Homeಮುಖಪುಟಮಹಾ ಕುಂಭವನ್ನು 'ಅರ್ಥಹೀನ' ಎಂದ ಲಾಲು ಪ್ರಸಾದ್; ವಿವಾದ ಸೃಷ್ಟಿಸಿದ ಆರ್‌ಜೆಡಿ ಮುಖ್ಯಸ್ಥರ ಹೇಳಿಕೆ

ಮಹಾ ಕುಂಭವನ್ನು ‘ಅರ್ಥಹೀನ’ ಎಂದ ಲಾಲು ಪ್ರಸಾದ್; ವಿವಾದ ಸೃಷ್ಟಿಸಿದ ಆರ್‌ಜೆಡಿ ಮುಖ್ಯಸ್ಥರ ಹೇಳಿಕೆ

- Advertisement -
- Advertisement -

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಹಾ ಕುಂಭವನ್ನು ‘ಅರ್ಥಹೀನ’ ಎಂದು ಕರೆದಿರುವುದು ವಿವಾದಕ್ಕೆ ಕಾರಣವಾಗಿದೆ. ಮಹಾಕುಂಭಕ್ಕೆ ತೆಳುತ್ತಿದ್ದ 18 ಜನರು ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಬಲಿಯಾದ ಘಟನೆಗೆ ರೈಲ್ವೆ ಇಲಾಖೆಯನ್ನು ದೂಷಿಸಿದ ಆರ್‌ಜೆಡಿ ಮುಖ್ಯಸ್ಥರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದ ಘಟನೆಯ ಬಗ್ಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡರು, ರೈಲ್ವೆ ಸಚಿವರ ರಾಜೀನಾಮೆಗೆ ಒತ್ತಾಯಿಸಿದರು.

“ಕಾಲ್ತುಳಿತದ ಪ್ರಸಂಗವು ತುಂಬಾ ತೊಂದರೆದಾಯಕವಾಗಿದೆ; ಇದು ಕೇಂದ್ರ ಸರ್ಕಾರ ಮಾಡಿದ ಅಸಮರ್ಪಕ ವ್ಯವಸ್ಥೆಗಳನ್ನು ಬಹಿರಂಗಪಡಿಸಿದೆ. ಈ ಘಟನೆಯ ನಂತರ ರೈಲ್ವೆ ಸಚಿವರು ರಾಜೀನಾಮೆ ನೀಡಬೇಕು. ಇದು ರೈಲ್ವೆಯ ಸಂಪೂರ್ಣ ವೈಫಲ್ಯ” ಎಂದು ಅವರು ಪ್ರತಿಪಾದಿಸಿದರು.

ಜನಸಂದಣಿಯಿಂದ ಕೂಡಿದ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದರು. ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದು, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬಿಹಾರದ ಜನರ ನಿಖರ ಸಂಖ್ಯೆ ಮತ್ತು ಗಾಯಗೊಂಡವರ ಬಗ್ಗೆ ವಿವರಗಳನ್ನು ನಿರೀಕ್ಷಿಸಲಾಗಿದೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರು ಧಾರ್ಮಿಕ ಮೇಳಕ್ಕಾಗಿ ಲಕ್ಷಾಂತರ ಜನರು ಪ್ರಯಾಗ್‌ರಾಜ್‌ಗೆ ಹೋಗುವ ಬಗ್ಗೆ ಕೇಳಿದಾಗ, “ಕುಂಭಕ್ಕೆ ಯಾವುದೇ ಅರ್ಥವಿಲ್ಲ… ಇದು ಕೇವಲ ಅರ್ಥಹೀನ” ಎಂದು ಹೇಳಿದರು. ಈ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಬಿಹಾರ ಬಿಜೆಪಿ ವಕ್ತಾರ ಮನೋಜ್ ಶರ್ಮಾ, ಇದು ಹಿಂದೂ ಧರ್ಮದ ಬಗ್ಗೆ ಆರ್‌ಜೆಡಿಯ ಮನಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಹೇಳಿದರು.

“ಅವರು ತಮ್ಮ ತುಷ್ಟೀಕರಣ ರಾಜಕೀಯದಿಂದಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆರ್‌ಜೆಡಿ ನಾಯಕರು ಯಾವಾಗಲೂ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ. ಮಹಾ ಕುಂಭಮೇಳವನ್ನು ಅರ್ಥಹೀನ ಎಂದು ಕರೆದ ಲಾಲು ಪ್ರಸಾದ್ ಅವರ ಇತ್ತೀಚಿನ ಹೇಳಿಕೆಯು ಹಿಂದೂ ಧರ್ಮದ ಬಗ್ಗೆ ಪಕ್ಷದ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ” ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ; ಪ್ರಧಾನಿ ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ ವೆಬ್‌ಸೈಟ್ ನಿರ್ಬಂಧ; ಕೇಂದ್ರ ಸರ್ಕಾರದ ನಡೆ ಖಂಡಿಸಿದ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...