Homeಕರ್ನಾಟಕಭೂ ಒತ್ತುವರಿ ಪ್ರಕರಣ | ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಎಸ್‌ಐಟಿ ತನಿಖೆಗೆ ಕರ್ನಾಟಕ ಹೈಕೋರ್ಟ್...

ಭೂ ಒತ್ತುವರಿ ಪ್ರಕರಣ | ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಎಸ್‌ಐಟಿ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

- Advertisement -
- Advertisement -

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿ ನಡೆದ ಭೂ ಅತಿಕ್ರಮಣ ಪ್ರಕರಣದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ತಾತ್ಕಾಲಿಕ ತಡೆ ನೀಡುವ ಮೂಲಕ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಧ್ಯಂತರ ಪರಿಹಾರ ನೀಡಿದೆ. ಭೂ ಒತ್ತುವರಿ ಪ್ರಕರಣ

ಅಕ್ರಮ ಭೂ ಒತ್ತುವರಿಯಲ್ಲಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎಂಬ ಆರೋಪಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು 2025 ರ ಜನವರಿಯಲ್ಲಿ ಎಸ್‌ಐಟಿಯನ್ನು ರಚಿಸಿತು. ತನಿಖೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಮತ್ತು ತನಿಖಾ ತಂಡದ ಕಾರ್ಯವಿಧಾನದ ಅಡಿಪಾಯವನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಎಸ್‌ಐಟಿ ಸ್ಥಾಪಿಸಿದ ಸರ್ಕಾರಿ ಆದೇಶದೊಂದಿಗೆ ಯಾವುದೇ ಅಧಿಕೃತ ಅಧಿಸೂಚನೆ ಇಲ್ಲ ಎಂದು ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ಹೇಳಿದ್ದಾರೆ. ಈ ಲೋಪವನ್ನು ಗಮನಿಸಿದ ನ್ಯಾಯಾಲಯವು, ಎಸ್‌ಐಟಿ ರಚನೆ ಮತ್ತು ಕುಮಾರಸ್ವಾಮಿಗೆ ನೀಡಲಾದ ಸಮನ್ಸ್ ಎರಡನ್ನೂ ಮುಂದಿನ ವಿಚಾರಣೆ ನಡೆಯುವವರೆಗೆ ತಡೆಹಿಡಿಯಿತು.

ಅರ್ಜಿಗೆ ಪ್ರತಿಕ್ರಿಯಿಸುವಂತೆ ಸರ್ಕಾರಿ ವಕೀಲರಿಗೆ ಹೈಕೋರ್ಟ್ ಇದೇ ವೇಳೆ ನಿರ್ದೇಶನ ನೀಡಿದೆ. ಹಿರಿಯ ವಕೀಲ ಉದಯ ಹೊಳ್ಳ ಮತ್ತು ವಕೀಲ ನಿಶಾಂತ್ ಎವಿ ನ್ಯಾಯಾಲಯದಲ್ಲಿ ಕುಮಾರಸ್ವಾಮಿಯನ್ನು ಪ್ರತಿನಿಧಿಸಿದರು.

ಎಸ್‌ಐಟಿ ಕ್ರಮದ ಹಿಂದೆ ರಾಜಕೀಯ ದ್ವೇಷವಿದೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದ್ದರು. 1984 ರಲ್ಲಿ ಈ ವಿವಾದಿತ ಭೂಮಿಯನ್ನು ತಾನು ಕಾನೂನುಬದ್ಧವಾಗಿ ಸ್ವಾಧೀನಪಡಿಸಿಕೊಂದ್ದೇನೆ ಎಂದು ಕುಮಾರಸ್ವಾಮಿ ಅವರು ಸಮರ್ಥಿಸಿಕೊಂಡಿದ್ದಾರೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಮ್ಮ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ರಾಮನಗರದಲ್ಲಿ ನಡೆಯುತ್ತಿರುವ ಭೂ ಸಮೀಕ್ಷೆಯನ್ನು ಟೀಕಿಸಿರುವ ಕುಮಾರಸ್ವಾಮಿ, ಇದನ್ನು ರಾಜಕೀಯ ಪ್ರೇರಿತ ನಡೆ ಎಂದು ಕರೆದಿದ್ದರು. “ಈ ಹಿಂದೆ, ಎಸ್‌ಐಟಿಗಳನ್ನು ಐಪಿಎಸ್ ಅಧಿಕಾರಿಗಳು ನೇತೃತ್ವ ವಹಿಸಿದ್ದರು. ಈಗ ಐಎಎಸ್ ಅಧಿಕಾರಿಗಳು ಸಹ ಅವುಗಳನ್ನು ಮುನ್ನಡೆಸುತ್ತಿದ್ದಾರೆ” ಎಂದು ಅವರು ವ್ಯಂಗ್ಯವಾಡಿದರು. ಭೂ ಒತ್ತುವರಿ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...