Homeಮುಖಪುಟತೇಜಸ್ವಿ, ಚಿರಾಗ್ ಪಾಸ್ವಾನ್ ಮೈತ್ರಿಗೆ ಸಮ್ಮತ ಸೂಚಿಸಿದ ಲಾಲು ಪ್ರಸಾದ್ ಯಾದವ್

ತೇಜಸ್ವಿ, ಚಿರಾಗ್ ಪಾಸ್ವಾನ್ ಮೈತ್ರಿಗೆ ಸಮ್ಮತ ಸೂಚಿಸಿದ ಲಾಲು ಪ್ರಸಾದ್ ಯಾದವ್

- Advertisement -
- Advertisement -

ಬಿಹಾರದಲ್ಲಿ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಮತ್ತು ತಮ್ಮ ಮಗ ತೇಜಸ್ವಿ ಯಾದವ್ ನಡುವಿನ ಮೈತ್ರಿಯ ಪರವಾಗಿದ್ದೇನೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮಂಗಳವಾರ ಹೇಳಿದ್ದಾರೆ.

ಚಿರಾಗ್ ಪಾಸ್ವಾನ್‌ ತನ್ನ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ನೇತೃತ್ವದಲ್ಲಿ ಪಕ್ಷದ ಐದು ಸಂಸದರು ಬಂಡಾಯವನ್ನು ಎದುರಿಸುತ್ತಿದ್ದರೂ ಕೂಡ ಚಿರಾಗ್ ಎಲ್‌ಜೆಪಿಯ ನಾಯಕರಾಗಿ ಮುಂದುವರಿದಿದ್ದಾರೆ ಎಂದು ಲಾಲು ಪ್ರಸಾದ್ ಯಾದವ್ ಅವರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ವಿರುದ್ಧ ಕಿಡಿ ಕಾರಿರುವ ಲಾಲು ಪ್ರಸಾದ್ ಯಾದವ್, ’ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಮೋಸ ಮಾಡಿ ತಮ್ಮ ಪಕ್ಷವನ್ನು 10-15 ಮತಗಳಿಂದ ಸೋಲಿಸಿದರು” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

 

ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಸಮಾಜವಾದಿ ನಾಯಕ ಶರದ್ ಯಾದವ್ ಅವರನ್ನು ಭೇಟಿ ಮಾಡಿದ ನಂತರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಈ ಹೇಳಿಕೆ ನೀಡಿದ್ದಾರೆ. ಇಬ್ಬರೂ ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

ಸಮಾಜವಾದಿ ನಾಯಕರಾದ ಶರದ್ ಯಾದವ್, ಮುಲಾಯಂ ಸಿಂಗ್ ಯಾದವ್ ಮತ್ತು ನನ್ನಂತ ನಾಯಕರ ಅನುಪಸ್ಥಿತಿಯಿಂದ ಸಂಸತ್ತಿನಲ್ಲಿ ಜನ ಸಂಬಂಧಿತ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸೋಮವಾರ, ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಅಖಿಲೇಶ್ ಯಾದವ್ ಅವರನ್ನು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ನವದೆಹಲಿಯಲ್ಲಿ ಭೇಟಿಯಾಗಿದ್ದರು.

ಇದರ ಜೊತೆಗೆ ಪೆಗಾಸಸ್ ಗೂಢಚರ್ಯೆ ಹಗರಣದ ತನಿಖೆಗೂ ಕರೆ ನೀಡಿರುವ ಲಾಲು ಪ್ರಸಾದ್ ಯಾದವ್, ಪ್ರಕರಣದ ತನಿಖೆ ನಡೆಸಿ ಸಂಬಂಧಪಟ್ಟವರ ಹೆಸರುಗಳನ್ನು ಪ್ರಕಟಿಸಬೇಕು ಎಂದಿದ್ದಾರೆ.


ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...