Homeಕರ್ನಾಟಕಬೈಕಿಗೆ ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು

ಬೈಕಿಗೆ ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಡಿಕ್ಕಿ, ರೈತ ಸಾವು

- Advertisement -
- Advertisement -

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ರೈತರೊಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ.

ದುರ್ಘಟನೆಯಲ್ಲಿ ಬೈಕ್ ಸವಾರ ಕೂಡ್ಲೆಪ್ಪ ಹನುಮಂತ ಬೋಳಿ ಎಂಬ 58 ವರ್ಷದ ರೈತರು ಅಪಘಾತದಲ್ಲಿ ತೀವ್ರ ಗಾಯಗೊಂಡು ನಿಧನರಾಗಿದ್ದಾರೆ. ಹೊಲದ ಕೆಲಸ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ಡಿಸಿಎಂ ಪುತ್ರನ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿ ವಿಜಯಪುರ ಮಾರ್ಗವಾಗಿ ಕೆಎ22 ಎಂಸಿ5151 ನಂ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ದಾರಿಯಲ್ಲಿ ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ರೈತರ ಬೈಕ್‌ಗೆ ಗುದ್ದಿದೆ. ರೈತ ಕೂಡ್ಲೆಪ್ಪ ಹನುಮಂತ ಬೋಳಿ ತಲೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಉಳಿದಿಲ್ಲ. ಮೃತರನ್ನು ಬಾಗಲಕೋಟೆ ತಾಲ್ಲೂಕಿನ ಚಿಕ್ಕಹಂಡರಗಲ್ ನಿವಾಸಿಯೆಂದು ಗುರುತಿಸಲಾಗಿದೆ.

ಅಪಘಾತ ನಡೆಸಿ, ತಮ್ಮ ವಾಹನದ ನಂಬರ್ ಪ್ಲೇಟ್‌ ಹಾನಿಗೊಳಿಸಿ ಪರಾರಿಯಾಗಲು ಚಿದಾನಂದ ಸವದಿ ಯತ್ನಿಸಿದ್ದರು ಎಂಬ ಆರೋಪಗಳು ಕೇಳಿಬರುತ್ತಿದೆ. ಆದರೆ, ಈ ಆರೋಪಗಳನ್ನು ಚಿದಾನಂದ ನಿರಾಕರಿಸಿದ್ದು, ಅಪಘಾತವಾದ ಕಾರಿನಲ್ಲಿ ತಾನು ಇರಲಿಲ್ಲ, ನಾನು ಸ್ನೇಹಿತನ ಕಾರಿನಲ್ಲಿ ಮುಂದೆ ತೆರಳುತ್ತಿದ್ದೆ. ನಾನು ತೆರಳುತ್ತಿದ್ದ ಕಾರು 30 ಕಿಲೋಮೀಟರ್ ಮುಂದೆ ಇತ್ತು. ನನ್ನ ಕಾರಿನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಘಟನೆಯ ವೇಳೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಗಾಯಾಳುವನ್ನು ಆ್ಯಂಬುಲೆನ್ಸ್‌ಗೆ ಶಿಫ್ಟ್ ಮಾಡುವ ವೇಳೆ ಜನರು ಬಂದಿದ್ದರು” ಎಂದು ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ್ ಜಗಲಾಸರ್‌ ಕೂಡ, ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿ ಅಪಘಾತವಾದ ಸ್ಥಳದಿಂದ ಹೋರಟು ಹೋಗಿರಲಿಲ್ಲ. ಹುನಗುಂದ ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಗಾಯಾಳುವನ್ನು ಆಂಬ್ಯುಲೆನ್ಸ್‌ಗೆ ಶಿಫ್ಟ್‌ ಮಾಡಿದ ಬಳಿಕ ಅಲ್ಲಿಂದ ತೆರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಮೃತನ ಕುಟುಂಬಸ್ಥರು ಚಿದಾನಂದ ಸವದಿ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕೂಡ ನ್ಯಾಯಯುತ ತನಿಖೆಗೆ ಆಗ್ರಹಿಸಿದೆ. “ಡಿಸಿಎಂ ಸವದಿ ಪುತ್ರನ ಕಾರು ಡಿಕ್ಕಿಯಿಂದ ಸಂಭವಿಸಿದ ಅಪಘಾತ ಪ್ರಕರಣವನ್ನ ಮುಚ್ಚಿ ಹಾಕಲು ಸರ್ಕಾರ ಪ್ರಯತ್ನಿಸುತ್ತಿರುವ ಸುದ್ದಿ ಬರುತ್ತಿವೆ. ಹಿಂದೆ ಸಿಟಿ ರವಿ ಹಾಗೂ ಆರ್ ಅಶೋಕ್ ಅವರ ಪುತ್ರನ ಪ್ರಕರಣಗಳಲ್ಲಿಯೂ ತಪ್ಪಿತಸ್ತರನ್ನ ಬಾಚವು ಮಾಡಲಾಗಿತ್ತು. ಗೃಹ ಸಚಿವ ಬಸವರಾಜ ಬೊಮ್ಮಯಿ ಅವರೇ, ಯಾವುದೇ ಪ್ರಭಾವಕ್ಕೆ ಒಳಪಡದೆ ಈ ಪ್ರಕರಣದ ಮೃತರಿಗೆ ನ್ಯಾಯ ಒದಗಿಸಿ” ಎಂದು ಒತ್ತಾಯಿಸಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ‘ಪುನರಾವರ್ತಿತ’ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...