Homeಮುಖಪುಟಹಿರಿಯ ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲು ಯಾದವ್

ಹಿರಿಯ ಪುತ್ರ ತೇಜ್ ಪ್ರತಾಪ್‌ನನ್ನು ಪಕ್ಷ-ಕುಟುಂಬದಿಂದ ಹೊರಹಾಕಿದ ಲಾಲು ಯಾದವ್

- Advertisement -
- Advertisement -

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಭಾನುವಾರ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದ್ದಾರೆ. ತೇಜ್ ಪ್ರತಾಪ್ ಯಾದವ್ ಅವರ ‘ಬೇಜವಾಬ್ದಾರಿಯುತ ನಡವಳಿಕೆ’ ಜತೆಗೆ, ಕುಟುಂಬದ ಮೌಲ್ಯಗಳು ಮತ್ತು ಸಾರ್ವಜನಿಕ ಸಭ್ಯತೆಯಿಂದ ವಿಚಲಿತರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ತೇಜ್ ಪ್ರತಾಪ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಅನುಷ್ಕಾ ಯಾದವ್ ಅವರೊಂದಿಗಿನ ಅವರ ದೀರ್ಘಕಾಲದ ಸಂಬಂಧದ ಬಗ್ಗೆ ಮಾತನಾಡುತ್ತಾ, ಕಳೆದ 12 ವರ್ಷಗಳಿಂದ ನಾವು ಪ್ರೀತಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಆದರೆ, ನಂತರ ಅವರ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ, ಅವರ ಮತ್ತು ಅವರ ಕುಟುಂಬದ ಹೆಸರು ಕೆಡಿಸಲು ಫೋಟೋಗಳನ್ನು ಎಡಿಟ್‌ ಮಾಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ ಕುರಿತು ವಿರೋಧ ವ್ಯಕ್ತಪಡಿಸಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಯಾದವ್, ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದು ಸಾಮಾಜಿಕ ನ್ಯಾಯಕ್ಕಾಗಿ ಪಕ್ಷದ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ. ತೇಜ್ ಪ್ರತಾಪ್ ಅವರ ನಡವಳಿಕೆ ಕುಟುಂಬ ಮೌಲ್ಯಗಳು ಅಥವಾ ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ ಎಂದು ಹೇಳಿದರು.

“ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದರಿಂದ ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟ ದುರ್ಬಲಗೊಳ್ಳುತ್ತದೆ. ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿಯುತ ನಡವಳಿಕೆಯು ನಮ್ಮ ಕುಟುಂಬ ಮೌಲ್ಯಗಳು, ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ಮೇಲಿನ ಸಂದರ್ಭಗಳಿಂದಾಗಿ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿಂದ ಉಚ್ಛಾಟಿಸುತ್ತಿದ್ದೇನೆ. ಇನ್ನು ಮುಂದೆ, ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ” ಎಂದು ಲಾಲು ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಒಳ್ಳೆಯದು ಮತ್ತು ಕೆಟ್ಟದ್ದನ್ನು, ಅವರ ವೈಯಕ್ತಿಕ ಜೀವನದ ಅರ್ಹತೆ ಮತ್ತು ದೋಷಗಳ ನಡುವೆ ವ್ಯತ್ಯಾಸವನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರೊಂದಿಗೆ ಸಂಬಂಧ ಹೊಂದಿರುವವರು ತಮ್ಮ ಸ್ವಂತ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕು. ನಾನು ಯಾವಾಗಲೂ ಸಾರ್ವಜನಿಕ ಜೀವನದಲ್ಲಿ ಸಾರ್ವಜನಿಕ ಸಭ್ಯತೆಯ ಪ್ರತಿಪಾದಕನಾಗಿದ್ದೇನೆ. ಕುಟುಂಬದ ವಿಧೇಯ ಸದಸ್ಯರು ಸಾರ್ವಜನಿಕ ಜೀವನದಲ್ಲಿ ಈ ಕಲ್ಪನೆಯನ್ನು ಅಳವಡಿಸಿಕೊಂಡಿದ್ದಾರೆ, ಅನುಸರಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಅವರು ಹೇಳಿದರು.

ಲಾಲು ಯಾದವ್ ಅವರ ಕಿರಿಯ ಮಗ ಮತ್ತು ತೇಜ್ ಪ್ರತಾಪ್ ಅವರ ಕಿರಿಯ ಸಹೋದರ ತೇಜಸ್ವಿ ಯಾದವ್ ಅವರು ಭಾನುವಾರ ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಅಭಿವೃದ್ಧಿಯ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡರು. ಅವರ ಪ್ರಕಾರ, ಒಬ್ಬರು ತಮ್ಮ ರಾಜಕೀಯ ಮತ್ತು ವೈಯಕ್ತಿಕ ಜೀವನವನ್ನು ಪ್ರತ್ಯೇಕವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

“ನನ್ನ ಮಟ್ಟಿಗೆ ಹೇಳುವುದಾದರೆ, ನಾನು ಇದನ್ನೆಲ್ಲಾ ಇಷ್ಟಪಡುವುದಿಲ್ಲ; ಸಹಿಸುವುದೂ ಇಲ್ಲ. ವೈಯಕ್ತಿಕ ಜೀವನವು ಪ್ರತ್ಯೇಕವಾಗಿರಬೇಕು. ಅವರು ಹಿರಿಯರು, ಅವರಿಗೆ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕಿದೆ. ಆದರೆ, ಲಾಲು ಜಿ ಟ್ವೀಟ್ ಮೂಲಕ ತಮ್ಮ ಆಲೋಚನೆಗಳನ್ನು ಸ್ಪಷ್ಟಪಡಿಸಿದ್ದಾರೆ. ಅವರು ಸರಿ ಎಂದು ಭಾವಿಸಿದ್ದನ್ನು ಮಾಡಿದರು. ಇದರ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ಮಾತ್ರ ತಿಳಿದುಬಂದಿತು” ಎಂದು ತೇಜಸ್ವಿ ಯಾದವ್ ಹೇಳಿದರು.

ಈ ಮಧ್ಯೆ, ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಲಾಲು ಪ್ರಸಾದ್ ಯಾದವ್ ಅವರನ್ನು ಟೀಕಿಸಿ, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆರ್‌ಜೆಡಿ ಪೋಷಕರಾದ ಯಾದವ್ ಅವರ ಈ ನಡೆಯನ್ನು ಕಣ್ಣೊರೆಸುವ ತಂತ್ರ ಎಂದು ಕರೆದಿದೆ.

“ಲಾಲು ಜಿ ದಾರಿ ತಪ್ಪಿಸುತ್ತಿದ್ದಾರೆ. ಲಾಲು ಕುಟುಂಬವು ಐಶ್ವರ್ಯಾ (ತೇಜ್ ಪ್ರತಾಪ್ ಯಾದವ್ ಅವರ ಮಾಜಿ ಪತ್ನಿ) ವಿರುದ್ಧ ಘೋರ ಪಾಪ ಮಾಡಿದಾಗ ಅವರ ಆತ್ಮಸಾಕ್ಷಿ ಏಕೆ ಎಚ್ಚರಗೊಳ್ಳಲಿಲ್ಲ. ಇದು ಶುದ್ಧ ಅನೈತಿಕತೆ. ಅವರು ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಚುನಾವಣೆಯ ನಂತರ, ತೇಜ್ ಪ್ರತಾಪ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು” ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ರಾಜೀವ್ ರಂಜನ್ ಹೇಳಿದ್ದಾರೆ.

ಗಮನಾರ್ಹವಾಗಿ, ಐಶ್ವರ್ಯಾ ರೈ ಅವರೊಂದಿಗಿನ ತೇಜ್ ಪ್ರತಾಪ್ ಅವರ ವಿಚ್ಛೇದನ ಪ್ರಕರಣವು ನ್ಯಾಯಾಲಯದಲ್ಲಿ ಸಿಲುಕಿಕೊಂಡಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ದರೋಗಾ ರಾಯ್ ಅವರ ಮೊಮ್ಮಗಳು ರಾಯ್ ಅವರೊಂದಿಗಿನ ಅವರ ವಿವಾಹವು ತಿಂಗಳೊಳಗೆ ಮುರಿದುಬಿತ್ತು. ಪತಿ ಮತ್ತು ಅತ್ತೆ ಮಾವಂದಿರು ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಐಶ್ವರ್ಯಾ ಆರೋಪಿಸಿದರು.

ಐಶ್ವರ್ಯಾ ಅವರ ತಂದೆ ಚಂದ್ರಿಕಾ ರಾಯ್, ಸ್ವತಃ ಮಾಜಿ ಸಚಿವ. ನಂತರ ಅವರು ಆರ್‌ಜೆಡಿಯನ್ನು ತೊರೆದರು, “ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ” ಹೋರಾಟ ನಡೆಸುವುದಾಗಿ ಪ್ರತಿಜ್ಞೆ ಮಾಡಿದರು.

ಜಮ್ಮು-ಕಾಶ್ಮೀರ: ಜಾತಿ ಆಧಾರಿತ ಪ್ರತ್ಯೇಕತೆ ನಿಷೇಧಕ್ಕೆ ಜೈಲು ಕೈಪಿಡಿಗೆ ತಿದ್ದುಪಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...