Homeಮುಖಪುಟಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

- Advertisement -
- Advertisement -

ಲಕ್ಷದ್ವೀಪದ ಆಡಳಿತಾಧಿಕಾರಿಯ ವಿರುದ್ದ ಹೋರಾಟ ನಡೆಸುತ್ತಿರುವ ದ್ವೀಪವಾಸಿಗಳು ಮೊದಲ ಹಂತದ ನ್ಯಾಯಾಂಗ ಗೆಲುವು ದಾಖಲಿಸಿದ್ದು, ಪ್ರಫುಲ್ ಪಟೇಲ್‌ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಪ್ರಫುಲ್‌ ಪಟೇಲ್ ನೇತೃತ್ವದ ಲಕ್ಷದ್ವೀಪ ಆಡಳಿತದ ಎರಡು ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಶಾಂತವಾಗಿದ್ದ ಲಕ್ಷದ್ವೀಪದಲ್ಲಿ ರಾಜಕೀಯ ಪ್ರತಿಭಟನೆಗಳು ಪ್ರಾರಂಭವಾಗಿದೆ. ದ್ವೀಪಕ್ಕೆ ಹೊಸದಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌‌ ದ್ವೀಪದ ಸಂಸ್ಕೃತಿಯನ್ನು ಹಾಳುಗೆಡವುತ್ತಿದ್ದಾರೆ ಮತ್ತು ತಮ್ಮ ಹಾಗೂ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ದ್ವೀಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದ್ವೀಪವಾಸಿಗಳು ಆರೋಪಿಸುತ್ತಿದ್ದಾರೆ. ಅವರು ದ್ವೀಪದಲ್ಲಿ ಆಡಳಿತ ವಹಿಸಿಕೊಂಡ ನಂತರ ಮಾಡಿರುವ ಕೊರೊನಾ ಮಾರ್ಗಸೂಚಿಯ ಬದಲಾವಣೆ, ಮೀನುಗಾರರ ಗುಡಿಸಲು ತೆರವು, ಗೂಂಡಾ ಕಾಯ್ದೆ ಸೇರಿದಂತೆ ಜಾರಿ ಮತ್ತಿತರ ನಿರ್ಣಯಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಇದುವರೆಗೂ 23 ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ಹೇಗಿತ್ತು? ಈಗೇನಾಗುತ್ತಿದೆ? 

ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ನೇತೃತ್ವದ ವಿಭಾಗೀಯ ಪೀಠ ನೀಡಿದ ಆದೇಶದಲ್ಲಿ, ದ್ವೀಪಗಳಲ್ಲಿನ ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲಾ ಮಕ್ಕಳ ಮಧ್ಯಾಹ್ನದ ಊಟದ ಮೆನುವಿನಿಂದ ಕೋಳಿ, ಗೋಮಾಂಸ ಮತ್ತು ಇತರ ಮಾಂಸವನ್ನು ಬದಲಾಯಿಸುವ ಆಡಳಿತದ ನಿರ್ಧಾರಗಳನ್ನು ತಡೆಹಿಡಿದಿದೆ.

ಲಕ್ಷದ್ವೀಪದ ಕವರತ್ತಿ ಮೂಲದ ವಕೀಲ ಅಜ್ಮಲ್ ಅಹಮದ್ ಅವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಆದೇಶ ಹೊರಡಿಸಲಾಗಿದೆ. ನ್ಯಾಯಾಲಯವು ಲಕ್ಷದ್ವೀಪದ ಆಡಳಿತ ಮತ್ತು ಆಡಳಿತಾಧಿಕಾರಿ ಪ್ರಫುಲ್‌‌ ಪಟೇಲ್ ಅವರಿಂದ ಪ್ರತಿಕ್ರಿಯೆಗಳನ್ನು ಕೇಳಿದೆ.

ಡೈರಿ ಫಾರ್ಮ್‌ಗಳನ್ನು ಮುಚ್ಚುವುದು ಮತ್ತು ಶಾಲಾ ಮಕ್ಕಳ ಮಧ್ಯಾಹ್ನದ ಊಟದ ಮೆನುವಿನಿಂದ ಮಾಂಸಾಹಾರವನ್ನು ತೆಗೆಯುವ ಆಡಳಿತಾಧಿಕಾರಿಯ ನಿರ್ಧಾರಗಳು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ನಿರ್ಧಾರಗಳು ದ್ವೀಪವಾಸಿಗಳ ಸಂಸ್ಕೃತಿ ಮತ್ತು ಆಹಾರ ಪದ್ಧತಿಯನ್ನು ನಾಶಪಡಿಸುವ ಗುರಿಯನ್ನು ಹೊಂದಿವೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ಇದನ್ನೂ ಓದಿ: ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

ದ್ವೀಪಗಳ ಚುನಾಯಿತ ಸ್ಥಳೀಯ ಸಂಸ್ಥೆಗಳೊಂದಿಗೆ ಯಾವುದೇ ಸೂಕ್ತ ಸಮಾಲೋಚನೆ ಇಲ್ಲದೆ ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಪ್ರಾಣಿಗಳನ್ನು ಹರಾಜು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿ ಹೇಳಿತ್ತು.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...