಕೇಳಲಾಗಿದೆ.

ತಮ್ಮ ಹೇಳಿಕೆಯನ್ನು ಬಿಜೆಪಿ ವಿವಾದ ಮಾಡಿದ ಹಿನ್ನಲೆಯಲ್ಲಿ ಆಯಿಷಾ ಸ್ಪಷ್ಟೀಕರಣ ಕೂಡಾ ನೀಡಿದ್ದರು. “ನಾನು ಪಟೇಲ್ ಅವರ ಕೆಲವು ನಿರ್ಧಾರಗಳನ್ನು ಉಲ್ಲೇಖಿಸಿ ಟೀಕಿಸಿದ್ದೆನೆಯೆ ಹೊರತು ದೇಶದ ವಿರುದ್ದ ಅಲ್ಲ. ಅವರ ನಡೆಯ ಕಾರಣದಿಂದಾಗಿ ಶೂನ್ಯವಿದ್ದ ಲಕ್ಷದ್ವೀಪದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಆದ್ದರಿಂದಲೆ ಅವರನ್ನು ನಾನು ಜೈವಿಕ ಅಸ್ತ್ರ ಎಂದು ಕರೆದಿದ್ದೇನೆ” ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಆಯಿಷಾ ಸುಲ್ತಾನ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುತ್ತಿದ್ದಂತೆ ಅನೇಕ ಸ್ಥಳೀಯ ಬಿಜೆಪಿ ನಾಯಕರು ಪಕ್ಷವನ್ನು ತೊರೆದು ಪ್ರತಿಭಟಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ, ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರು ಪರಿಚಯಿಸಿದ ಹೊಸ ನಿಯಮಗಳ ವಿರುದ್ದ ದ್ವೀಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹೊಸ ನೀತಿಗಳು ದ್ವೀಪವಾಸಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...