Homeಮುಖಪುಟಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ವಿಚಾರಣೆ

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ವಿಚಾರಣೆ

- Advertisement -
- Advertisement -

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ಕೇಂದ್ರ ತನಿಖಾ ದಳ (CBI) ಮಂಗಳವಾರ ವಿಚಾರಣೆ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (UPA) ಸರ್ಕಾರದಲ್ಲಿ ಲಾಲು ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೇ ಸಚಿವರಾಗಿದ್ದರು. ಈ ಸಂದರ್ಭದಲ್ಲಿ ರೈಲ್ವೇಯಲ್ಲಿ ಉದ್ಯೋಗ ನೀಡುವುದಕ್ಕಾಗಿ ಉದ್ಯೋಗಾಕಾಂಕ್ಷಿಗಳಿಂದ ಭೂಮಿಯನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೋರ್ಟ್‌ಗೆ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿರುವ ಸಿಬಿಐ ವಿಚಾರಣೆ ಮುಂದುವರಿಸಿದೆ. ಸೋಮವಾರ ಪಾಟ್ನಾದಲ್ಲಿರುವ ಮಾಜಿ ಸಿಎಂ ಮತ್ತು ಲಾಲೂ ಯಾದವ್ ಪತ್ನಿ ರಾಬ್ರಿದೇವಿ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು.

ಇದನ್ನೂ ಓದಿ: ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ರಾಬ್ರಿದೇವಿ ವಿಚಾರಣೆ ಬೆನ್ನಲ್ಲೇ ಮಂಗಳವಾರ ದೆಹಲಿಯಲ್ಲಿ ಲಾಲೂ ಯಾದವ್ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ 7 ಅಧಿಕಾರಗಳ ತಂಡ ಮಾಸ್ಕ್ ಧರಿಸಿದ್ದು ದೂರದಿಂದ ಕೂತು ಅವರನ್ನು ಪ್ರಶ್ನಿಸಿದ್ದಾರೆ. ಲಾಲೂ ಯಾದವ್‌ಗೆ ಕಿಡ್ನಿ ಕಸಿಯಾಗಿರುವ ಹಿನ್ನೆಲೆ ಅವರಿಗೆ ಅಲರ್ಜಿ ಮತ್ತು ಸೋಂಕಿನ ಭೀತಿ ಇರುವ ಕಾರಣ ಅಂತರ ಕಾಯ್ದುಕೊಂಡು ವಿಚಾರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರೀಯ ತನಿಖಾ ದಳವು ಈ ಪ್ರಕರಣದಲ್ಲಿ ದೇವಿ, ಯಾದವ್ ಮತ್ತು ಇತರ 13 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಐದು ತಿಂಗಳ ನಂತರ ಆರೋಪಿಗಳಿಗೆ ಮಾರ್ಚ್ 15ರಂದು ಸಮನ್ಸ್ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

2021ರ ಸೆಪ್ಟೆಂಬರ್‌ನಲ್ಲಿ ಕೇಂದ್ರೀಯ ತನಿಖಾ ದಳವು ಈ ವಿಷಯದ ಬಗ್ಗೆ ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿತು ಮತ್ತು ಮೇ 18ರಂದು  ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿತು.

ವಿಶೇಷ ಕೇಂದ್ರೀಯ ತನಿಖಾ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಯಾದವ್ ಅವರ ಪುತ್ರಿ ಮಿಸಾ ಭಾರ್ತಿ ಮತ್ತು ರೈಲ್ವೆಯ ಮಾಜಿ ಜನರಲ್ ಮ್ಯಾನೇಜರ್ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಫೆಬ್ರವರಿ 27ರಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿದೇವಿ ಮತ್ತು ಇತರ 14 ಜನರಿಗೆ ನ್ಯಾಯಾಲಯವು ಸಮನ್ಸ್ ನೀಡಿತ್ತು. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಆರೋಪಿಗಳಿಗೆ ಮಾರ್ಚ್ 15ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ 2024: ರಾಹುಲ್ ಗಾಂಧಿ ಸ್ಪರ್ಧೆಗೆ ಒತ್ತಾಯಿಸಿ ಅಮೇಠಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

0
ಅಮೇಠಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆಯಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಇಲ್ಲಿನ ಪಕ್ಷದ ಜಿಲ್ಲಾ ಸಮಿತಿ ಕಚೇರಿ ಎದುರು ಧರಣಿ ನಡೆಸಿ, ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಬೇಕು...