Homeಮುಖಪುಟಹರಿಯಾಣ ಗಣಿಗಾರಿಕೆ ವಲಯದಲ್ಲಿ ಭೂಕುಸಿತ: 1 ಸಾವು; ಮಣ್ಣಿನಡಿಯಲ್ಲಿ ಇನ್ನೂ 20 ಜನರು

ಹರಿಯಾಣ ಗಣಿಗಾರಿಕೆ ವಲಯದಲ್ಲಿ ಭೂಕುಸಿತ: 1 ಸಾವು; ಮಣ್ಣಿನಡಿಯಲ್ಲಿ ಇನ್ನೂ 20 ಜನರು

- Advertisement -
- Advertisement -

ಹರಿಯಾಣದ ಭಿವಾನಿ ಜಿಲ್ಲೆಯ ದಾದಾಮ್ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ಒಬ್ಬರು ಸಾವನ್ನಪ್ಪಿದ್ದು ಮತ್ತು ಸುಮಾರು 15 ರಿಂದ 20 ಜನರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇಷ್ಟೇ ಅಲ್ಲದೆ ಗಣಿಗಾರಿಕೆಯಲ್ಲಿ ತೊಡಗಿದ್ದ ಸುಮಾರು 12 ವಾಹನಗಳು ಭೂಕುಸಿತದಲ್ಲಿ ಹೂತು ಹೋಗಿವೆ ಎನ್ನಲಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ಇದುವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಓರ್ವ ಮೃತದೇಹವನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

ಕೃಷಿ ಸಚಿವ ಜೆಪಿ ದಲಾಲ್ ಮತ್ತು ಎಸ್ಪಿ ಅಜಿತ್ ಸಿಂಗ್ ಶೇಖಾವತ್ ಅವರು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಘಟನಾ ಸ್ಥಳದಲ್ಲಿದ್ದಾರೆ.

“ಕೆಲವರು ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ನಿಖರವಾದ ಅಂಕಿಅಂಶಗಳನ್ನು ನೀಡಲು ಸಾಧ್ಯವಿಲ್ಲ. ವೈದ್ಯರ ತಂಡ ಆಗಮಿಸಿದೆ. ಸಾಧ್ಯವಾದಷ್ಟು ಜನರನ್ನು ಉಳಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಚಿವ ಜೆಪಿ ದಲಾಲ್ ಹೇಳಿದ್ದಾರೆ.

ಭೂಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಟ್ವಿಟರ್‌ನಲ್ಲಿ ದುರ್ಘಟನೆಗೆ ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

ಭಿವಾನಿಯಲ್ಲಿರುವ ಖಾನಕ್ ಮತ್ತು ದಾದಾಮ್ ಬೆಟ್ಟಗಳಲ್ಲಿ ದೊಡ್ಡ ಪ್ರಮಾಣದ ಗಣಿಗಾರಿಕೆ ನಡೆಸಲಾಗುತ್ತದೆ. ಹೆಚ್ಚುತ್ತಿರುವ ಮಾಲಿನ್ಯದ ಮಟ್ಟದಿಂದ ಗಣಿಗಾರಿಕೆ ಕೆಲಸವನ್ನು ಎರಡು ತಿಂಗಳ ಹಿಂದೆ ನಿಷೇಧಿಸಲಾಗಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರದೇಶದಲ್ಲಿ ಗಣಿಗಾರಿಕೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಗುರುವಾರ ಅನುಮತಿ ನೀಡಿತ್ತು. ಇದರ ಮರುದಿನ ಕೆಲಸ ಪ್ರಾರಂಭವಾಗಿತ್ತು.

ಎರಡು ತಿಂಗಳಿನಿಂದ ಗಣಿಗಳನ್ನು ಮುಚ್ಚಿದ್ದರಿಂದ ಕಟ್ಟಡ ನಿರ್ಮಾಣ ಸಾಮಗ್ರಿಗಳ ಕೊರತೆ ಉಂಟಾಗಿದೆ. ಈ ಕೊರತೆಯನ್ನು ನೀಗಿಸುವ ಸಲುವಾಗಿ ಸ್ಫೋಟಗಳನ್ನು ನಡೆಸಲಾತ್ತು, ಇದರಿಂದಾಗಿ ಭೂಕುಸಿತ ಉಂಟಾಗಿದೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ:ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...