Homeಕರ್ನಾಟಕಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ...

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳನ್ನು ಹೈಕೋರ್ಟ್ ಬುಧವಾರ (ಜ.29) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಎಸ್‌.ಆರ್‌ ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿದೆ.

“ಪ್ರತಿವಾದಿಗಳು ಪ್ರಭಾವಿಗಳು (ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ ತಮ್ಮಣ್ಣ ಮುಂತಾದವರು) ಎಂದು ನೀವು ಐದು ವರ್ಷ ಏನೂ ಮಾಡಿಲ್ಲ ತಾನೆ? ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ನೀವು ಅಸಮರ್ಥರು ಎಂದಾದರೆ ನಿಮ್ಮನ್ನು ಎಲ್ಲಿಗೆ ಕಳಿಸಬೇಕೊ ಅಲ್ಲಿಗೆ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿ ಇದ್ದು ಬಂದರೆ ಸರಿಹೋಗ್ತೀರಿ” ಎಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಹೈಕೋರ್ಟ್‌ ನ್ಯಾಯಾಧೀಶರು ಮೌಖಿಕವಾಗಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜನವರಿ 7ರಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುದ್ದು ನ್ಯಾಯಾಲಯದ ಮುಂದೆ ಬರಬೇಕು ಎಂದು ಹೈಕೋರ್ಟ್ ಆದೇಶಿಸಿದ್ದ ಹಿನ್ನೆಲೆ, ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಅವರು ಪೀಠದ ಮುಂದೆ ಹಾಜರಾಗಿ, ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪೀಠಕ್ಕೆ ವಿವರಿಸಲು ಮುಂದಾಗಿದ್ದರು.

ಈ ವೇಳೆ ನ್ಯಾಯಾಧೀಶರು ಕಠಾರಿಯಾ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ಹಂತದಲ್ಲಿ “ನಿಮ್ಮ ವಿರುದ್ದ ಈಗಲೇ ನ್ಯಾಯಾಂಗ ನಿಂದನೆಯ ಆರೋಪ ನಿಗದಿಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುವುದು”ಎಂದು ಕಿಡಿಕಾರಿದ್ದಾರೆ. “ನೀವೆಲ್ಲಾ ಕೋರ್ಟ್ ಆದೇಶಗಳನ್ನು ಪಾಲನೆ ಮಾಡುವವರೆಗೆ ನಿಮ್ಮ ಸಂಬಳ ಕಟ್‌ ಮಾಡಿದರೆ ಗೊತ್ತಾಗುತ್ತದೆ” ಎಂದು ಹರಿಹಾಯ್ದಿದ್ದಾರೆ.

ಕೊನೆಗೆ, “ಇನ್ನೆರಡು ವಾರಗಳ ಕಾಲಾವಕಾಶ ನೀಡುತ್ತೇನೆ. ಅಷ್ಟರೊಳಗೆ ಆದೇಶ ಪಾಲಿಸಿದರೆ ಸರಿ. ಇಲ್ಲಾ ಅಂದರೆ ಎಲ್ಲ ಪ್ರತಿವಾದಿಗಳನ್ನೂ ಬೆಂಗಾವಲಿನಲ್ಲಿ ಕರೆಯಿಸಿಬಿಡುತ್ತೇನೆ. ಅಧಿಕಾರಿಗಳನ್ನು ಎಲ್ಲಿಗೆ ಕಳುಹಿಸಬೇಕೊ ಅಲ್ಲಿಗೆ ಕಳುಹಿಸುತ್ತೇನೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ. ಅಲ್ಲದೆ, “ಯಾವುದಾದರೂ ವಿಷಯಕ್ಕೆ ಎಸ್ಐಟಿ ರಚಿಸುವುದು ಸರ್ಕಾರಕ್ಕೆ ರೂಢಿಯಾಗಿಬಿಟ್ಟಿದೆ” ಎಂದು ಚಾಟಿ ಬೀಸಿದ್ದಾರೆ.

ಅಂತಿಮವಾಗಿ, ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...