Homeಮುಖಪುಟನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನಿತೀಶ್ ಜೀ, ನೀವು ದಣಿದಿದ್ದೀರಿ, ನಿಮಗೆ ಬಿಹಾರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು 69 ವರ್ಷದ ನಿತೀಶ್ ಕುಮಾರ್ ಅವರಿಗೆ 30 ವರ್ಷದ ಆರ್‌ಜೆಡಿ ನಾಯಕ ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ನವೆಂಬರ್‌ 9 ರಂದು ಜೈಲಿನಿಂದ ಹೊರಬರಲಿದ್ದು, ಮಾರನೇ ದಿನವೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬೀಳ್ಕೊಡುಗೆ ಸಿಗಲಿದೆ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಬಿಹಾರದ ವಿಧಾನಸಭೆಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದೇ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ವಿದಾಯ ಸಿಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸದ್ಯ ತೇಜಶ್ವಿ ಯಾದವ್ ಅವರ ತಂದೆ ಲಾಲೂ ಯಾದವ್ ಮೇವು ಹಗರಣ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರ್ಖಂಡ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇವು ಹಗರಣದ ಚಾಯ್‌ಬಾಸಾ ಖಜಾನೆ ಸಂಬಂಧಿಸಿದ ಪ್ರಕರಣದಲ್ಲಿ ಜಾರ್ಖಂಡ್‌ ಹೈಕೋರ್ಟ್‌ ಲಾಲೂ ಅವರಿಗೆ ಇತ್ತೀಚೆಗೆ ಜಾಮೀನು ನೀಡಿದೆ. ಆದರೆ ದುಮಕಾ ಖಜಾನೆ ಹಣ ವಂಚನೆ ಪ್ರಕರಣದಲ್ಲಿ ಜಾಮೀನು ವಿಚಾರಣೆ ನಡೆಯುತ್ತಿದ್ದು, ನ್ಯಾಯಾಂಗ ಬಂಧನದಲ್ಲೇ ಇದ್ದಾರೆ.

ಇದನ್ನೂ ಓದಿ: ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

‘ಲಾಲೂ ಜೀ ಅವರಿಗೆ ಆಗಲೇ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ನವೆಂಬರ್‌ 9ರಂದು ಮತ್ತೊಂದು ಜಾಮೀನು ಪಡೆದು, ನವೆಂಬರ್‌ 9ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಂದು ನನ್ನ ಜನ್ಮದಿನ ಕೂಡ. ಮಾರನೆಯ ದಿನ (ನವೆಂಬರ್‌ 10) ನಿತೀಶ್‌ಜಿ ಅವರಿಗೆ ಬೀಳ್ಕೊಡುಗೆ ಸಿಗಲಿದೆ’ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರದ ಹಿಸುವಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಚುನಾವಣಾ ರ್‍ಯಾಲಿಯಲ್ಲಿ ಚುನಾವಣೆಯನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕಲು, ಉದ್ಯೋಗ ಸೃಷ್ಟಿಸಲು ಮತ್ತು ಇತರ ರಾಜ್ಯಗಳಿಗೆ ಹೋಗುವ ಕಾರ್ಮಿಕರ ವಲಸೆಯನ್ನು ತಡೆಯಲು ವಿಫಲವಾಗಿದೆ ಎಂದು ತೇಜಸ್ವಿ ಯಾದವ್ ತಮ್ಮ ಭಾಷಣದಲ್ಲಿ ಆರೋಪಿಸಿದರು.

“ನಿತೀಶ್ ಜೀ, ನೀವು ದಣಿದಿದ್ದೀರಿ. ನಿಮಗೆ ಬಿಹಾರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು 69 ವರ್ಷದ ನಿತೀಶ್ ಕುಮಾರ್ ಅವರನ್ನು30 ವರ್ಷದ ಆರ್‌ಜೆಡಿ ನಾಯಕ ಮೂದಲಿಸಿದ್ದಾರೆ.

“15 ವರ್ಷಗಳಲ್ಲಿ ನಿಮಗೆ ಉದ್ಯೋಗ, ಶಿಕ್ಷಣ, ಆರೋಗ್ಯ ಸೌಲಭ್ಯಗಳು ಮತ್ತು ಕೈಗಾರಿಕೆಗಳನ್ನು ನೀಡದವರು ಮುಂದಿನ ಐದು ವರ್ಷಗಳಲ್ಲಿ ನೀಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ಮತ್ತೊಮ್ಮೆ ನೀಡಿದ್ದಾರೆ.


ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...