Homeಕರ್ನಾಟಕಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ಭೂ ಸುಧಾರಣೆ ತಿದ್ದುಪಡಿ ಅಂಗೀಕಾರ: ಜೆಡಿಎಸ್ ನಡೆಯನ್ನು ಸಮರ್ಥಿಸಿದ ಕುಮಾರಸ್ವಾಮಿ- ಸರಣಿ ಟ್ವೀಟ್

ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ...

- Advertisement -
- Advertisement -

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಬಹುಮತ ದೊರೆತು ಅಂಗೀಕಾರವಾಗಿದೆ. ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ತಮ್ಮ ಪಕ್ಷದ ಈ ನಡೆಯನ್ನು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, “ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಂಡಿಸಿದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಪರ ಮತ ಹಾಕಿದ ಜೆಡಿಎಸ್: ಪರಿಷತ್‌ನಲ್ಲಿ ಅಂಗೀಕಾರ

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ. ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

“ಜೆಡಿಎಸ್‌ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ. ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್‌ನ ಹೆಗ್ಗಳಿಕೆಯಲ್ಲವೇ? ಎಸ್‌ಸಿ/ಎಸ್‌ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

“ಕಾಯ್ದೆಯಲ್ಲಿನ 79(ಎ, ಬಿ) ಕಲಂಗಳ ಔಚಿತ್ಯದ ಬಗ್ಗೆ ಈ ವರೆಗೆ ಶಾಸನಸಭೆಗಳ ಒಳ, ಹೊರಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರೊ. ನಂಜುಂಡಸ್ವಾಮಿ ಅವರೇ, ‘ಇದು ಜನರ ಸ್ವಾತಂತ್ರ್ಯ ಹರಣ ಮಾಡುತ್ತದೆ’ ಎಂದು ಪ್ರತಿಪಾದಿಸಿದ್ದರು. ಕೃಷಿ ಮಾಡುವ ಇಚ್ಛೆ ಇದ್ದೂ, ಕೃಷಿಕರಲ್ಲದಿದ್ದರೆ ಕೃಷಿ ಭೂಮಿ ಹೊಂದಂತೆ ಮಾಡುತ್ತಿದ್ದ ಈ ನಿಯಮವನ್ನು ತೆಗೆದುಹಾಕಲಾಗಿದೆ. 79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್‌ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮೌನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್‌”

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

“79(ಎ, ಬಿ) ಕಲಂಗೆ ಇತಿಶ್ರೀ ಹಾಡಿರುವುದು ನಮ್ಮ ಕೃಷಿ ವ್ಯಾಪ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಯುವಕರನ್ನು ಕೃಷಿಯತ್ತ ಆಕರ್ಷಿಸಲು ಸಹಾಯಕವಾಗುತ್ತದೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಬಯಸುವವರಿಗೆ ಹಾದಿ ಸುಗಮವಾಗುತ್ತದೆ. ಸಾಂಪ್ರದಾಯಕ ಕೃಷಿಯ ಜಾಗಕ್ಕೆ ವೈಜ್ಞಾನಿಕ ಕೃಷಿ ಬರಲು ಅನುಕೂಲವಾಗುತ್ತದೆ. ಇದನ್ನು ಎಲ್ಲರೂ ಗಮನಿಸಬೇಕು. ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಧಿಸಿದ್ದು ಜೆಡಿಎಸ್‌. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್‌ ಅನ್ನು ದೂರಲಾಗುತ್ತಿದೆ. ಜೆಡಿಎಸ್‌ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್‌ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜನರು ಸ್ವಾಭಿಮಾನದಿಂದ ಬದುಕಲು ಭೂಮಿ ಕೊಡಿ: ಹೋರಾಟಗಾರ ನಿರ್ವಾಣಪ್ಪ

“ಮಿತಿಗಳು, ಭಿನ್ನಮತಗಳ ನಡುವೆಯೂ ರೈತರ 25 ಸಾವಿರ ಕೋಟಿಗೂ ಮಿಗಿಲಾದ ಸಾಲ ಮನ್ನಾ ಮಾಡಿದ್ದು ಇದೇ ಕುಮಾರಸ್ವಾಮಿಯೇ ಹೊರತು ಬೇರಾರೂ ಅಲ್ಲ. ಆಗ ನನ್ನನ್ನು ಯಾರೊಬ್ಬರೂ ಬೆನ್ನುತಟ್ಟಲಿಲ್ಲ, ರೈತರಿಗೆ ನೀಡಿದ ವಚನ ಪಾಲಿಸಿ, ಅಧಿಕಾರದಿಂದ ಹೊರ ನಡೆದಾಗ ನನ್ನ ಬೆಂಬಲಕ್ಕೆ ಯಾರೂ ಬರಲಿಲ್ಲ. ಈಗ ಸುಧಾರಣೆ ಕ್ರಮಗಳನ್ನು ಸಾಧಿಸಿದಾಗಲೂ ನಾನು ಏಕಾಂಗಿ. ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ”

ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ರಾಜ್ಯಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಮುಂದಾಗಿದ್ದ ವಿವಾದಾತ್ಮಕ ಕೃಷಿ ಕಾನೂನುಗಳು ನಿನ್ನೆ ವಿಧಾನಪರಿಷತ್ತಿನಲ್ಲಿ ಬಹುಮತಪಡೆದು ಅಂಗೀಕಾರವಾಗಿದೆ.

ಇದನ್ನೂ ಓದಿ: ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ

ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಈ ಮೊದಲು ವಿರೋಧಿಸಿದ್ದ ಜೆಡಿಎಸ್ ಪಕ್ಷ ಇಂದು ಅಚ್ಚರಿಯ ರೀತಿಯಲ್ಲಿ ಬಿಜೆಪಿ ಪರವಾಗಿ ವಿಧಾನ ಪರಿಷತ್‌ನಲ್ಲಿ ಮಸೂದೆ ಪರ ಮತ ಹಾಕಿದೆ. ಇದರಿಂದ ಮಸೂದೆಯು ಕಾಯ್ದೆಯಾಗಿ ಅಂಗೀಕಾರಗೊಂಡಿದೆ.

ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಆಗಸ್ಟ್ ಅಂತ್ಯದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತವಿದ್ದ ಬಿಜೆಪಿ ಅಂಗೀಕರಿಸಿತ್ತು. ಆದರೆ ಅದೇ ಸಮಯದಲ್ಲಿ ವಿಧಾನಪರಿಷತ್‌ನಲ್ಲಿ ಆ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಈ ವಿಷಯ ತಿಳಿಯುತ್ತಿದ್ದಂತೆ ರೈತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ಪಕ್ಷವು ತನ್ನನ್ನು ಬಿಜೆಪಿಗೆ ಮಾರಿಕೊಂಡಿದೆ ಎಂದು ರೈತರು ಕಿಡಿಕಾರಿದ್ದಾರೆ. ಏಕಾಏಕಿ ಮೌರ್ಯ ಸರ್ಕಲ್ ನಲ್ಲಿ ಹೋರಾಟಗಾರರು ರಸ್ತೆತಡೆ ಆರಂಭಿಸಿ ಬಿಜೆಪಿ ಮತ್ತು ಜೆಡಿಎಸ್‌ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಸ್ತೆ ತಡೆ ಪ್ರತಿಭಟನೆ ಮುಂದುವರೆಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಹಲವು ಹೋರಾಟಗಾರರನ್ನು ಬಂಧಿಸಲಾಗಿತ್ತು.

ಭೂ ಸುಧಾರಣಾ ಕಾಯಿದೆಗೆ ಹೊಸ ತಿದ್ದುಪಡಿ ಪ್ರಕಾರ ಈಗ ಒಬ್ಬರು 450 ಎಕರೆಗೂ ಹೆಚ್ಚು ಕೃಷಿ ಭೂಮಿ ಹೊಂದಬಹುದು. ಇಂತಹ ಕರಾಳ ತಿದ್ದುಪಡಿ ತರಲು ಕಾರ್ಪೋರೇಟ್ ಗಳ ಜೊತೆ ಮಾರಿಕೊಂಡು ಶಾಮೀಲಾಗಿರುವ ಜೆಡಿಎಸ್, ಬಿಜೆಪಿಗೆ ಧಿಕ್ಕಾರ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...