Homeಮುಖಪುಟಉದ್ಯೋಗಕ್ಕಾಗಿ ಭೂಮಿ ಪ್ರಕರಣ | ಲಾಲು ಪ್ರಸಾದ್ ಮತ್ತು ಅವರ ಕುಟುಂಬಕ್ಕೆ ಇಡಿ ಸಮನ್ಸ್

ಉದ್ಯೋಗಕ್ಕಾಗಿ ಭೂಮಿ ಪ್ರಕರಣ | ಲಾಲು ಪ್ರಸಾದ್ ಮತ್ತು ಅವರ ಕುಟುಂಬಕ್ಕೆ ಇಡಿ ಸಮನ್ಸ್

- Advertisement -
- Advertisement -

ಉದ್ಯೋಗಕ್ಕಾಗಿ ಭೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಆರ್‌ಜೆಡಿ ಅಧ್ಯಕ್ಷ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜ್ ಪ್ರತಾಪ್ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಉದ್ಯೋಗಕ್ಕಾಗಿ ಭೂಮಿ ಪ್ರಕರಣ

76 ವರ್ಷದ ಪ್ರಸಾದ್ ಅವರನ್ನು ಬುಧವಾರ ಪಾಟ್ನಾದಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಕೇಳಲಾಗಿದ್ದು, ಉಳಿದ ಇಬ್ಬರನ್ನು ಮಂಗಳವಾರ ಹಾಜರಾಗಲು ಕೇಳಲಾಗಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮೂವರ ಹೇಳಿಕೆಗಳನ್ನು ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಸಂಸ್ಥೆಯ ಮುಂದೆ ಹಾಜರಾಗಲು ಸಾಧ್ಯವಾಗದಿರಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ಲಾಲು ಪ್ರಸಾದ್ ಮತ್ತು ಅವರ ಕಿರಿಯ ಮಗ ತೇಜಸ್ವಿ ಯಾದವ್ ಅವರನ್ನು ಇಡಿ ಈ ಹಿಂದೆ ವಿಚಾರಣೆ ನಡೆಸಿತ್ತು. ಉದ್ಯೋಗಕ್ಕಾಗಿ ಭೂಮಿ ಪ್ರಕರಣ

ಕಳೆದ ವರ್ಷ, ಲಾಲು ಅವರ ಕುಟುಂಬ ಸದಸ್ಯರ ವಿರುದ್ಧದ ಪ್ರಕರಣದಲ್ಲಿ ಇಡಿ ದೆಹಲಿ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್ ಸೇರಿದಂತೆ ಇತರ ಕೆಲವರನ್ನು ಆರೋಪಿಗಳೆಂದು ಹೆಸರಿಸಿದೆ.

ಕೇಂದ್ರದ ಯುಪಿಎ-1 ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರು 2004-2009ರ ಅವಧಿಯಲ್ಲಿ ಭಾರತೀಯ ರೈಲ್ವೆಯಲ್ಲಿ ಗ್ರೂಪ್ ಡಿ ಬದಲಿ ಅಧಿಕಾರಿಗಳ ನೇಮಕಾತಿಗಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ತನಿಖೆ ನಡೆದಿದೆ.

ಕೇಂದ್ರ ತನಿಖಾ ದಳ (ಸಿಬಿಐ)ದ ಎಫ್‌ಐಆರ್ ಪ್ರಕಾರ, ರೈಲ್ವೆಯಲ್ಲಿ ಉದ್ಯೋಗಗಳಿಗೆ ಪ್ರತಿಯಾಗಿ “ಭೂಮಿಯನ್ನು ಲಂಚವಾಗಿ ವರ್ಗಾಯಿಸಲು” ಅಭ್ಯರ್ಥಿಗಳಿಗೆ ಹೇಳಲಾಗಿತ್ತು ಎಂದು ಇಡಿ ಈ ಹಿಂದೆ ಹೇಳಿಕೆಯಲ್ಲಿ ತಿಳಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣವು ಸಿಬಿಐ ದೂರನ್ನು ಆಧರಿಸಿ ದಾಖಲಿಸಲಾಗಿತ್ತು.

“ಇಡಿ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳಾಗಿ ಸೇರಿಸಲಾದ ಲಾಲು ಪ್ರಸಾದ್ ಅವರ ಕುಟುಂಬ ಸದಸ್ಯರಾದ ರಾಬ್ರಿ ದೇವಿ, ಮಿಸಾ ಭಾರತಿ ಮತ್ತು ಹೇಮಾ ಯಾದವ್ ಅವರು ಭಾರತೀಯ ರೈಲ್ವೆಯಲ್ಲಿ ಗ್ರೂಪ್ ಡಿ ಬದಲಿ ಅಧಿಕಾರಿಗಳಾಗಿ ಆಯ್ಕೆಯಾದ ಅಭ್ಯರ್ಥಿಗಳ ಕುಟುಂಬದಿಂದ ನಾಮಮಾತ್ರ ಮೊತ್ತಕ್ಕೆ ಭೂಮಿಯನ್ನು ಪಡೆದರು” ಎಂದು ಇಡಿ ಹೇಳಿದೆ.

“ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾದ ಮತ್ತೊಬ್ಬ ಆರೋಪಿ ಹೃದಯಾನಂದ ಚೌಧರಿಯಾಗಿದ್ದು ಅವರು ರಾಬ್ರಿ ದೇವಿ ಅವರ ಗೋಶಾಲೆಯ ಮಾಜಿ ಉದ್ಯೋಗಿಯಾಗಿದ್ದಾರೆ. ಅವರು ಅಭ್ಯರ್ಥಿಗಳಲ್ಲಿ ಒಬ್ಬರಿಂದ ಆಸ್ತಿಯನ್ನು ಪಡೆದಿದ್ದು, ನಂತರ ಅದನ್ನು ಹೇಮಾ ಯಾದವ್‌ ಅವರಿಗೆ ವರ್ಗಾಯಿಸಿದ್ದರು” ಎಂದು ಇಡಿ ಹೇಳಿದೆ.

ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಬಿ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನಂತಹ ಸಂಸ್ಥೆಗಳು “ಶೆಲ್” ಕಂಪನಿಗಳಾಗಿದ್ದು, ಲಾಲು ಪ್ರಸಾದ್ ಅವರ ಕುಟುಂಬ ಸದಸ್ಯರು ಇದರಿಂದ ಆದಾಯವನ್ನು ಪಡೆದಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ. ಈ ಕಂಪನಿಗಳ ಹೆಸರಿನಲ್ಲಿ “ಪ್ರಮುಖ ವ್ಯಕ್ತಿಗಳು” ಸ್ಥಿರ ಆಸ್ತಿಗಳನ್ನು ಸಂಪಾದಿಸಿದ್ದಾರೆ ಎಂದು ಸಂಸ್ಥೆ ಹೇಳಿದೆ.

ನಂತರ, ಷೇರುಗಳನ್ನು ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಅತ್ಯಲ್ಪ ಮೊತ್ತಕ್ಕೆ ವರ್ಗಾಯಿಸಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...