Homeಕರ್ನಾಟಕಜಿಂದಾಲ್ ಕಂಪನಿಗೆ ಭೂಮಿ | ಬಿಜೆಪಿ ಸರ್ಕಾರದ ತೀರ್ಮಾನ ಜಾರಿ : ಸಚಿವ ಎಂ.ಬಿ ಪಾಟೀಲ್

ಜಿಂದಾಲ್ ಕಂಪನಿಗೆ ಭೂಮಿ | ಬಿಜೆಪಿ ಸರ್ಕಾರದ ತೀರ್ಮಾನ ಜಾರಿ : ಸಚಿವ ಎಂ.ಬಿ ಪಾಟೀಲ್

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್ ತಿಳಿಸಿದ್ಧಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ. ಆಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ,ಅದು ಅವರದ್ದೇ ಪಕ್ಷದ ಸರ್ಕಾರದ ಜೊತೆ ಆಗಿರಬೇಕು” ಎಂದು ತಿರುಗೇಟು ನೀಡಿದ್ದಾರೆ.

“ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್‌ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ” ಎಂದು ಎಂ.ಬಿ ಪಾಟೀಲ್ ವಿವರಿಸಿದ್ದಾರೆ.

“ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಹಿಂದಿನ ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರೀ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ.ಈ ಹಣ ಇಲ್ಲಿಯವರೆಗೂ ಕೆಐಎಡಿಬಿ ಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ ಅವರ ಜಾಣಮೌನ ಯಾಕೆ?” ಎಂದು ಎಂ.ಬಿ ಪಾಟೀಲ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಮುಡಾ ನಿವೇಶನ ವಿವಾದ: ಬೆನ್ನಿಗೆ ನಿಂತ ಹೈಕಮಾಂಡ್‌ ವರಿಷ್ಠರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...