Homeಮುಖಪುಟಲಕ್ಷ್ಮಿ ಪುರಿ ಮಾನನಷ್ಟ ಪ್ರಕರಣ: ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸಂಸದ ಸಾಕೇತ್ ಗೋಖಲೆಗೆ ಕೋರ್ಟ್ ಆದೇಶ

ಲಕ್ಷ್ಮಿ ಪುರಿ ಮಾನನಷ್ಟ ಪ್ರಕರಣ: ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸಂಸದ ಸಾಕೇತ್ ಗೋಖಲೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾಜಿ ರಾಜತಾಂತ್ರಿಕ ಅಧಿಕಾರಿ ಲಕ್ಷ್ಮಿ ಪುರಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಗೋಖಲೆ ಅವರ ಎಕ್ಸ್‌ ಪೋಸ್ಟ್‌ಗಳು ಮಾನಹಾನಿಕರ ಎಂದು ಕಳೆದ ವರ್ಷ ಹೈಕೋರ್ಟ್ ತೀರ್ಪು ನೀಡಿತ್ತು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಮತ್ತು ಅವರ ಎಕ್ಸ್ ಹ್ಯಾಂಡಲ್‌ನಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸುವುದರ ಜೊತೆಗೆ ಲಕ್ಷ್ಮಿ ಪುರಿ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶಿಸಿತ್ತು.

ಈ ನಿರ್ದೇಶನಗಳನ್ನು ಪಾಲಿಸದೆ ಗೋಖಲೆ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಪುರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಗೋಖಲೆ ಅವರ ವಕೀಲರು, ಹೈಕೋರ್ಟ್‌ನ 2024 ರ ನಿರ್ದೇಶನಗಳ ವಿರುದ್ಧ ಗೋಖಲೆ ಸಲ್ಲಿಸಿದ ಅರ್ಜಿಯನ್ನು ಅಂತಿಮವಾಗಿ ತೀರ್ಮಾನಿಸುವವರೆಗೆ ಮುಚ್ಚಿದ ಲಕೋಟೆಯಲ್ಲಿ ಅವರು ಕ್ಷಮೆಯಾಚಿಸಬಹುದು ಎಂದು ವಾದಿಸಿದ್ದರು.

ಆದರೆ, ಈ ವಾದವನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ಅವರು ತಿರಸ್ಕರಿಸಿದ್ದಾರೆ ಮತ್ತು ಎರಡು ವಾರಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸುವಂತೆ ಗೋಖಲೆ ಅವರಿಗೆ ನಿರ್ದೇಶನ ನೀಡಿದ್ದಾರೆ.

ಲಕ್ಷ್ಮಿ ಪುರಿ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿಯಾಗಿದ್ದು, 2021 ರಲ್ಲಿ, ಅವರು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ತಮ್ಮ ಆದಾಯ ಮೀರಿ ಕೆಲವು ಆಸ್ತಿಯನ್ನು ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಾಕೇತ್ ಹಾಕಿದ್ದ ಪೋಸ್ಟ್‌ಗಳ ವಿರುದ್ಧ ಮೊಕದ್ದಮೆ ಹೂಡಿದ್ದರು.

ಜುಲೈ 2021ರಲ್ಲಿ, ನ್ಯಾಯಾಲಯವು ಗೋಖಲೆ ಅವರಿಗೆ ಎಕ್ಸ್‌ ಪೋಸ್ಟ್‌ಗಳನ್ನು ತೆಗೆದುಹಾಕಲು ಮತ್ತು ಪುರಿ ವಿರುದ್ಧ ಯಾವುದೇ ಮಾನನಷ್ಟಕರ ವಿಷಯವನ್ನು ಪೋಸ್ಟ್ ಮಾಡದಂತೆ ನಿರ್ದೇಶಿಸಿ ಮಧ್ಯಂತರ ಆದೇಶ ನೀಡಿತ್ತು.

ಜುಲೈ 2024 ರಲ್ಲಿ ನೀಡಿದ ಅಂತಿಮ ತೀರ್ಪಿನಲ್ಲಿ, ಹೈಕೋರ್ಟ್ ಗೋಖಲೆ ಅವರಿಗೆ ಲಕ್ಷ್ಮಿ ಪುರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲು ಮತ್ತು ಕ್ಷಮೆಯಾಚನೆಯನ್ನು ಪ್ರಕಟಿಸಲು ನಿರ್ದೇಶಿಸಿತ್ತು.

ನಂತರ ಗೋಖಲೆ ಅವರು ಪರಿಹಾರವನ್ನು ಪಾವತಿಸಲು ಆದೇಶಿಸಿದ ತೀರ್ಪನ್ನು ಹಿಂಪಡೆಯಲು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಮೇ 2, 2025 ರಂದು, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಗೋಖಲೆ ಅವರು ಹೈಕೋರ್ಟ್‌ನ 2024 ರ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿ ಲಕ್ಷ್ಮಿ ಪುರಿ ಈ ವರ್ಷದ ಆರಂಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೂಡಿದ್ದರು.

ಪರಿಹಾರ ಪಾವತಿಸುವಂತೆ ನೀಡಿದ್ದ ಆದೇಶ ಹಿಂಪಡೆಯಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಗೋಖಲೆ ಪರ ವಕೀಲರು ಇತ್ತಿಚೆಗೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಅಲ್ಲದೆ, 50 ಲಕ್ಷ ರೂ. ಠೇವಣಿ ಇಡುವವರೆಗೆ ಗೋಖಲೆ ಅವರ ಸಂಬಳದ ಒಂದು ಭಾಗವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿದೆ ಎಂದು ಅವರು ಗಮನಸೆಳೆದಿದ್ದಾರೆ.

ಈ ಮೇಲ್ಮನವಿ ಅಂತಿಮವಾಗಿ ಇತ್ಯರ್ಥವಾಗುವವರೆಗೆ ಗೋಖಲೆ ಅವರು ಮುಚ್ಚಿದ ಲಕೋಟೆಯಲ್ಲಿ ಕ್ಷಮೆಯಾಚಿಸಬಹುದು ಎಂದು ವಕೀಲರು ವಾದಿಸಿದ್ದಾರೆ.

ಆದಾಗ್ಯೂ, ನ್ಯಾಯಾಲಯವು ಅಂತಹ ಯಾವುದೇ ದಯೆ ತೋರಿಸಲು ನಿರಾಕರಿಸಿದೆ.

ಮಸೂದೆ ಅನುಮೋದನೆಗೆ ಗಡುವು: ಸುಪ್ರೀಂ ಕೋರ್ಟ್‌ಗೆ 14 ಪ್ರಶ್ನೆಗಳನ್ನು ಕೇಳಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...