Homeಮುಖಪುಟಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ - ಆಡಳಿತ ದುರುಪಯೋಗ ಆರೋಪ

ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

- Advertisement -
- Advertisement -

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದೀಗ ಮತ್ತೆ ತನ್ನ ಅಧಿಕಾರವನ್ನು ದುರುಪಯೋಗ ಮಾಡಲು ಆಡಳಿತಾಧಿಕಾರಿ ಹೊರಟಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಫುಲ್ ಪಟೇಲ್‌‌‌, ಲಕ್ಷದ್ವೀಪದ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಬದಲಾಯಿಸಲು ಪ್ರಸ್ತಾಪ ಇಟ್ಟಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು. ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

“ನ್ಯಾಯಾಂಗ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಫುಲ್‌ ಪಟೇಲ್‌‌ ಅವರ ಪ್ರಯತ್ನವು, ಅಧಿಕಾರದ ಸಂಪೂರ್ಣ‌ ದುರುಪಯೋಗವಾಗಿದೆ. ಈ ದ್ವೀಪಗಳಲ್ಲಿನ ಜನರ ಮಾತೃಭಾಷೆ ಮಲಯಾಳಂ ಆಗಿದ್ದು, ಕೇರಳ ಹೈಕೋರ್ಟ್‌ನ ಸಂಪೂರ್ಣ ಹೆಸರು ‘ಕೇರಳ ಮತ್ತು ಲಕ್ಷದ್ವೀಪ ಹೈಕೋರ್ಟ್’ ಎಂದಾಗಿದೆ. ಪ್ರಫುಲ್ ಪಟೇಲ್‌ಗಿಂತಲೂ ಮುಂಚೆ ಇಲ್ಲಿ ಹಲವು ಆಡಳಿತಾಧಿಕಾರಿಗಳು ಆಡಳಿತ ನಡೆಸಿದ್ದಾರೆ. ಯಾರಿಗೂ ಈ ರೀತಿಯ ಆಲೋಚನೆ ಇರಲಿಲ್ಲ. ನಾವು ಈ ಪ್ರಸ್ತಾಪವನ್ನು ವಿರೋಧಿಸುತ್ತೇವೆ” ಎಂದು ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್‌ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ಪ್ರಸ್ತುತ ಲಕ್ಷದ್ವೀಪದ ಹೈಕೋರ್ಟ್‌ ಕೂಡಾ ಆಗಿರುವ ಕೇರಳ ಹೈಕೋರ್ಟ್‌ ಲಕ್ಷದ್ವೀಪದಿಂದ 400 ಕಿ.ಮೀ.ದೂರದಲ್ಲಿದೆ. ಆದರೆ ಪ್ರಫುಲ್ ಪಟೇಲ್‌ ಹೊಸದಾಗಿ ಪ್ರಸ್ತಾಪ ಮಾಡಿರುವ ಕರ್ನಾಟಕ ಹೈಕೋರ್ಟ್‌ ದ್ವೀಪದಿಂದ 1,000 ಕಿ.ಮೀ. ದೂರದಲ್ಲಿದೆ. ಇದು ದ್ವೀಪವಾಸಿಗಳಿಗೆ ನ್ಯಾಯ ನಿರಾಕರಿಸುವ ಹುನ್ನಾರ ಎಂದು ಕೂಡಾ ಆರೋಪಿಸಲಾಗಿದೆ.

ಸಂವಿಧಾನದ 241 ನೇ ವಿಧಿ ಪ್ರಕಾರ ಹೈಕೋರ್ಟ್‌ನ ಅಧಿಕಾರ ವ್ಯಾಪ್ತಿಯನ್ನು ಸಂಸತ್ತಿನ ಕಾಯ್ದೆಯ ಮೂಲಕ ಮಾತ್ರ ಬದಲಿಸಬಹುದಾಗಿದೆ. ಈ ವಿಧಿಯ ಅನುಚ್ಛೇದ (1)ರ ಪ್ರಕಾರ ಸಂಸತ್ತು ತನ್ನ ಕಾಯಿದೆಯ ಮೂಲಕ ಕೇಂದ್ರಾಡಳಿತ ಪ್ರದೇಶಕ್ಕಾಗಿ ಹೈಕೋರ್ಟ್‌ ಸ್ಥಾಪಿಸಬಹುದು ಅಥವಾ ಆ ಪ್ರದೇಶದಲ್ಲಿರುವ ನ್ಯಾಯಾಲಯವನ್ನು ಹೈಕೋರ್ಟ್‌ ಆಗಿ ಪರಿವರ್ತಿಸಬಹುದು.

ಲಕ್ಷದ್ವೀಪ ಆಡಳಿತ ಸುಧಾರಣೆಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ಕರಡು ನಿಯಮಗಳನ್ನು ಪ್ರಶ್ನಿಸಿ ಕೆಪಿಸಿಸಿ ಪದಾಧಿಕಾರಿ ನೌಶಾದ್‌ ಆಲಿ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತಿರಸ್ಕರಿಸಿದೆ. ಆಡಳಿತ ಸುಧಾರಣೆಗಳ ಬಗ್ಗೆ ದೂರುದಾರರು ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಆದರೆ ನ್ಯಾಯಾಲಯ ಅದಕ್ಕೆ ಅವಕಾಶ ನೀಡಿಲ್ಲ. ಬದಲಾಗಿ, ವಿವರಣೆ ಕೋರಿ ಕೇಂದ್ರ ಮತ್ತು ಲಕ್ಷದ್ವೀಪ ಆಡಳಿತಕ್ಕೆ ಪತ್ರ ಕಳುಹಿಸಿದೆ.

ಇದನ್ನೂ ಓದಿ: ಒಂದು ಸಲದ ಲಕ್ಷದ್ವೀಪದ ಭೇಟಿಗೆ 23 ಲಕ್ಷ ಖರ್ಚು: ಪುಟ್ಟ ದ್ವೀಪದ ಮೇಲೆ ಬಿಜೆಪಿಯ ದೊಡ್ಡ ಹೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...