Homeಕರ್ನಾಟಕಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ;...

ಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ; ಹೈಕೋರ್ಟ್ ಕಿಡಿ

- Advertisement -
- Advertisement -

ರಾಮನಗರ ಜಿಲ್ಲೆ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾರ ಅನುಮತಿ ಪಡೆದು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ ಎಂದು ಹೈಕೋರ್ಟ್ ಕೆಂಡಾಮಂಡಲವಾಗಿದ್ದು, “ಪ್ರಕರಣದ ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರ ಬರಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಮತ್ತಿರರ ವಿರುದ್ದದ ಭೂ ಕಬಳಿಗೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಎಸ್‌.ಆರ್ ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ (ಮಾ.17) ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, “ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರು ಎಸ್‌ಐಟಿ ರಚಿಸಿದ್ದಾರೆ. ಕಂದಾಯ ಇಲಾಖೆಯು ಎಸ್‌ಐಟಿ ರಚಿಸಲು ಅಷ್ಟು ಶಕ್ತಿಶಾಲಿಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 71 ಎಕರೆ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸಬೇಕಿದೆ. ಯಾವ ರೀತಿಯಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ? ಎಷ್ಟು ಎಕರೆ ತೆರವು ಮಾಡಲಾಗಿದೆ? ತಡೆಯಾಜ್ಞೆ ಪಡೆಯಲು ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಕಟಾರಿಯಾ ವಿರುದ್ಧ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಬೇಕು, ಇಲ್ಲವೇ ಆರೋಪಿಗಳನ್ನು ಜೈಲಿಗೆ ಹಾಕಬೇಕು ಅಷ್ಟೆ. ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆ ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ. ಎಸ್‌ಐಟಿ ರಚಿಸಲು ಸರ್ಕಾರಕ್ಕೆ ಅಧಿಕಾರ ನೀಡಿದವರು ಯಾರು? ಹಾಗಾದರೆ ರಾಜ್ಯ ಸರ್ಕಾರ ಕಾನೂನಿಗಿಂತ ಮೇಲಿದೆಯೇ?” ಎಂದು ಕಿಡಿಕಾರಿದೆ ಎಂದು ವರದಿ ಹೇಳಿದೆ.

ಸಮಾಜ ಪರಿವರ್ತನಾ ಸಮುದಾಯ ಪರ ಹಿರಿಯ ವಕೀಲ ಎಸ್‌. ಬಸವರಾಜು ವಾದ ಮಂಡಿಸಿ, “ಪ್ರಬಲರಲ್ಲದವರು ಒತ್ತುವರಿ ಮಾಡಿದ್ದ 14 ಎಕರೆಯನ್ನು ತೆರವುಗೊಳಿಸಲಾಗಿದೆ. ಬಲಿಶಾಲಿಗಳು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವು ಮಾಡಿಸಲಾಗಿಲ್ಲ. ಬಲಶಾಲಿಗಳು ಎಸ್‌ಐಟಿ ರಚನೆಯನ್ನು ಪ್ರಶ್ನಿಸಿ, ತಡೆಯಾಜ್ಞೆ ಪಡೆಯಲು ಅನುಕೂಲ ಮಾಡಿಕೊಡಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ತನ್ನ ಜಮೀನನ್ನು ವಶಕ್ಕೆ ಪಡೆಯಲು ನಾವು ಹೋರಾಟ ಮಾಡುತ್ತಿದ್ದೇವೆ. ಆರೋಪಿಗಳ ಹೆಸರನ್ನು ಕೇಳಿದ ತಕ್ಷಣ ಸರ್ಕಾರ ಬೆಚ್ಚುತ್ತಿದೆ. ಆರೋಪಿಗಳ ಜೊತೆ ಸರ್ಕಾರವೂ ಕೈಜೋಡಿಸಿದೆ. ಇಲ್ಲಿ ಅಪ್ರಾಮಾಣಿಕತೆ ಎದ್ದು ಕಾಣುತ್ತಿದೆ. ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಇದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ ಎಂ. ರೋಣ್‌, “ಒತ್ತುವರಿ ಮಾಡಿರುವ ಸರ್ಕಾರದ ಜಮೀನನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಕೆರೆಗೆ ಸಂಬಂಧಿಸಿದ 6 ಎಕರೆ 20 ಗಂಟೆ ತೆರವು ಮಾಡಲಾಗಿದೆ. 11 ಎಕರೆ 20 ಗುಂಟೆಯನ್ನು ಪತ್ತೆ ಮಾಡಿದ್ದೇವೆ. ಐಜಿಪಿ ಮತ್ತು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒಳಗೊಂಡ ಎಸ್‌ಐಟಿ ರಚಿಸಲಾಗಿದೆ. ಎಸ್‌ಐಟಿ ರಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಕಾನೂನು ಜಾರಿಗೊಳಿಸಲು ಎಸ್‌ಐಟಿ ರಚಿಸಲಾಗಿದೆ. 18 ಎಕರೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದ್ದು, ಅಸಲಿ ದಾಖಲೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಬಳಿಕ ಹೈಕೋರ್ಟ್ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಎಸ್‌ಐಟಿ ರಚಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಬಗ್ಗೆ ವಿವರಣೆ ನೀಡಲು ಮುಂದಿನ ವಿಚಾರಣೆಗೆ ರಾಜೇಂದ್ರ ಕಟಾರಿಯಾ ಖುದ್ದು ಹಾಜರಾಗಲು ಸೂಚನೆ ನೀಡಿದೆ. ಪ್ರಕರಣದಲ್ಲಿ ಮೇಲ್ನೋಟಕ್ಕೆ ಅರೋಪಿಗಳ ವಿರುದ್ಧ ಮುಂದುವರಿಯಲು ದಾಖಲೆಗಳು ಇವೆ. ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಮಾರ್ಚ್‌ 19ಕ್ಕೆ ಮುಂದೂಡಿದೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...