Homeಕರ್ನಾಟಕಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ...

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಕುಟುಂಬ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವ ಆರೋಪದ ಕುರಿತು ತನಿಖೆಗೆ ಹೈಕೋರ್ಟ್ ಆದೇಶದಂತೆ ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಗುರುವಾರ (ಜ.30) ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ತನಿಖೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಸಮಯವಕಾಶ ನೀಡುವಂತೆ ನಾವು ಕೋರಿದ್ದೆವು. ಆದರೆ, ಹೈಕೋರ್ಟ್ ಸಮಯ ಕೊಟ್ಟಿಲ್ಲ. ಹಾಗಾಗಿ, ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ಫೆಬ್ರವರಿ 21ರ ಒಳಗೆ ವರದಿ ಸಲ್ಲಿಸಲಾಗುವುದು” ಎಂದಿದ್ದಾರೆ.

ಹೆಚ್‌ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿ ವ್ಯಾಪ್ತಿಯ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌.ಆರ್ ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಬುಧವಾರ (ಜ.29) ನಡೆಸಿತ್ತು.

ವಿಚಾರಣೆ ವೇಳೆ ಭೂ ಒತ್ತುವರಿ ತೆರವಿಗೆ ಕ್ರಮ ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

“ಪ್ರತಿವಾದಿಗಳು ಪ್ರಭಾವಿಗಳು (ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ ತಮ್ಮಣ್ಣ ಮುಂತಾದವರು) ಎಂದು ನೀವು ಐದು ವರ್ಷ ಏನೂ ಮಾಡಿಲ್ಲ ತಾನೆ? ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ನೀವು ಅಸಮರ್ಥರು ಎಂದಾದರೆ ನಿಮ್ಮನ್ನು ಎಲ್ಲಿಗೆ ಕಳಿಸಬೇಕೊ ಅಲ್ಲಿಗೆ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿ ಇದ್ದು ಬಂದರೆ ಸರಿಹೋಗ್ತೀರಿ” ಎಂದು ಕಠಾರಿಯಾ ಅವರ ವಿರುದ್ದ ನ್ಯಾಯಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿರುವ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...